ETV Bharat / city

ನಮ್ಮ ಪಕ್ಷದಿಂದ ಯಾರೂ ಓಡಿ ಹೋಗುವುದಿಲ್ಲ: ಹೆಚ್.ಡಿ.ದೇವೇಗೌಡ - ಹೆಚ್.ಡಿ.ದೇವೇಗೌಡ

ಜಿ.ಟಿ. ದೇವೇಗೌಡರು ಕ್ಷೇತ್ರದ ಕೆಲಸಕ್ಕೆ ಹೋಗಿದ್ದಾಗಿ ಹೇಳಿದ್ದಾರೆ. ನೆಲಮಂಗಲ ಶಾಸಕ ಶ್ರೀನಿವಾಸಮೂರ್ತಿ ಪಕ್ಷ ತೊರೆದು ಪರಮೇಶ್ವರ್ ಅವರಿಗೆ ಕ್ಷೇತ್ರ ಬಿಟ್ಟು ಕೊಡುತ್ತಾರೆ ಎಂಬ ವದಂತಿ ಹಬ್ಬಿದೆ. ಯಾರೂ ಸಹ ಪಕ್ಷ ಬಿಟ್ಟು ಹೋಗುವುದಿಲ್ಲವೆಂದು ಹೆಚ್.ಡಿ.ದೇವೇಗೌಡರು ಹೇಳಿದರು.

ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ
author img

By

Published : Sep 14, 2019, 8:07 PM IST

ಬೆಂಗಳೂರು: ಮಾಜಿ ಸಚಿವ ಜಿ.ಟಿ. ದೇವೇಗೌಡರು ಕ್ಷೇತ್ರದ ಕೆಲಸಕ್ಕೆ ಹೋಗಿದ್ದಾಗಿ ಹೇಳಿದ್ದಾರೆ, ನಮ್ಮ ಪಕ್ಷದಿಂದ ಯಾರೂ ಓಡಿ ಹೋಗುವುದಿಲ್ಲ ಎಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರು ಹೇಳಿದರು.

ಪಕ್ಷದ ಕಚೇರಿ ಜೆಪಿ ಭವನದಲ್ಲಿ ಇಂದು ನೆಲಮಂಗಲ ವಿಧಾನಸಭಾ ಕ್ಷೇತ್ರದ ಮುಖಂಡರು, ಕಾರ್ಯಕರ್ತರ ಜೊತೆ ಸಭೆ ನಡೆಸಿ, ನಂತರ ಸುದ್ದಿಗಾರರೊಂದಿಗೆ ಮಾತನಾಡಿ ದೇವೇಗೌಡರು, ಕೆಲವು ಸನ್ನಿವೇಶಗಳಲ್ಲಿ ನಾಯಕರು ಮಾತನಾಡಿರುವುದನ್ನು ಮಾಧ್ಯಮಗಳು ಹೆಚ್ಚು ಪ್ರಕಾಶಮಾನವಾಗಿ ಬಿತ್ತರಿಸುತ್ತಿವೆ. ಸಾ.ರಾ. ಮಹೇಶ್ ಹಾಗೂ ಜಿ.ಟಿ. ದೇವೇಗೌಡರ ನಡುವೆ ಸ್ವಲ್ಪ ಭಿನ್ನಾಭಿಪ್ರಾಯ ಇರಬಹುದು, ಅಷ್ಟು ಮಾತ್ರಕ್ಕೆ ಪಕ್ಷ ಬಿಡುತ್ತಾರೆ ಎನ್ನುವುದು ಸರಿಯಲ್ಲ. ಅದೇ ರೀತಿ ನೆಲಮಂಗಲ ಶಾಸಕ ಶ್ರೀನಿವಾಸಮೂರ್ತಿ ಅವರು ಪಕ್ಷ ತೊರೆದು ಪರಮೇಶ್ವರ್ ಅವರಿಗೆ ಕ್ಷೇತ್ರ ಬಿಟ್ಟು ಕೊಡುತ್ತಾರೆ ಎಂಬ ವದಂತಿ ಹಬ್ಬಿದೆ. ಯಾರೂ ಸಹ ಪಕ್ಷ ಬಿಟ್ಟು ಹೋಗುವುದಿಲ್ಲವೆಂದು ಸ್ಪಷ್ಟಪಡಿಸಿದರು.

ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ

ಚುನಾವಣೆ ಯಾವಾಗ ಬೇಕಾದರೂ ಬರಬಹುದು, ಹಾಗಾಗಿ ಎಲ್ಲ ಜಿಲ್ಲೆಯ ಪದಾಧಿಕಾರಿಗಳ ಒಂದು ಸುತ್ತಿನ ಸಭೆ ನಡೆಸಲಾಗಿದೆ. ಸೆ.16 ರಿಂದ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಕೆ. ಕುಮಾರಸ್ವಾಮಿ ನೇತೃತ್ವದಲ್ಲಿ ರಾಜ್ಯದ ಎಲ್ಲ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷದ ಕಾರ್ಯಕರ್ತರ ಸಂಘಟನೆ ಎಷ್ಟರಮಟ್ಟಿಗೆ ಇದೆ ಎಂಬುದನ್ನು ತಿಳಿಯಲು ಸಭೆ ನಡೆಯಲಿದೆ. ನಂತರ ತಂಡಗಳನ್ನು ರಚಿಸಿ ಎಲ್ಲ ಜಿಲ್ಲೆಗಳಿಗೂ ಪ್ರವಾಸ ಮಾಡಿ ಪಕ್ಷ ಸಂಘಟನೆ ಮಾಡುವುದಾಗಿ ಹೇಳಿದರು.

ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅವರು ಮೊನ್ನೆ, ನಿನ್ನೆ ಸಭೆ ನಡೆಸಿದ್ದಾರೆ, ನಮ್ಮ ರಾಜ್ಯದವರು ಹೋಗಿದ್ದಾರೆ. ಮಹಾರಾಷ್ಟ್ರ, ಗುಜರಾತ್, ಜಾರ್ಖಂಡ್ ಸೇರಿದಂತೆ ನಾಲ್ಕು ರಾಜ್ಯಗಳ ಚುನಾವಣೆ ನಡೆಯಲಿದೆ. ನಮ್ಮ ರಾಜ್ಯದಲ್ಲೂ ಬಂದರೂ ಬರಬಹುದು. ಬಿಜೆಪಿ ಹೈಕಮಾಂಡ್ ಅಭಿಪ್ರಾಯ ಗೊತ್ತಾಗುತ್ತಿಲ್ಲ. ಇನ್ನು ಅನರ್ಹ ಶಾಸಕರ ಬಗ್ಗೆ ಆಸಕ್ತಿ ಇಲ್ಲ, ಹಾಗಾಗಿ ಚುನಾವಣೆ ಮಾಡಬಹುದು ಎಂಬ ಭಾವನೆ ಇದೆ. ನಿಖರವಾಗಿ ಗೊತ್ತಿಲ್ಲ, ನಾವು ಸಹ ಸಿದ್ದತೆಮಾಡಿಕೊಳ್ಳುತ್ತಿದ್ದೇವೆ ಎಂದರು.

ಕೇಂದ್ರದ ವಿರುದ್ಧ ವಾಗ್ದಾಳಿ:

ಕೇಂದ್ರದ ಮಾಜಿ ಹಣಕಾಸು ಸಚಿವ ಚಿದಂಬರಂ ಅವರಿಗೆ ಈಗ ಏನಾಗಿದೆ? ಎಲ್ಲ ತನಿಖಾ ಸಂಸ್ಥೆಗಳನ್ನು ಕೇಂದ್ರ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ವಾಗ್ದಾಳಿ ನಡೆಸಿದ ದೇವೇಗೌಡರು, ಸಾಮೂಹಿಕವಾಗಿ ಇಡೀ ರಾಷ್ಟ್ರದಲ್ಲಿ ಪ್ರಾದೇಶಿಕ ಪಕ್ಷಗಳು ಹಾಗೂ ಕಾಂಗ್ರೆಸ್ ಪಕ್ಷವನ್ನು ಕೇಂದ್ರ ತುಳಿಯಲು ಪ್ರಯತ್ನಿಸುತ್ತಿದೆ ಎಂದು ಟೀಕಿಸಿದರು.

