ಬೆಂಗಳೂರು: ನಿತ್ಯಾನಂದ ವಿರುದ್ಧದ ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸೆಷನ್ಸ್ ಕೋರ್ಟ್ ವಿಚಾರಣೆಗೆ ತಡೆ ನೀಡಿ, ದಾಖಲೆಗಳನ್ನು ಹೈಕೋರ್ಟ್ಗೆ ಸಲ್ಲಿಸುವಂತೆ ಸೂಚನೆ ನೀಡಲಾಗಿದೆ.
ಬಿಡದಿ ಧ್ಯಾನಪೀಠದ ನಿತ್ಯಾನಂದ ಸ್ವಾಮೀಜಿ ವಿರುದ್ಧದ ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಮನಗರ ಸೆಷನ್ಸ್ ನ್ಯಾಯಾಲಯದ ವಿಚಾರಣಾ ಪ್ರಕ್ರಿಯೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ರಾಮನಗರ ಕೋರ್ಟ್ ನಲ್ಲಿರುವ ಎಲ್ಲಾ ದಾಖಲೆಗಳನ್ನು ಹೈಕೋರ್ಟ್ಗೆ ಹಾಜರು ಪಡಿಸಬೇಕೆಂದು ರಿಜಿಸ್ಟ್ರಾರ್ಗೆ ಹೈಕೋರ್ಟ್ ಸೂಚಿಸಿದೆ.
ಸೆಷನ್ಸ್ ಕೋರ್ಟ್‌ನಲ್ಲಿ ನಡೆಯುತ್ತಿರುವ ಪ್ರಕರಣವನ್ನು ಬೇರೊಂದು ನ್ಯಾಯಾಲಯಕ್ಕೆ ವರ್ಗಾಯಿಸಬೇಕು ಎಂದು ಕೋರಿ ದೂರುದಾರ ಕೆ.ಲೆನಿನ್ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಜಿ.ನರೇಂದರ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಇಂದು ವಿಚಾರಣೆ ನಡೆಸಿತು. ಲೆನಿನ್ ಪರ ವಾದಿಸಿದ ವಕೀಲರು ವಿಚಾರಣೆಗೆ ನಿತ್ಯಾನಂದ ಸ್ವಾಮೀಜಿಯನ್ನು ಇಲ್ಲಿ ತನಕ ನ್ಯಾಯಾಲಯಕ್ಕೆ ಹಾಜರುಪಡಿಸಿಲ್ಲ. ಬದಲಿಗೆ ಸಾಕ್ಷಿದಾರರಿಗೆ ವಾರೆಂಟ್ ಹೊರಡಿಸಲಾಗುತ್ತಿದೆ. ವಾರೆಂಟ್ ರಿಕಾಲ್ ಮಾಡಿಕೊಳ್ಳಲು ಪ್ರಾಸಿಕ್ಯೂಟರ್ ಸಹಕರಿಸುತ್ತಿಲ್ಲ ಎಂದು ದೂರಿದರು.
ಸದ್ಯಕ್ಕೆ ವಕೀಲರ ವಾದ ಆಲಿಸಿದ ನ್ಯಾಯಲಯ, ಅಧೀನ ನ್ಯಾಯಲಯದ ವಿಚಾರಣೆಗೆ ತಡೆ ನೀಡಿ ವಿಚಾರಣೆ ಮುಂದೂಡಿದೆ.