ETV Bharat / city

ರಾಜ್ಯದಲ್ಲಿ ಲೋಡ್ ಶೆಡ್ಡಿಂಗ್ ಜಾರಿ ಇಲ್ಲ, ಕಲ್ಲಿದ್ದಲು ಕೊರತೆಯೂ ಇಲ್ಲ: ಸಚಿವ ಸುನೀಲ್ ಕುಮಾರ್

ಕಲ್ಲಿದ್ದಲು ಕೊರತೆ ನಮ್ಮ ರಾಜ್ಯದಲ್ಲಿಲ್ಲ. ನಮ್ಮ ಶಾಖೋತ್ಪನ್ನ ವಿದ್ಯುತ್ ಉತ್ಪಾದನಾ ಘಟಕಗಳ ದೈನಂದಿನ ಬೇಡಿಕೆಗೆ ತಕ್ಕಂತೆ ಕಲ್ಲಿದ್ದಲು ಸರಬರಾಜಾಗುತ್ತಿದೆ. ಸದ್ಯಕ್ಕೆ ನಮಗೆ ಕಲ್ಲಿದ್ದಲು ಕೊರತೆ ಎದುರಾಗಿಲ್ಲ ಎಂದು ಸಚಿವ ಸುನೀಲ್ ಕುಮಾರ್ ಸ್ಪಷ್ಟನೆ ನೀಡಿದ್ದಾರೆ.

no-load-shedding-in-state-minister-sunil-kumar
ರಾಜ್ಯದಲ್ಲಿ ಲೋಡ್ ಶೆಡ್ಡಿಂಗ್ ಜಾರಿ ಇಲ್ಲ, ಕಲ್ಲಿದ್ದಲು ಕೊರತೆಯೂ ಇಲ್ಲ: ಸಚಿವ ಸುನೀಲ್ ಕುಮಾರ್
author img

By

Published : Mar 23, 2022, 3:00 PM IST

Updated : Mar 23, 2022, 3:12 PM IST

ಬೆಂಗಳೂರು: ರಾಜ್ಯದಲ್ಲಿ ಅಗತ್ಯಕ್ಕೆ ತಕ್ಕಂತೆ ವಿದ್ಯುತ್ ಪೂರೈಕೆ ಮಾಡಲಾಗುತ್ತಿದ್ದು, ಸದ್ಯಕ್ಕೆ ಲೋಡ್ ಶೆಡ್ಡಿಂಗ್ ಜಾರಿ ಮಾಡುವುದಿಲ್ಲ. ರಾಜ್ಯದಲ್ಲಿ ಕಲ್ಲಿದ್ದಲು ಕೊರತೆ ಸ್ಥಿತಿ ಎದುರಾಗಿಲ್ಲ ಎಂದು ಇಂಧನ ಸಚಿವ ಸುನೀಲ್ ಕುಮಾರ್ ಸ್ಪಷ್ಟಪಡಿಸಿದ್ದಾರೆ. ವಿಧಾನ ಪರಿಷತ್ ಶೂನ್ಯವೇಳೆಯಲ್ಲಿ ಸದಸ್ಯ ಹರೀಶ್ ಕುಮಾರ್ ಪ್ರಸ್ತಾಪಕ್ಕೆ ಉತ್ತರಿಸಿದ ಸಚಿವ ಸುನೀಲ್ ಕುಮಾರ್, ಕಲ್ಲಿದ್ದಲು ಕೊರತೆ ನಮ್ಮ ರಾಜ್ಯದಲ್ಲಿಲ್ಲ. ನಮ್ಮ ಶಾಖೋತ್ಪನ್ನ ವಿದ್ಯುತ್ ಉತ್ಪಾದನಾ ಘಟಕಗಳ ದೈನಂದಿನ ಬೇಡಿಕೆಗೆ ತಕ್ಕಂತೆ ಕಲ್ಲಿದ್ದಲು ಸರಬರಾಜಾಗುತ್ತಿದೆ. ಸದ್ಯಕ್ಕೆ ನಮಗೆ ಕಲ್ಲಿದ್ದಲು ಕೊರತೆ ಎದುರಾಗಿಲ್ಲ ಎಂದು ಸದನಕ್ಕೆ ತಿಳಿಸಿದರು.

