ETV Bharat / city

ರಾಜ್ಯದಲ್ಲಿ ಯಾವುದೇ ಲಾಕ್​ಡೌನ್, ಕರ್ಫ್ಯೂ ಇಲ್ಲ: ಸರ್ಕಾರದ ಮುಖ್ಯ ಕಾರ್ಯದರ್ಶಿ

ಕೋವಿಡ್​ ಎರಡನೇ ಅಲೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಯಾವುದೇ ಲಾಕ್ ಡೌನ್ ಅಥವಾ ಕರ್ಫ್ಯೂ ಇಲ್ಲ. ಆದರೆ, ಕೊರೊನಾ ಸೋಂಕು ತಡೆಗೆ ಮತ್ತಷ್ಟು ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿಕುಮಾರ್ ತಿಳಿಸಿದರು.

author img

By

Published : Apr 2, 2021, 4:11 PM IST

Updated : Apr 2, 2021, 4:41 PM IST

no-lockdown-in-karnataka-state
ಲಾಕ್​ಡೌನ್

ಬೆಂಗಳೂರು: ರಾಜ್ಯದಲ್ಲಿ ಯಾವುದೇ ಲಾಕ್ ಡೌನ್ ಅಥವಾ ಕರ್ಫ್ಯೂ ಇಲ್ಲ. ಆದರೆ, ಕೊರೊನಾ ಸೋಂಕು ತಡೆಗೆ ಮತ್ತಷ್ಟು ಕಠಿಣ ಕ್ರಮಗಳನ್ನು ಕೈಗೊಳ್ಳುತ್ತೇವೆ ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿಕುಮಾರ್ ಹೇಳಿದ್ದಾರೆ.

ಕ್ಯಾಬಿನೆಟ್ ಕಾರ್ಯದರ್ಶಿಗಳ ಸಭೆ ಬಳಿಕ ವಿಕಾಸಸೌಧದಲ್ಲಿ ಇಂದು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಕೊರೊನಾ ಸೋಂಕು ಹೆಚ್ಚಳ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ. ಮಹಾರಾಷ್ಟ್ರ, ಪಂಜಾಬ್‌ನಲ್ಲಿ ಸಾವಿನ ಸಂಖ್ಯೆ ಹೆಚ್ಚಾಗಿದೆ. ಹೀಗಾಗಿ ಸೋಂಕು ತಡೆಗೆ ನಿಗಾವಹಿಸಬೇಕೆಂದು ಸಲಹೆ ನೀಡುವುದರ ಜೊತೆಗೆ ಕೋವಿಡ್ ನಿಯಮಗಳ ಬಿಗಿ ಪಾಲನೆಗೆ ಕೇಂದ್ರದ ಕ್ಯಾಬಿನೆಟ್ ಕಾರ್ಯದರ್ಶಿ ಸೂಚಿಸಿದ್ದಾರೆ ಎಂದರು.

ಮುಖ್ಯ ಕಾರ್ಯದರ್ಶಿ ರವಿಕುಮಾರ್

ಜನ ಹೆಚ್ಚು ಇರುವ ಕಡೆ ಲಸಿಕೆ ಹಾಕಿಸಲು ಕ್ರ‌ಮ

ಕೇಂದ್ರದ ಕ್ಯಾಬಿನೆಟ್ ಕಾರ್ಯದರ್ಶಿ ಅವರು ಕೆಲವು ಸಲಹೆ ಕೊಟ್ಡಿದಾರೆ. ಮಾಸ್ಕ್, ಸಾಮಾಜಿಕ ಅಂತರ, ನಿಯಮಗಳ ಬಿಗಿ ಪಾಲನೆಗೆ ಸೂಚಿಸಿದ್ದಾರೆ. ಲಸಿಕೆ ಹೆಚ್ಚಿಸಲು ಸೂಚಿಸಲಾಗಿದ್ದು, ಲಸಿಕೆ ಹಾಕಿಸಿಕೊಳ್ಳಲು ಆಸಕ್ತಿ ತೋರದ ಕಾರಣ ನಾವೇ ಮನೆ ಬಾಗಿಲಿಗೆ ಹೋಗಿ ಲಸಿಕೆ ಹಾಕುವ ಸ್ಥಿತಿ ಇದೆ. ಹೀಗಾಗಿ ಜನ ಹೆಚ್ಚು ಇರುವ ಕಡೆ ಲಸಿಕೆ ಹಾಕಿಸಲು ಕ್ರ‌ಮ ತೆಗೆದುಕೊಳ್ಳುತ್ತೇವೆ. ಸದ್ಯ ಲಸಿಕೆಯನ್ನು ಹೆಚ್ಚಿಗೆ ಮಾಡುತ್ತೇವೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಬೆಡ್ ತುಂಬಿರುವ ಕಾರಣ ಖಾಸಗಿ‌ ಆಸ್ಪತ್ರೆಗಳಲ್ಲಿ ಶೇ. 20 ರಷ್ಟು ಬೆಡ್ ಮೀಸಲಿಡಲು ಸೂಚಿಸಿದ್ದೇವೆ ಎಂದು ಹೇಳಿದರು.

