ಬೆಂಗಳೂರು: ಕೆ.ಜಿ.ಹಳ್ಳಿ ಹಾಗೂ ಡಿ.ಜೆ.ಹಳ್ಳಿ ಗಲಭೆ ಪ್ರಕರಣ ಸಂಬಂಧಪಟ್ಟಂತೆ ಇಂದು ಬೆಳಗ್ಗೆ ಬೆಂಗಳೂರಿನ 7 ಕಡೆ ದಾಳಿ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಈ ಸಂದರ್ಭದಲ್ಲಿ ಎಸ್ಡಿಪಿಐ, ಪಿಎಫ್ಐ ಕಾರ್ಯಕರ್ತರ ಮನೆ ಹಾಗೂ ಕಚೇರಿ ಮೇಲೆ ದಾಳಿ ನಡೆಸಿದ್ದಾರೆ. ಕೆ.ಜಿ. ಹಳ್ಳಿ, ಡಿ.ಜೆ. ಹಳ್ಳಿ, ಗೋವಿಂದಪುರ ಹಾಗೂ ಥಣಿಸಂದ್ರ ಭಾಗಗಳಲ್ಲಿ ಅಧಿಕಾರಿಗಳು ದಾಳಿ ನಡೆಸಿದ್ದು, ಕೆಲ ಕಾರ್ಯಕರ್ತರ ಮನೆಯಲ್ಲಿ ಪ್ರಚೋದನಕಾರಿ ಬರಹ ಪತ್ತೆಯಾಗಿದೆ ಎಂದು ಮೂಲಗಳು ತಿಳಿಸಿವೆ.
ಬೆಳಗ್ಗೆಯಿಂದಲೇ ತೀವ್ರ ತಪಾಸಣೆ ನಡೆಸಿರುವ ಎನ್‌ಐಎ, ಸದ್ಯದಲ್ಲೇ ದಾಳಿ ಮುಕ್ತಾಯಗೊಳಿಸಲಿದೆ ಎನ್ನುವ ಮಾಹಿತಿ ಲಭಿಸಿದೆ.
ಇದನ್ನೂ ಓದಿ: ಅಸಮಾಧಾನಿತ ಸಚಿವರನ್ನು ಕರೆದು ಮಾತನಾಡುತ್ತೇನೆ: ಸಿಎಂ ಬೊಮ್ಮಾಯಿ