ETV Bharat / city

ನಾಯಕತ್ವ ಬದಲಾವಣೆ ಇಲ್ಲ, ಯಾವತ್ತಿದ್ದರೂ ಬಿಎಸ್​ವೈ ನಮ್ಮ ನಾಯಕ: ರೇಣುಕಾಚಾರ್ಯ

author img

By

Published : Jul 22, 2021, 12:59 AM IST

Updated : Jul 22, 2021, 1:45 AM IST

ನಾಯಕತ್ವ ಬದಲಾವಣೆ ಇಲ್ಲ. ಯಡಿಯೂರಪ್ಪ ಯಾವತ್ತಿದ್ದರೂ ನಮ್ಮ ನಾಯಕರೇ ಎಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ತಿಳಿಸಿದ್ದಾರೆ.

bsy
bsy

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಯಾವತ್ತಿದ್ದರೂ ನಮ್ಮ ನಾಯಕರೇ, ಅವರ ಮೇಲಿನ ನಮ್ಮ ವಿಶ್ವಾಸ ಎಂದಿಗೂ ಕಡಿಮೆಯಾಗುವುದಿಲ್ಲ. ನಾಯಕತ್ವ ಬದಲಾವಣೆ ಕೇವಲ ಊಹಾಪೋಹ ಮಾತ್ರ ಎಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಹೇಳಿದ್ದಾರೆ.

ನವದೆಹಲಿಯಲ್ಲಿ ರೇಣುಕಾಚಾರ್ಯ ಹೇಳಿಕೆ
ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಲಾಗುತ್ತದೆ ಎನ್ನುವುದು ಖಚಿತವಾಗುತ್ತಿದ್ದಂತೆ ಅವರ ಪರ ಗಟ್ಟಿಯಾಗಿ ಮಾತನಾಡುವುದನ್ನು ನಿಲ್ಲಿಸಿದ್ದೇನೆ ಎನ್ನುವುದು ಸುಳ್ಳು, ಯಡಿಯೂರಪ್ಪನವರು ಕೇವಲ ರೇಣುಕಾಚಾರ್ಯರ ನಾಯಕರಲ್ಲ ನಮ್ಮೆಲ್ಲರ ನಾಯಕ ಎಂದರು.
ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಭೇಟಿಯಾದ ರೇಣುಕಾಚಾರ್ಯ

ಬದ್ಧತೆಯಿಂದ ಪಕ್ಷ ಸಂಘಟನೆ ಬಗ್ಗೆ ಇರುವ ಇಚ್ಛಾಶಕ್ತಿ ಮತ್ತು ಬಡವರ ಪರವಾಗಿ, ಎಲ್ಲಾ ವರ್ಗದ ಪರವಾಗಿ ಉತ್ತಮ ಆಡಳಿತ ಕೊಡುತ್ತಿದ್ದಾರೆ. ಹಾಗಾಗಿ ಯಡಿಯೂರಪ್ಪನವರ ಬಗ್ಗೆ ಅಪಾರವಾದ ಗೌರವ, ಪ್ರೀತಿ ವಿಶ್ವಾಸವಿದೆ. ಯಡಿಯೂರಪ್ಪ ಯಾವತ್ತೂ ನಮ್ಮ ನಾಯಕ, ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೈಬಿಡುತ್ತಾರೆ ಎಂದು ಯಾರು ಹೇಳಿದ್ದಾರೆ? ಕೇವಲ ಮಾಧ್ಯಮಗಳಲ್ಲಿ ಬರುತ್ತಿದೆ. ನಮ್ಮ ರಾಷ್ಟ್ರೀಯ ಅಧ್ಯಕ್ಷರು, ಅಮಿತ್ ಶಾ, ಅರುಣ್ ಸಿಂಗ್ ಯಾರು ಹೇಳಿದ್ದಾರೆ? ಇದುವರೆಗೂ ನಾಯಕತ್ವ ಬದಲಾವಣೆ ಇಲ್ಲ ಎಂದೇ ಎಲ್ಲರೂ ಹೇಳಿದ್ದಾರೆ. ಪಕ್ಷದ ಕೋರ್ ಕಮಿಟಿ ಸಭೆಯಲ್ಲಿಯೂ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಇದನ್ನೇ ಹೇಳಿದ್ದಾರೆ. ರಾಜ್ಯಾಧ್ಯಕ್ಷರು ಹತ್ತಾರು ಬಾರಿ ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ ಎಂದು ಹೇಳಿದ್ದಾರೆ ಎಂದು ನಾಯಕತ್ವ ಬದಲಾವಣೆ ವಿಷಯವನ್ನು ತಳ್ಳಿಹಾಕಿದರು.