ಕೊರೊನಾ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ ಕ್ರಮಗಳ ಪಾಲನೆಗೆ ಸೂಕ್ತ ಕ್ರಮ ಕೈಗೊಳ್ಳಲಾಗಿದೆ‌. ಕಡ್ಡಾಯ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಅತಿ ಮುಖ್ಯವಾಗಿದೆ ಎಂದು ಹೇಳಿದರು. ಬೆಂಗಳೂರು, ಮೈಸೂರು, ಕಲಬುರ್ಗಿ, ಬೀದರ್ ಸೇರಿ ಹಲವು ಕಡೆ ಸೋಂಕು ಹೆಚ್ಚಳವಾಗುತ್ತಿದೆ. ಈಗಾಗಲೇ ಜಾತ್ರೆ, ಧಾರ್ಮಿಕ ಉತ್ಸವಗಳನ್ನು ನಿಯಂತ್ರಿಸಿದ್ದೇವೆ ಎಂದು ತಿಳಿಸಿದರು.

ಕೊರೊನಾ ಸೋಂಕು ಹೆಚ್ಚಳ ಹಿನ್ನೆಲೆಯಲ್ಲಿ 6 ನೇ ತರಗತಿಯಿಂದ 9 ನೇ ತರಗತಿವರೆಗೆ ಶಾಲೆಗಳನ್ನು ಭೌತಿಕವಾಗಿ ನಡೆಸದಿರಲು ನಿರ್ಧರಿಸಲಾಗಿದೆ. ಜನ ಹೆಚ್ಚು ಇರುವ ಕಡೆ ಲಸಿಕೆ ಹಾಕುವುದು. ಕೈಗಾರಿಕೆ, ಐಟಿ ಸಂಸ್ಥೆಗಳಿಗೆ ಹೋಗಿ ಲಸಿಕೆ ಹಾಕಿಸಲು ಜಾಗೃತಿ ಮೂಡಿಸಲು ಕ್ರಮ ವಹಿಸಲಾಗುತ್ತದೆ ಎಂದರು.

ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ:

ದೇಶದಲ್ಲಿ ಕೊರೊನಾ ಹೆಚ್ಚಳ ಹಿನ್ನೆಲೆಯಲ್ಲಿ ಕೇಂದ್ರದ ಕ್ಯಾಬಿನೆಟ್ ಕಾರ್ಯದರ್ಶಿಗಳ ಸಭೆ ಇಂದು ನಡೆದಿದ್ದು, ಈ ಸಭೆಯಲ್ಲಿ ರಾಜ್ಯದ ಪರವಾಗಿ ಮುಖ್ಯ ಕಾರ್ಯದರ್ಶಿ ರವಿಕುಮಾರ್ ಭಾಗಿಯಾಗಿದ್ದರು. ಸಭೆಯಲ್ಲಿ ರಾಜ್ಯದ ಪರಿಸ್ಥಿತಿ ಕುರಿತು ವಿವರಣೆ ನೀಡಿದ್ದಾರೆ. ರಾಜ್ಯದಲ್ಲಿ ಇನ್ನಷ್ಟು ಕಠಿಣ ಕ್ರಮಗಳ‌ ಅಗತ್ಯವಿದೆ. ಲಸಿಕೆ ಅಭಿಯಾನ ವನ್ನು ಇನ್ನೂ ಚುರುಕುಗೊಳಿಸುವ ಅಗತ್ಯ ಇದೆ. ಲಸಿಕೆ ಹಾಕಿಸಿಕೊಳ್ಳುವಲ್ಲಿ ರಾಜ್ಯ ಸರ್ಕಾರ ಎಲ್ಲ ಜಾಗೃತಿ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ಕೇಂದ್ರದ ಕ್ಯಾಬಿನೆಟ್ ಕಾರ್ಯದರ್ಶಿಗೆ ರಾಜ್ಯದ ಮುಖ್ಯ ಕಾರ್ಯದರ್ಶಿಗಳು ವಿವರ ನೀಡಿದ್ದಾರೆ.

ಕೊರೊನಾ ಪೀಡಿತರ ಸಂಖ್ಯೆ ಮತ್ತು ಗುಣಮುಖರಾಗುವ ರೋಗಿಗಳ ಸರಾಸರಿ ವಿವರ ಸಲ್ಲಿಕೆ ಮಾಡಿರುವ ಅವರು, ನೆರೆಯ ಮಹಾರಾಷ್ಟ್ರಕ್ಕೆ ಹೋಲಿಸಿದರೆ ಕರ್ನಾಟಕದ ಸ್ಥಿತಿ ಉತ್ತಮವಾಗಿದೆ. ವಾಣಿಜ್ಯ ಚಟುವಟಿಕೆಗಳನ್ನು ರಾಜ್ಯದಲ್ಲಿ ನಿಯಂತ್ರಿಸುವ ಅಗತ್ಯ ಇಲ್ಲ. ಅದರ ಬದಲಾಗಿ ಜನಸಂದಣಿಗೆ ಬ್ರೇಕ್ ಹಾಕಲೇಬೇಕಾದ ಅಗತ್ಯ ಇದೆ ಎಂದು ವಿವರಿಸಿದ್ದಾರೆ.

Last Updated : Apr 2, 2021, 4:41 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.