ಡಿ ಕೆ ಶಿವಕುಮಾರ್ ಪರ ಒಕ್ಕಲಿಗ ಸಮುದಾಯ ನಡೆಸಿದ ಪ್ರತಿಭಟನೆಯಲ್ಲಿ ಕುಮಾರಸ್ವಾಮಿ ಅವರು ಗೈರಾದುದರ ಬಗ್ಗೆ ಪ್ರತಿಕ್ರಿಯಿಸಿದ ಗೌಡರು, ಅನ್ಯತಾ ಭಾವಿಸೋದು ಬೇಡ. ವಿಚಾರಣೆಗೆ ದೆಹಲಿಗೆ ತೆರಳುವ ಮುನ್ನ ಡಿ ಕೆ ಶಿವಕುಮಾರ್ ನನ್ನ ಮನೆಗೆ ಬಂದಿದ್ರು, ಧೈರ್ಯ ಹೇಳಿ ಕಳಿಸಿಕೊಟ್ಟೆ. ಪ್ರತಿಭಟನೆಯ ಹಿಂದಿನ ದಿನ ರಾತ್ರಿ ನನ್ನ ಮನೆಗೆ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಟಿ.ಎ. ನಾರಾಯಣಗೌಡ ಬಂದಿದ್ರು. ನಾನು ಮಾಜಿ ಪ್ರಧಾನಿಯಾಗಿ ಪ್ರತಿಭಟನೆಯಲ್ಲಿ ಭಾಗವಹಿಸಲಾಗಲ್ಲ, ನನ್ನ ಪಕ್ಷದ ಶಾಸಕರು, ಮುಖಂಡರು ಕಾರ್ಯಕರ್ತರನ್ನು ಕಳಿಸುವುದಾಗಿ ಹೇಳಿದ್ದೆ. ಅದರಂತೆ ನಮ್ಮ ಪಕ್ಷದ ಮುಖಂಡರು ಭಾಗವಹಿಸಿದ್ದರು. ಕುಮಾರಸ್ವಾಮಿ ಅವರು, ಶಿವಕುಮಾರ್ ಊರಿಗೆ ತೆರಳಿ, ಅವರ ಮನೆಯಲ್ಲಿ ಡಿಕೆಶಿ ತಾಯಿಯವರನ್ನು ಭೇಟಿಯಾಗಿ ಧೈರ್ಯ ಹೇಳಿ ಬಂದಿದ್ದಾರೆ. ಭಯದಿಂದ ಕುಮಾರಸ್ವಾಮಿ ಪ್ರತಿಭಟನೆಯಲ್ಲಿ ಭಾಗವಹಿಸಿಲ್ಲ ಎಂಬ ಭಾವ ಬೇಡ ಎಂದು ಸ್ಪಷ್ಟಪಡಿಸಿದರು.

ಕುಮಾರಸ್ವಾಮಿ ವಿರುದ್ಧ ಕಾಂಗ್ರೆಸ್ ಮುಖಂಡ ಚಲುವರಾಯಸ್ವಾಮಿ ಆರೋಪ ವಿಚಾರಕ್ಕೆ ಪ್ರತಿಕ್ರಿಯಿಸಿದ ದೇವೇಗೌಡರು, ಅವರು ಪಕ್ಷ ಬಿಟ್ಟು 7 ವರ್ಷಗಳಾಗಿವೆ. ಅವರ ಹೇಳಿಕೆಗಳಿಗೆ ಪ್ರತಿಕ್ರಿಯೆ ನೀಡಲ್ಲ ಎಂದರು.