ಕೇಂದ್ರ ಸಚಿವರನ್ನು ರೇಣುಕಾಚಾರ್ಯ
ಕೇಂದ್ರ ಸಚಿವರನ್ನು ಭೇಟಿಯಾದ ರೇಣುಕಾಚಾರ್ಯ

(ನಾಯಕತ್ವ ಬದಲಾವಣೆ ವಿಚಾರ: ಸಿಎಂಗಿಂತ ನಾನೇನ್ ದೊಡ್ಡವನಾ ಎಂದ ರೇಣುಕಾಚಾರ್ಯ..!)

ಕೇಂದ್ರ ಸಚಿವರ ಭೇಟಿ:
ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ನೂತನವಾಗಿ ಮೋದಿ ಸಚಿವ ಸಂಪುಟಕ್ಕೆ ಸೇರಿರುವ ಶೋಭಾ ಕರಂದ್ಲಾಜೆ, ನಾರಾಯಣಸ್ವಾಮಿ, ಖೂಬಾ ಅವರನ್ನು ಭೇಟಿ ಮಾಡಿದ್ದೇನೆ. ಹೊನ್ನಾಳಿ, ನ್ಯಾಮತಿ ಅವಳಿ ತಾಲೂಕಿನ ಅಭಿವೃದ್ಧಿ ಕಾರ್ಯಗಳು ಬಾಕಿ ಇದ್ದವು. ಅವುಗಳ ಬಗ್ಗೆ ಚರ್ಚಿಸಿದ್ದೇನೆ. ಮುಂದಿನ ವಾರ ಮತ್ತೆ ಬರುವುದಾಗಿ ಹೇಳಿದ್ದೇನೆ. ಕೆಲವು ಯೋಜನೆಗಳು ಬಾಕಿ ಉಳಿದಿವೆ. ಈಗಾಗಲೇ ರಾಜ್ಯ ಸರ್ಕಾರ ಶಿಫಾರಸು ಮಾಡಿದೆ. ಅದಕ್ಕೆ ಒಪ್ಪಿಗೆ ಕೊಡಿಸುವ ಕೆಲಸ ಮಾಡಬೇಕು ಎಂದು ಮನವಿ ಮಾಡಿದ್ದೇನೆ ಎಂದರು.

ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಭೇಟಿಯಾದ ರೇಣುಕಾಚಾರ್ಯ

ನಮ್ಮ ರಾಜ್ಯದ ಅಧ್ಯಕ್ಷರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದೇನೆ. ಪಕ್ಷದ ಸಂಘಟನೆ ಕುರಿತು ಚರ್ಚೆ ಮಾಡಿದ್ದೇನೆ. ವಿಧಾನಸಭೆ, ತಾಲೂಕು ಪಂಚಾಯತ್, ಜಿಲ್ಲಾ ಪಂಚಾಯತ್ ಚುನಾವಣೆಗಳ ಬಗ್ಗೆ ಮಾತುಕತೆ ನಡೆಸಿದ್ದೇನೆ. ಕರ್ನಾಟಕದಲ್ಲಿ ಮತ್ತೆ ಪಕ್ಷವನ್ನು ಅಧಿಕಾರಕ್ಕೆ ತರಲು ಸಂಪೂರ್ಣವಾಗಿ ಸಹಕಾರ ಕೊಡುತ್ತೇವೆ ಎಂದು ಮುಕ್ತಮನಸ್ಸಿನಿಂದ ನಾವು ಮಾತನಾಡಿದ್ದೇವೆ. ರಾಜ್ಯದ ಅಧ್ಯಕ್ಷರು ಕೂಡ ಮುಕ್ತವಾಗಿ ಮಾತನಾಡಿದ್ದಾರೆ. ಈ ಭೇಟಿಯಿಂದ ಸಂತೋಷವಾಗಿದೆ ಎಂದರು.
ಬಿಜೆಪಿ ರಾಜ್ಯಾಧ್ಯಕ್ಷರ ಜೊತೆ ರೇಣುಕಾಚಾರ್ಯ
ಬಿಜೆಪಿ ರಾಜ್ಯಾಧ್ಯಕ್ಷರ ಜೊತೆ ರೇಣುಕಾಚಾರ್ಯ
ಗುರುವಾರ ಮತ್ತೆ ಯಾವ ಸಚಿವರು ಸಿಗುತ್ತಾರೋ ನೋಡಿ ಮಾತುಕತೆ ನಡೆಸಿ ಮಧ್ಯಾಹ್ನ ಬೆಂಗಳೂರಿಗೆ ವಾಪಸ್ಸಾಗುವುದಾಗಿ ತಿಳಿಸಿದರು.
ಕೇಂದ್ರ ಸಚಿವರನ್ನು ರೇಣುಕಾಚಾರ್ಯ
ಕೇಂದ್ರ ಸಚಿವರ ಜೊತೆ ರೇಣುಕಾಚಾರ್ಯ

Last Updated : Jul 22, 2021, 1:45 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.