ಬೆಂಗಳೂರು: ಕೋವಿಡ್ ಹಿನ್ನೆಲೆ ತುರ್ತು ಹಾಗೂ ಅಗತ್ಯ ಸೇವೆಗಳ‌್ನು ನೀಡುವ ಬಿಬಿಎಂಪಿ ಅಧಿಕಾರಿ ಮತ್ತು ಸಿಬ್ಬಂದಿಗೆ ಶನಿವಾರದ ರಜೆಯನ್ನು ರದ್ದು ಮಾಡಲಾಗಿದೆ.
ಸರ್ಕಾರಿ ಕಚೇರಿಗಳಿಗೆ ನೀಡುತ್ತಿದ್ದ ಎರಡನೇ ಹಾಗೂ ನಾಲ್ಕನೇ ಶನಿವಾರದ ರಜೆಯನ್ನು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಅಧಿಕಾರಿ-ಸಿಬ್ಬಂದಿಗೆ ರದ್ದು ಮಾಡಲಾಗಿದೆ.

ನಾಳೆ ಹಾಗೂ ಎಲ್ಲಾ ಶನಿವಾರದಂದೂ ಕೂಡ ಎ, ಬಿ, ಸಿ, ಡಿ ವೃಂದದ ಎಲ್ಲಾ ಅಧಿಕಾರಿ, ಸಿಬ್ಬಂದಿ ಶೇಕಡಾ ನೂರರಷ್ಟು ಕರ್ತವ್ಯಕ್ಕೆ ಹಾಜರಾಗಲು ಸೂಚಿಸಲಾಗಿದೆ. ಜುಲೈ 10ರಿಂದ 8-8-2020ರವರೆಗೆ ಇದು ಅನ್ವಯವಾಗಲಿದೆ ಎಂದು ಆಯುಕ್ತ ಬಿ.ಹೆಚ್.ಅನಿಲ್ ಕುಮಾರ್ ಆದೇಶ ಹೊರಡಿಸಿದ್ದಾರೆ.