ETV Bharat / city

ಯಾವುದೇ ಶಿಕ್ಷಣ ಸಂಸ್ಥೆಯಾಗಲಿ ಧಾರ್ಮಿಕ ಗ್ರಂಥ ಅಳವಡಿಕೆಗೆ ಅವಕಾಶ ಇಲ್ಲ: ಸಚಿವ ಬಿ.ಸಿ.ನಾಗೇಶ್

ಪ್ರಜಾಪ್ರಭುತ್ವದ ಅಡಿ ಶಿಕ್ಷಣ ಇಲಾಖೆ ಕ್ರಮ ತೆಗೆದುಕೊಳ್ಳುತ್ತದೆ. ಯಾವುದೇ ಬೋರ್ಡ್ ವ್ಯಾಪ್ತಿಯ ಅಲ್ಪಸಂಖ್ಯಾತರ ಶಾಲೆಯಲ್ಲಿ ಧರ್ಮದ ಬೋಧನೆ ನಿಷೇಧಿಸಲಾಗಿದೆ. ಅದಕ್ಕೆ ಅವಕಾಶ ನೀಡದಂತೆ ಶಿಕ್ಷಣ ಇಲಾಖೆ ಕ್ರಮ ಕೈಗೊಳ್ಳಲಿದೆ ಎಂದು ಸಚಿವ ಬಿ.ಸಿ.ನಾಗೇಶ್​ ಹೇಳಿದ್ದಾರೆ.

Minister B.C.Nagesh talked to Press
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಬಿ.ಸಿ.ನಾಗೇಶ್​
author img

By

Published : Apr 26, 2022, 2:10 PM IST

ಬೆಂಗಳೂರು: ನಗರದ ಕ್ಲಾರೆನ್ಸ್ ಶಾಲೆಯಲ್ಲಿ ಬೈಬಲ್ ಕಡ್ಡಾಯ ವಿಚಾರಕ್ಕೆ ಸಂಬಂಧಿಸಿದಂತೆ ಅದು ರಾಜ್ಯ ಶಿಕ್ಷಣ ಕಾಯ್ದೆಗೆ ವಿರುದ್ಧವಾಗಿದೆ. ಯಾವುದೇ ಶಿಕ್ಷಣ ಸಂಸ್ಥೆಯಾಗಲಿ ಧಾರ್ಮಿಕ ಗ್ರಂಥಗಳ ಅಳವಡಿಕೆಗೆ ಅವಕಾಶ ಇಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಖಡಕ್ ಆಗಿ ಹೇಳಿದ್ದಾರೆ. ವಿಧಾನಸೌಧದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆ ಶಾಲೆಗೆ ಶಿಕ್ಷಣ ಇಲಾಖೆಯಿಂದ ನೋಟಿಸ್ ಕೊಡುತ್ತೇವೆ ಎಂದರು.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಬಿ.ಸಿ.ನಾಗೇಶ್​

ಕ್ಲಾರೆನ್ಸ್ ಶಾಲೆಯಲ್ಲಿ ಎಲ್ಲ ಧರ್ಮದ ಮಕ್ಕಳೂ ಬರುತ್ತಾರೆ. ಪ್ರಜಾಪ್ರಭುತ್ವದ ಅಡಿ ಶಿಕ್ಷಣ ಇಲಾಖೆ ಕ್ರಮ ತೆಗೆದುಕೊಳ್ಳುತ್ತದೆ. ರಾಜ್ಯದ ಎಲ್ಲ ಕ್ರೈಸ್ತ ಶಿಕ್ಷಣ ಸಂಸ್ಥೆಗಳ ಮೇಲೆ ನಿಗಾ ಸೂಚನೆ ನೀಡಲಾಗಿದೆ. ಅದೇ ರೀತಿ ಎಲ್ಲ ಬಿಇಒಗಳಿಗೆ ಕ್ರೈಸ್ತ ಶಿಕ್ಷಣಗಳಿಗೆ ಹೋಗಿ ಪರಿಶೀಲನೆ ನಡೆಸಲು ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

