ಬೆಂಗಳೂರು: ಸಿಎಂ ಯಡಿಯೂರಪ್ಪ ಅವರ ಬದಲಾವಣೆಯ ಪ್ರಶ್ನೆಯೇ ಇಲ್ಲವೆಂದು ಸಚಿವ ಕೆ. ಗೋಪಾಲಯ್ಯ ಸ್ಪಷ್ಟಪಡಿಸಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ ಗೋಪಾಲಯ್ಯ, ಸಿಎಂ ಬದಲಾವಣೆ ಬಗ್ಗೆ ಯತ್ನಾಳ್ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸುತ್ತಾ, ಯಡಿಯೂರಪ್ಪ ಸಮರ್ಥವಾಗಿದ್ದಾರೆ. ಕಷ್ಟದ ಕಾಲದಲ್ಲಿ ಸರ್ಕಾರ ನಡೆಸಿಕೊಂಡು ಹೋಗ್ತಿದ್ದಾರೆ. ಅವರ ಬದಲಾವಣೆಯ ಪ್ರಶ್ನೆಯೇ ಇಲ್ಲ. ನಾವು ಅವರ ನಾಯಕತ್ವದಲ್ಲಿ ಮುನ್ನಡೆಯುತ್ತೇವೆ. ಯಡಿಯೂರಪ್ಪರೇ ಸಿಎಂ ಆಗಿ ಮುಂದುವರೆಯುತ್ತಾರೆ ಎಂದು ಸ್ಪಷ್ಟಪಡಿಸಿದರು.
ಶಾಸಕ ಯತ್ನಾಳ್ಗೆ ಏನಾದರೂ ಅಸಮಾಧಾನ ಇದ್ದರೆ ಪಕ್ಷದ ನಾಲ್ಕು ಗೋಡೆ ಮಧ್ಯೆ ಇದ್ದು ಮಾತುಕತೆಯ ಮೂಲಕ ಬಗೆಹರಿಸಿಕೊಳ್ಳಬೇಕು. ಕಳೆದ ಉಪಚುನಾವಣೆಯಲ್ಲಿ ಬಿಜೆಪಿ ಹೆಚ್ಚು ಸ್ಥಾನ ಗೆದ್ದಿದ್ದು ಯಡಿಯೂರಪ್ಪರಿಂದಲೇ. ಈಗ ಉಪಚುನಾವಣೆಗಳನ್ನು ಅವರ ನಾಯಕತ್ವದಲ್ಲೇ ಗೆಲ್ಲುತ್ತೇವೆ ಎಂದು ತಿಳಿಸಿದರು.
ಉತ್ತರ ಕರ್ನಾಟಕ ಭಾಗಕ್ಕೆ ಸಿಎಂ ಸ್ಥಾನ ಕೊಡುವ ಬಗ್ಗೆ ಪಕ್ಷದ ವರಿಷ್ಠರು ತೀರ್ಮಾನ ಮಾಡ್ತಾರೆ. ಯಡಿಯೂರಪ್ಪನವರೇ ಸಿಎಂ ಆಗಿ ಇರಲಿದ್ದಾರೆ. ಸಿಎಂ ಬದಲಾವಣೆ ಪ್ರಶ್ನೆಯೇ ಇಲ್ಲ ಎಂದರು. ಇದೇ ವೇಳೆ ಆರ್ ಆರ್ ನಗರ ಉಪಚುನಾವಣೆ ವಿಚಾರವಾಗಿ ಮಾತನಾಡಿದ ಗೋಪಾಲಯ್ಯ ಅವರು, ಬಿಜೆಪಿ ಅಭ್ಯರ್ಥಿ ಮುನಿರತ್ನ ಅವರೇ ಗೆಲ್ತಾರೆ. ಮುನಿರತ್ನ ನೂರಕ್ಕೆ ನೂರರಷ್ಟು ಗೆದ್ದೇ ಗೆಲ್ತಾರೆ. ಇದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ವಿಸ್ವಾಸ ವ್ಯಕ್ತಪಡಿಸಿದರು.