ಬೆಂಗಳೂರು : ಒಂದರಿಂದ ಒಂಬತ್ತನೇ ತರಗತಿಯ ಮಕ್ಕಳಿಗೆ ಪರೀಕ್ಷೆ ನಡೆಸದೇ ತೇರ್ಗಡೆ ಮಾಡುವ ಸಂಬಂಧ ಯಾವುದೇ ತೀರ್ಮಾನ ಕೈಗೊಂಡಿಲ್ಲ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದರು.
ಆರೋಗ್ಯ ಸಚಿವ ಸುಧಾಕರ್ ಅವರು, ಪ್ರಸಕ್ತ ಶೈಕ್ಷಣಿಕ ವರ್ಷದಲ್ಲೂ ಒಂದರಿಂದ ಒಂಬತ್ತನೆ ತರಗತಿವರೆಗೆ ಪರೀಕ್ಷೆ ಇಲ್ಲದೆ ಉತ್ತೀರ್ಣಗೊಳಿಸಲು ಸರ್ಕಾರ ನಿರ್ಧರಿಸಿದೆ. ಸಿಎಂ, ಶಿಕ್ಷಣ ಸಚಿವರು, ಗೃಹ ಸಚಿವರು, ಕಂದಾಯ ಸಚಿವರೊಂದಿಗೆ ಚರ್ಚಿಸಿ ಅಧಿಕೃತವಾಗಿ ಪ್ರಕಟಿಸಲಾಗುತ್ತದೆ ಎಂದು ತಿಳಿಸಿದ್ದರು.
ಆದ್ರೆ, ಈ ಸಂಬಂಧ ಶಿಕ್ಷಣ ಸಚಿವ ಸುರೇಶ್ ಕುಮಾರ್ ಮಾಹಿತಿ ನೀಡಿ, ಮಕ್ಕಳಿಗೆ ಪರೀಕ್ಷೆ ನಡೆಸದೇ ತೇರ್ಗಡೆ ಮಾಡುವ ಸಂಬಂಧ ಯಾವುದೇ ತೀರ್ಮಾನ ಕೈಗೊಂಡಿಲ್ಲ. ಈ ನಿಟ್ಟಿನಲ್ಲಿ ಶಿಕ್ಷಣ ಇಲಾಖೆ ಸೂಕ್ತ ನಿರ್ಧಾರ ಕೈಗೊಳ್ಳಲಿದೆ ಎಂದು ಮಾಹಿತಿ ನೀಡಿದ್ದಾರೆ.