ಅಡ್ಮಿಷನ್ ವೇಳೆ ಬೈಬಲ್ ಇದೆ ಒಪ್ಪಿಗೆ ಇದೆಯಾ ಅಂತ ಕೇಳುತ್ತಾರೆ. ಇಲ್ಲ ಅಂದರೆ ಅಡ್ಮಿಷನ್ ಕೊಡಲ್ಲ ಇದು ತಪ್ಪು. ಎಲ್ಲಾ ಕ್ರೈಸ್ತ ಶಿಕ್ಷಣ ಸಂಸ್ಥೆಗಳ ಪಠ್ಯ ಪರಿಶೀಲನೆಗೆ ಸೂಚನೆ ನೀಡಲಾಗಿದೆ. ‌ಪ್ರಜಾಪ್ರಭುತ್ವದ ಅಡಿ ಶಿಕ್ಷಣ ಇಲಾಖೆ ಕ್ರಮ ತೆಗೆದುಕೊಳ್ಳುತ್ತದೆ. ಯಾವುದೇ ಬೋರ್ಡ್ ವ್ಯಾಪ್ತಿಯ ಅಲ್ಪಸಂಖ್ಯಾತರ ಶಾಲೆಯಲ್ಲಿ ಧರ್ಮದ ಬೋಧನೆ ನಿಷೇಧಿಸಲಾಗಿದೆ. ಅದಕ್ಕೆ ಅವಕಾಶ ನೀಡದಂತೆ ಶಿಕ್ಷಣ ಇಲಾಖೆ ಕ್ರಮ ಕೈಗೊಳ್ಳಲಿದೆ ಎಂದು ಹೇಳಿದರು.

ಶೈಕ್ಷಣಿಕ ವರ್ಷ ಮೇ 16 ರಿಂದ: ಜೂನ್, ಜುಲೈನಲ್ಲಿ 4ನೇ ಅಲೆ ಎಂದು ಹೇಳಲಾಗುತ್ತಿದೆ. ಟಾಸ್ಕ್ ಪೋರ್ಸ್, ಆರೋಗ್ಯ ಇಲಾಖೆ ಸೂಚನೆಯನ್ನು ನಾವೂ ಪಾಲಿಸುತ್ತೇವೆ. ಶೈಕ್ಷಣಿಕ ವರ್ಷ ಮೇ 16 ರಿಂದ ಆರಂಭವಾಗುತ್ತಿದೆ. ಇದರಲ್ಲಿ‌ ಯಾವುದೇ ಬದಲಾವಣೆ ಇಲ್ಲ. ದ್ವಿತೀಯ ಪಿಯ ಪರೀಕ್ಷೆ ಸುಸೂತ್ರವಾಗಿ ನಡೆಯುತ್ತಿದೆ.‌ ಪ್ರತಿ ಬಾರಿಗಿಂತ ಈ ಬಾರಿ ಹೆಚ್ಚು ಹಾಜರಾತಿ ಇದೆ. ಎಸ್​ಎಸ್​ಎಲ್​ಸಿ ಮೌಲ್ಯಮಾಪನ ಕೂಡ ನಡೆಯುತ್ತಿದೆ ಎಂದು ವಿವರಿಸಿದರು.

ಪಠ್ಯದಲ್ಲಿ ಭಗವದ್ಗೀತೆ ಅಳವಡಿಕೆ ವೇಳೆ ಸುಡೋ ಸೆಕ್ಯೂಲರಿಸ್ಟ್​ಗಳು ಕಿರುಚಾಡಿದ್ರು. ಆದರೆ, ಕಾಂಗ್ರೆಸ್, ಜೆಡಿಎಸ್ ಇದರ ಬಗ್ಗೆ ಮಾತನಾಡಿಲ್ಲ. ಭಗವದ್ಗೀತೆಗೆ ವಿರೋಧ ಮಾಡುವವರು ಬೈಬಲ್ ವಿಚಾರದಲ್ಲಿ ಸುಮ್ಮನಿದ್ದಾರೆ ಎಂದು ಕಿಡಿಕಾರಿದರು.

ಇದನ್ನೂ ಒದಿ: ಕನ್ನಡ ಉರ್ದು, ಮರಾಠಿ, ತಮಿಳು ಯಾವುದೇ ಶಾಲೆಗಳಿದ್ದರೂ ಮುಚ್ಚೋದಿಲ್ಲ, ವಿಲೀನ ಮಾಡ್ತೇವೆ.. ಬಿ ಸಿ ನಾಗೇಶ್‌

ETV Bharat Logo

Copyright © 2024 Ushodaya Enterprises Pvt. Ltd., All Rights Reserved.