ETV Bharat / city

ಕಿತ್ತಗಾನಹಳ್ಳಿ ಕೆರೆ ಮಾಲಿನ್ಯ: ರಾಜ್ಯ ಸರ್ಕಾರಕ್ಕೆ 10 ಲಕ್ಷ ​​ರೂ. ದಂಡ ಹಾಕಿದ ಕೋರ್ಟ್​​​​​​​​​​​​​

ಕಿತ್ತಗಾನಹಳ್ಳಿ ಕೆರೆಯಲ್ಲಿ ಮಾಲಿನ್ಯ ತಡೆಯಲು ವಿಫಲವಾದ ಕಾರಣ ರಾಜ್ಯ ಸರ್ಕಾರಕ್ಕೆ 10 ಲಕ್ಷ ​​ರೂ. ಹಾಗೂ ಬೊಮ್ಮಸಂದ್ರ ಪುರಸಭೆಗೆ 5 ಲಕ್ಷ ರೂ. ದಂಡ ಪಾವತಿಸುವಂತೆ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ಆದೇಶ ನೀಡಿದೆ.

NGT
ರಾಷ್ಟ್ರೀಯ ಹಸಿರು ನ್ಯಾಯಮಂಡಳಿ
author img

By

Published : Jun 22, 2020, 1:46 PM IST

ಬೆಂಗಳೂರು/ನವದೆಹಲಿ: ಬೆಂಗಳೂರಿನ ಕಿತ್ತಗಾನಹಳ್ಳಿ ಕೆರೆಯಲ್ಲಿ ಮಾಲಿನ್ಯ ತಡೆಯಲು ವಿಫಲವಾದ ಕಾರಣ ಕರ್ನಾಟಕ ಸರ್ಕಾರ ಹಾಗೂ ಬೊಮ್ಮಸಂದ್ರ ಪುರಸಭೆಗೆ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (ಎನ್​​ಜಿಟಿ) ಒಟ್ಟು 15 ಲಕ್ಷ ರೂ.ದಂಡ ವಿಧಿಸಿದೆ.

ನಗರದ ಬೊಮ್ಮಸಂದ್ರ ವ್ಯಾಪ್ತಿಯ ಕಿತ್ತಗಾನಹಳ್ಳಿ ಕೆರೆಗೆ ಕೆಐಎಡಿಬಿ ಕೈಗಾರಿಕಾ ಪ್ರದೇಶದಿಂದ ಬರುವ ಸಂಸ್ಕರಿಸದ ಒಳಚರಂಡಿ ನೀರು ಹರಿಯುವುದನ್ನು, ಮಾಲಿನ್ಯಕಾರಕ ವಸ್ತುಗಳು ಸೇರುವುದನ್ನು ತಡೆಯುವಲ್ಲಿ ಅಧಿಕಾರಿಗಳು ವಿಫಲವಾಗಿದ್ದಾರೆ ಎಂದು ಆರೋಪಿಸಿ ಸಂಜಯ್​ ರಾವ್​ ಹಾಗೂ ಇತರರು ಎನ್​​ಜಿಟಿಗೆ ಅರ್ಜಿ ಸಲ್ಲಿಸಿದ್ದರು. ಎನ್‌ಜಿಟಿ ಅಧ್ಯಕ್ಷ ನ್ಯಾಯಮೂರ್ತಿ ಆದರ್ಶ್​ ಕುಮಾರ್ ಗೋಯೆಲ್ ನೇತೃತ್ವದ ನ್ಯಾಯಪೀಠವು ಅರ್ಜಿಯ ವಿಚಾರಣೆ ನಡೆಸಿದೆ.

ಸರ್ಕಾರ ಹಾಗೂ ಪುರಸಭೆಯ ನಿರ್ಲಕ್ಷ್ಯದಿಂದ ಜನರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದೆ ಎಂದು ಹೇಳಿರುವ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ, ರಾಜ್ಯ ಸರ್ಕಾರಕ್ಕೆ 10 ಲಕ್ಷ ​​ರೂ. ಹಾಗೂ ಬೊಮ್ಮಸಂದ್ರ ಪುರಸಭೆಗೆ 5 ಲಕ್ಷ ರೂ. ದಂಡ ಪಾವತಿಸುವಂತೆ ಆದೇಶ ನೀಡಿದೆ. ಅಲ್ಲದೇ ನಿಯಮ ಪಾಲನೆ ಮಾಡಿ, ಸಮಸ್ಯೆಗೆ ಶೀಘ್ರ ಪರಿಹಾರ ಕಂಡುಕೊಳ್ಳುವಂತೆ ಸೂಚಿಸಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.