ನವದೆಹಲಿ : ಸಂಪುಟ ವಿಸ್ತರಣೆ ಬಗ್ಗೆ ಪಕ್ಷದ ವರಿಷ್ಠರ ಜತೆ ಚರ್ಚೆಯಾಗಿಲ್ಲ. ಸುಪ್ರೀಂಕೋರ್ಟ್ ಬಿಬಿಎಂಪಿ ಹಾಗೂ ಇತರೆ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲು ಸೂಚಿಸಿರುವ ಹಿನ್ನೆಲೆಯಲ್ಲಿ ಅದರ ಬಗ್ಗೆ ಚರ್ಚೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ನವದೆಹಲಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅಮಿತ್ ಶಾ ಅವರ ಸೂಚನೆಯಂತೆ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರೊಂದಿಗೆ ಮಾತನಾಡಿ, ಕರ್ನಾಟಕ ವಿಧಾನ ಪರಿಷತ್ ಹಾಗೂ ರಾಜ್ಯಸಭಾ ಚುನಾವಣೆಗೆ ಕಳುಹಿಸಲಾಗಿರುವ ಪಟ್ಟಿಯ ಬಗ್ಗೆ ವಿವರಗಳನ್ನು ನೀಡಲಾಗಿದೆ ಎಂದರು.
ನಾಲ್ಕು ವಿಧಾನ ಪರಿಷತ್ ಸ್ಥಾನಗಳಿಗೆ ನಡೆಯುವ ಚುನಾವಣೆಗೆ ನಾಮಪತ್ರ ಸಲ್ಲಿಸಲು 24 ಕೊನೆಯ ದಿನಾಂಕವಾಗಿದೆ. ತುರ್ತಾಗಿ ನಿರ್ಣಯಗಳನ್ನು ಕೈಗೊಳ್ಳಬೇಕಿದೆ. ರಾಜ್ಯಸಭೆ ಚುನಾವಣೆಗೆ 31ರವರೆಗೆ ಸಮಯಾವಕಾಶವಿದೆ. ಕೋರ್ ಕಮಿಟಿ ಚರ್ಚೆಯ ನಿರ್ಣಯಗಳ ಬಗ್ಗೆ ಅರುಣ್ ಸಿಂಗ್ ಅವರಿಗೆ ತಿಳಿಸಲಾಗಿದೆ. ಆದಷ್ಟು ಶೀಘ್ರ ತೀರ್ಮಾನ ತೆಗೆದುಕೊಳ್ಳುವುದಾಗಿ ಹೇಳಿದ್ದಾರೆ ಎಂದರು.
ಇದನ್ನೂ ಓದಿ: ಮಧ್ಯಾಹ್ನ ದೆಹಲಿಗೆ ಸಿಎಂ : ಸಂಪುಟ ವಿಸ್ತರಣೆ, ಪರಿಷತ್, ರಾಜ್ಯಸಭೆ ಚುನಾವಣೆ ಕುರಿತು ಚರ್ಚೆ!?