ETV Bharat / city

ನಾಳೆ ಲಾಕ್​ಡೌನ್​ ಇರಲ್ಲ: ರಾಜ್ಯದ ಜನತೆಗೆ ಸಿಹಿ ಸುದ್ದಿ ನೀಡಿದ ಸರ್ಕಾರ - ಸಂಡೇ ಲಾಕ್​ಡೌನ್​ ನಿರ್ಧಾರ ರದ್ದು

ಜನಸಾಮಾನ್ಯರ ಹಿತದೃಷ್ಟಿಯಿಂದ ಸಂಡೇ ಲಾಕ್​ಡೌನ್​ ನಿರ್ಧಾರವನ್ನು ಸರ್ಕಾರ ಕೈಬಿಟ್ಟಿದ್ದು, ಈ ಕುರಿತು ಮುಖ್ಯಮಂತ್ರಿ ಕಚೇರಿ ಮಾಹಿತಿ ನೀಡಿದೆ.

vidhanasoudha
ವಿಧಾನಸೌಧ
author img

By

Published : May 30, 2020, 12:33 PM IST

ಬೆಂಗಳೂರು: ರಾಜ್ಯದ ಜನತೆಗೆ ಸರ್ಕಾರ ಸಿಹಿ ಸುದ್ದಿ ನೀಡಿದೆ. ಈ ಭಾನುವಾರ ಸಂಪೂರ್ಣ ಲಾಕ್​ಡೌನ್​ ಇರಲ್ಲವೆಂದು ಮುಖ್ಯಮಂತ್ರಿ ಕಚೇರಿ ಮಾಹಿತಿ ನೀಡಿದೆ.

ಜನಸಾಮಾನ್ಯರ ಹಿತದೃಷ್ಟಿಯಿಂದ ಸರ್ಕಾರವು ಈ ನಿರ್ಧಾರ ತೆಗೆದುಕೊಂಡಿದೆ. ನಾಳೆ ರಾಜ್ಯದಲ್ಲಿ ಎಂದಿನಂತೆ ದೈನಂದಿನ ಕಾರ್ಯಚಟುವಟಿಕೆಗಳು ನಡೆಯಲಿವೆ.

ಕಳೆದ ವಾರ ಸಂಡೆಯಂದು ಕರ್ಫ್ಯೂ ವಿಧಿಸಲಾಗಿತ್ತು. ಇದರಿಂದ ಜನರು ಹಲವು ತೊಂದರೆಗಳನ್ನು ಅನುಭವಿಸುವಂತಾಗಿತ್ತು. ಭಾನುವಾರ ಸಂಪೂರ್ಣ ಲಾಕ್​ಡೌನ್​ ಎಂದು ಆದೇಶ ಹೊರಡಿಸಿದ್ದಕ್ಕೆ ಯಾವುದೇ ವಾಹನ ಸಂಚಾರ ಇರಲಿಲ್ಲ. ವ್ಯಾಪಾರ-ವಹಿವಾಟುಗಳು ಸಹ ಬಂದ್​ ಆಗಿದ್ದವು. ಈ ಪರಿಸ್ಥಿತಿ ಮರುಕಳಿಸದಿರಲಿ ಎಂಬ ಉದ್ದೇಶದಿಂದ ಸರ್ಕಾರ ಸಂಡೇ ಲಾಕ್​ಡೌನ್​ ಅದೇಶವನ್ನು ಕೈಬಿಟ್ಟಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.