ಬೆಂಗಳೂರು: ಬಿಜೆಪಿ ನಾಯಕತ್ವ ಬದಲಾವಣೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಮಾಜಿ ಸಚಿವ, ಶಾಸಕ ಉಮೇಶ್ ಕತ್ತಿ, ಕರ್ನಾಟಕದಲ್ಲಿ ಒಬ್ಬರು ಮುಖ್ಯಮಂತ್ರಿ ಇದ್ದಾರೆ. ಅವರೇ ಮೂರು ವರ್ಷ ಮುಂದುವರೆಯುತ್ತಾರೆ ಎಂದು ಹೇಳಿದ್ದಾರೆ.
ವಿಧಾನಸೌಧದಲ್ಲಿ ಇಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ರಾಜ್ಯದಲ್ಲಿ ಒಂದೆಡೆ ಕೊರೊನಾ, ಮತ್ತೊಂದೆಡೆ ನೆರೆ. ಇಂತಹ ಸಂದರ್ಭದಲ್ಲಿ ನಾಯಕತ್ವ ಬದಲಾವಣೆಯಿಲ್ಲ ಎಂದು ಸ್ಪಷ್ಟಪಡಿಸಿದರು. ಸಿಎಂ ಭೇಟಿ ವಿಚಾರಕ್ಕೆ ಪ್ರತಿಕ್ರಿಯಿಸಿದ ಕತ್ತಿ, ಕ್ಷೇತ್ರದ ಅಭಿವೃದ್ಧಿ ಬಗ್ಗೆ ಸಿಎಂ ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ್ದೆ ಎಂದರು.
ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ದೆಹಲಿ ಭೇಟಿ ಬಗ್ಗೆ ನನಗೆ ಗೊತ್ತಿಲ್ಲ. ಉಳಿದ ಯಾವ ವಿಚಾರವೂ ನನಗೆ ಗೊತ್ತಿಲ್ಲ ಎಂದು ಹೇಳಿದರು.