ETV Bharat / city

'ಸಿಎಂ ಆಗಿ ಬೊಮ್ಮಾಯಿ ಮುಂದುವರೆಯಲಿದ್ದಾರೆ; ನಾಯಕತ್ವ ಬದಲಾವಣೆ ಕಪೋಲಕಲ್ಪಿತ' - No leadership change in State

ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಕುರಿತು ಚರ್ಚೆಯಾಗುತ್ತಿದ್ದು, ಬಿಜೆಪಿಯ ಕೆಲವರು ನಾಯಕತ್ವ ಬದಲಾವಣೆಯಾಗುತ್ತದೆ ಎಂದು ಹೇಳಿದರೆ ಇನ್ನೂ ಕೆಲವರು ನಾಯಕತ್ವ ಬದಲಾವಣೆ ಇಲ್ಲ ಎನ್ನುತ್ತಿದ್ದಾರೆ. ಈ ಚರ್ಚೆಗೆ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಸ್ಪಷ್ಟನೆ ನೀಡಿದ್ದಾರೆ.

BJP state incharge Arun Singh
ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್
author img

By

Published : May 3, 2022, 1:07 PM IST

ಬೆಂಗಳೂರು: ರಾಜ್ಯದಲ್ಲಿ ಮತ್ತೆ ನಾಯಕತ್ವ ಬದಲಾವಣೆ ಬರೀ ಕಪೋಲಕಲ್ಪಿತವಾದ ಸುದ್ದಿಯಾಗಿದೆ. ಬೊಮ್ಮಾಯಿ ಅವರೇ ಮುಖ್ಯಮಂತ್ರಿ ಆಗಿ ಮುಂದುವರೆಯಲಿದ್ದಾರೆ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಸ್ಪಷ್ಟಪಡಿಸಿದ್ದಾರೆ.

ಮಲ್ಲೇಶ್ವರಂನಲ್ಲಿರುವ ರಾಜ್ಯ ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಕಾಮನ್ ಮ್ಯಾನ್ ಸಿಎಂ. ನರೇಂದ್ರ ಮೋದಿ ನಾಯಕತ್ವದಲ್ಲಿ ಒಳ್ಳೆಯ ಆಡಳಿತ ಕೊಡುತ್ತಿದ್ದಾರೆ. ಜನರ ಬಯಕೆ ಕೂಡ ಅವರ ಮುಂದುವರಿಕೆಯೇ ಆಗಿದೆ. ಹೀಗಾಗಿ ಕಾಲ್ಪನಿಕ ಪ್ರಶ್ನೆಗಳಿಗೆ ಉತ್ತರವಿಲ್ಲ. ನಾಯಕತ್ವ ಬದಲಾವಣೆ ಎನ್ನುವುದು ಕಪೋಲ ಕಲ್ಪಿತ ಎಂದರು.

2023ರ ಚುನಾವಣೆ ಬೊಮ್ಮಾಯಿ ನೇತೃತ್ವದಲ್ಲಿ ನಡೆಯತ್ತಾ ಎನ್ನುವ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅರುಣ್ ಸಿಂಗ್, ಅವರು ಕಾಮನ್ ಮ್ಯಾನ್, ಜನ ಮತ್ತೆ ಬೊಮ್ಮಾಯಿ ಸಿಎಂ ಆಗಲಿ ಎಂದು ಬಯಸುತ್ತಿದ್ದಾರೆ. ಅವರ ನೇತೃತ್ವದಲ್ಲೇ ಚುನಾವಣೆಗೆ ಹೋಗಬೇಕು ಎನ್ನುವುದು ಜನತೆಯ ಬಯಕೆ. ಸಚಿವ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಮುಖ್ಯಮಂತ್ರಿಗಳ ವಿವೇಚನೆಗೆ ಬಿಟ್ಟ ವಿಚಾರ. ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಜೊತೆ ಬೊಮ್ಮಾಯಿ ಚರ್ಚಿಸಬಹುದು ಎಂದು ಹೇಳಿದರು.

ಇದನ್ನೂ ಓದಿ: ಮೇ.10ರಂದು ಸಿಎಂ ಬದಲಾವಣೆ ಆಗಬಹುದು: ಯತ್ನಾಳ್ ಭವಿಷ್ಯ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.