ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಚಂಡಮಾರುತವಾಗಿ ಪರಿವರ್ತನೆಯಾಗಲಿರುವ ಪರಿಣಾಮ ರಾಜ್ಯದಲ್ಲಿ ಇನ್ನೂ 4 ದಿನ ಮಳೆ ಮುಂದುವರಿಯುವ ಸಾಧ್ಯತೆ ಇದೆ.
ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಾಮರಾಜನಗರ, ಮಂಡ್ಯ, ಮೈಸೂರು, ಚಿತ್ರದುರ್ಗ, ಬಳ್ಳಾರಿ ಹಾಗೂ ದಾವಣಗೆರೆಯಲ್ಲಿ ಗುಡುಗು, ಮಿಂಚು ಸಹಿತ ಭಾರಿ ಮಳೆ ಬೀಳಲಿದೆ. ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಉತ್ತರ ಒಳನಾಡಿನಲ್ಲೂ ಧಾರಾಕಾರವಾಗಿ ಮಳೆ ಬೀಳಲಿದೆ ಎಂದು ತಿಳಿಸಿದೆ.
ಎಲ್ಲೆಲ್ಲಿ ಎಷ್ಟು ಮಳೆ?: ಶನಿವಾರ ತುಮಕೂರಿನ ಮಧುಗಿರಿಯಲ್ಲಿ 50 ಮಿ.ಮೀ, ಉತ್ತರ ಕನ್ನಡದ ಶಿರಸಿಯಲ್ಲಿ 40 ಮಿ.ಮೀ ಮತ್ತು ಮಂಡ್ಯದ ಮಳವಳ್ಳಿಯಲ್ಲಿ 20 ಮಿ.ಮೀ ಮಳೆ ಸುರಿದಿದೆ.
ಇದನ್ನೂ ಓದಿ: ರಾಜ್ಯದ ಪ್ರಮುಖ ನಗರಗಳಲ್ಲಿನ ಪೆಟ್ರೋಲ್, ಡೀಸೆಲ್ ದರ ಹೀಗಿದೆ...