ಬೆಂಗಳೂರು: ಕೊರೊನಾ ಟಾಸ್ಕ್ ಫೋರ್ಸ್ ಸಭೆಯಲ್ಲಿ ಲಾಕ್ಡೌನ್ ಮಾಡುವ ಕುರಿತು ಚರ್ಚೆ ನಡೆದಿಲ್ಲ. ಹೀಗಾಗಿ ಮತ್ತೆ ಲಾಕ್ಡೌನ್ ಪ್ರಶ್ನೆಯೇ ಇಲ್ಲ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದರು.
ಇಂದು ವಿಧಾನಸೌಧದಲ್ಲಿ ನಡೆದ ಟಾಸ್ಕ್ ಫೋರ್ಸ್ ಸಭೆ ಬಳಿಕ ಸುದ್ದಿಗಾರರರೊಂದಿಗೆ ಮಾತನಾಡಿದ ಅವರು, ಈಗಿರುವ ಕೊರೊನಾ ರೋಗಿಗಳಿಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ಮತ್ತಷ್ಟು ಅನುಕೂಲ ಮಾಡಿಕೊಡುವ ಕುರಿತು ಚರ್ಚೆಯಾಗಿದೆ ಎಂದು ಹೇಳಿದರು.
ಬಳ್ಳಾರಿಯಲ್ಲಿ ನಡೆಸಿರುವ ಟೆಸ್ಟ್ ಮಾದರಿಯಲ್ಲಿ ಇಲ್ಲೂ ಟೆಸ್ಟ್ ಮಾಡಿಸುವ ಬಗ್ಗೆ ಸಮನ್ವಯತೆ, ಖಾಸಗಿ ಕಾಲೇಜ್, ಖಾಸಗಿ ಆಸ್ಪತ್ರೆಗಳನ್ನು ಬಳಸಿಕೊಳ್ಳುವ ಕುರಿತು ಸಭೆಯಲ್ಲಿ ಚರ್ಚೆ ಆಗಿದೆ ಎಂದು ಹೇಳಿದರು.