ರಾಜ್ಯದಲ್ಲಿ ಲೋಡ್ ಶೆಡ್ಡಿಂಗ್ ಜಾರಿ ಮಾಡುವ ಪ್ರಸ್ತಾಪ ನಮ್ಮ ಮುಂದಿಲ್ಲ, ಅಂತಹ ಸ್ಥಿತಿ ಎದುರಾಗಿಲ್ಲ, ಬೇಡಿಕೆಗೆ ತಕ್ಕಂತೆ ವಿದ್ಯುತ್ ಪೂರೈಕೆಯಾಗುತ್ತಿದೆ. ಎಲ್ಲಿಯಾದರೂ ರೈತರಿಗೆ ವಿದ್ಯುತ್ ಪೂರೈಕೆ ಸಮಸ್ಯೆ ಆಗಿದ್ದಲ್ಲಿ ಸರಿಪಡಿಸಲಾಗುತ್ತದೆ ಎಂದು ಭರವಸೆ ನೀಡಿದರು. ಬಸವನಬಾಗೇವಾಡಿಯಲ್ಲಿ ಬಸವೇಶ್ವರ ಜಯಂತಿ ವಿಚಾರವಾಗಿ ಮಾತನಾಡಿದ ಸಚಿವರು, ಬಸವನ ಬಾಗೇವಾಡಿಯಲ್ಲಿ ರಾಜ್ಯ ಮಟ್ಟದ ಬಸವೇಶ್ವರ ಜಯಂತಿ ಆಚರಿಸಲು ಸರ್ಕಾರ ಸಿದ್ಧವಾಗಿದ್ದು, ಮಹಾಪುರುಷರ ರಾಜ್ಯಮಟ್ಟದ ಜಯಂತಿಗಳನ್ನು ಜಿಲ್ಲಾ ಕೇಂದ್ರಗಳಲ್ಲಿಯೇ ಆಚರಿಸಬೇಕು ಎಂಬ ಆದೇಶವನ್ನು ಶೀಘ್ರದಲ್ಲೇ ಹೊರಡಿಸಲಾಗುತ್ತದೆ ಎಂದು ಸ್ಪಷ್ಟನೆ ನೀಡಿದ್ದಾರೆ.

ಸಚಿವ ಸುನೀಲ್ ಕುಮಾರ್

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಅನೇಕ ಮಹಾಪುರುಷರ ಜಯಂತಿಯನ್ನು ನಿರಂತರವಾಗಿ ಆಚರಿಸಿಕೊಂಡು ಬರಲಾಗುತ್ತಿದೆ. ರಾಜ್ಯಮಟ್ಟದ ಜಯಂತಿಯನ್ನು ಬೆಂಗಳೂರಿನಲ್ಲಿ ಆಚರಿಸಿಕೊಂಡು ಬರಲಾಗುತ್ತಿದೆ. ಎಲ್ಲಾ ಜಯಂತಿಗಳನ್ನು ಮೊದಲ ವರ್ಷ ಬೆಂಗಳೂರಿನಲ್ಲಿ ಆಚರಿಸಿ, ನಂತರ ಆಯಾ ಸಂದರ್ಭಕ್ಕೆ ತಕ್ಕಂತೆ ಬೇರೆ ಬೇರೆ ಜಿಲ್ಲೆಗಳಲ್ಲಿ ಆರಂಭಿಸಬೇಕು ಎನ್ನುವ ಚಿಂತನೆ ಮಾಡಲಾಗಿದೆ ಎಂದರು.

ಇದನ್ನೂ ಓದಿ: ಬೆಲೆ ಏರಿಕೆ ವಿರುದ್ಧ ಹೋರಾಟ ಮಾಡುತ್ತೇವೆ: ವಿಪಕ್ಷ ನಾಯಕ ಸಿದ್ದರಾಮಯ್ಯ

Last Updated : Mar 23, 2022, 3:12 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.