Intro:ಬೆಂಗಳೂರು : ನಮ್ಮ ಪಕ್ಷದಿಂದ ಯಾರೂ ಓಡಿ ಹೋಗುವುದಿಲ್ಲ ಎಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರು ಹೇಳಿದ್ದಾರೆ. Body:ಪಕ್ಷದ ಕಚೇರಿ ಜೆಪಿ ಭವನದಲ್ಲಿಇಂದು ನೆಲಮಂಗಲ ವಿಧಾನಸಭಾ ಕ್ಷೇತ್ರದ ಮುಖಂಡರು, ಕಾರ್ಯಕರ್ತರ ಸಭೆ ನಡೆಸಿದ ನಂತರ ಸುದ್ದಿಗಾರರ ಜೊತೆ ಮಾತನಾಡಿ ಗೌಡರು, ಕೆಲವು ಸನ್ನಿವೇಶಗಳಲ್ಲಿ ನಾಯಕರು ಮಾತನಾಡಿರುವುದನ್ನು ಮಾಧ್ಯಮಗಳು ಹೆಚ್ಚು ಪ್ರಕಾಶಮಾನವಾಗಿ ಭಿತ್ತರಿಸುತ್ತಿವೆ. ಮಾಜಿ ಸಚಿವ ಜಿ.ಟಿ. ದೇವೇಗೌಡರು ಕ್ಷೇತ್ರದ ಕೆಲಸಕ್ಕೆ ಹೋಗಿದ್ದಾಗಿ ಹೇಳಿದ್ದಾರೆ ಎಂದರು.
ಸಾ.ರಾ. ಮಹೇಶ್ ಹಾಗೂ ಜಿ.ಟಿ. ದೇವೇಗೌಡರ ನಡುವೆ ಸ್ವಲ್ಪ ಭಿನ್ನಾಭಿಪ್ರಾಯ ಇರಬಹುದು. ಅಷ್ಟು ಮಾತ್ರಕ್ಕೆ ಪಕ್ಷ ಬಿಡುತ್ತಾರೆ ಎನ್ನುವುದು ಸರಿಯಲ್ಲ. ಅದೇ ರೀತಿ ನೆಲಮಂಗಲ ಶಾಸಕ ಶ್ರೀನಿವಾಸಮೂರ್ತಿ ಅವರು ಪಕ್ಷ ತೊರೆದು ಪರಮೇಶ್ವರ್ ಅವರಿಗೆ ಕ್ಷೇತ್ರ ಬಿಟ್ಟು ಕೊಡುತ್ತಾರೆ ಎಂಬ ವದಂತಿ ಹಬ್ಬಿದೆ. ಯಾರೂ ಸಹ ಪಕ್ಷ ಬಿಟ್ಟು ಹೋಗುವುದಿಲ್ಲವೆಂದು ಸ್ಪಷ್ಟಪಡಿಸಿದರು.
ಚುನಾವಣೆ ಯಾವಾಗ ಬೇಕಾದರೂ ಬರಬಹುದು. ಹಾಗಾಗಿ, ಎಲ್ಲ ಜಿಲ್ಲೆಯ ಪದಾಧಿಕಾರಿಗಳ ಒಂದು ಸುತ್ತಿನ ಸಭೆ ನಡೆಸಲಾಗಿದೆ. ಸೆ.16 ರಿಂದ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಕೆ. ಕುಮಾರಸ್ವಾಮಿ ನೇತೃತ್ವದಲ್ಲಿ ರಾಜ್ಯದ ಎಲ್ಲ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷದ ಕಾರ್ಯಕರ್ತರ ಸಂಘಟನೆ ಎಷ್ಟರಮಟ್ಟಿಗೆ ಇದೆ ಎಂಬುದನ್ನು ತಿಳಿಯಲು ಸಭೆ ನಡೆಯಲಿದೆ. ನಂತರ ತಂಡಗಳನ್ನು ರಚಿಸಿ ಎಲ್ಲ ಜಿಲ್ಲೆಗಳಿಗೂ ಪ್ರವಾಸ ಮಾಡಿ ಪಕ್ಷ ಸಂಘಟನೆ ಮಾಡುವುದಾಗಿ ಹೇಳಿದರು.
ಚುನಾವಣೆ ಯಾವಾಗ ಬೇಕಾದರೂ ಬರಲಿ. ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂದಿ ಅವರು ಮೊನ್ನೆ, ನಿನ್ನೆ ಸಭೆ ನಡೆಸಿದ್ದಾರೆ. ನಮ್ಮ ರಾಜ್ಯದವರು ಹೋಗಿದ್ದಾರೆ. ಮಹಾರಾಷ್ಟ್ರ, ಗುಜರಾತ್, ಜಾರ್ಖಂಡ್ ಸೇರಿದಂತೆ ನಾಲ್ಕು ರಾಜ್ಯಗಳ ಚುನಾವಣೆ ನಡೆಯಲಿದೆ. ನಮ್ಮ ರಾಜ್ಯದಲ್ಲೂ ಬಂದರೂ ಬರಬಹುದು. ಬಿಜೆಪಿ ಹೈಕಮಾಂಡ್ ಅಭಿಪ್ರಾಯ ಗೊತ್ತಾಗುತ್ತಿಲ್ಲ. ಇನ್ನು ಅನರ್ಹ ಶಾಸಕರ ಬಗ್ಗೆ ಆಸಕ್ತಿ ಇಲ್ಲ. ಹಾಗಾಗಿ, ಚುನಾವಣೆ ಮಾಡಬಹುದು ಎಂಬ ಭಾವನೆ ಇದೆ. ನಿಖರವಾಗಿ ಗೊತ್ತಿಲ್ಲ. ನಾವು ಸಹ ಸಿದ್ದತೆಮಾಡಿಕೊಳ್ಳುತ್ತಿದ್ದೇವೆ ಎಂದರು.
ಕೇಂದ್ರದ ಮೇಲೆ ವಾಗ್ದಾಳಿ : ಕೇಂದ್ರದ ಮಾಜಿ ಹಣಕಾಸು ಸಚಿವ ಚಿದಂಬರಂ ಅವರಿಗೆ ಈಗ ಏನಾಗಿದೆ. ಎಲ್ಲ ತನಿಖಾ ಸಂಸ್ಥೆಗಳನ್ನು ಕೇಂದ್ರ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ವಾಗ್ದಾಳಿ ನಡೆಸಿದ ದೇವೇಗೌಡರು, ಸಾಮೂಹಿಕವಾಗಿ ಇಡೀ ರಾಷ್ಟ್ರದಲ್ಲಿ ಪ್ರಾದೇಶಿಕ ಪಕ್ಷಗಳು ಹಾಗೂ ಕಾಂಗ್ರೆಸ್ ಪಕ್ಷವನ್ನು ಕೇಂದ್ರ ತುಳಿಯಲು ಪ್ರಯತ್ನಿಸುತ್ತಿದೆ ಎಂದು ಟೀಕಿಸಿದರು.
ಡಿಕೆ ಶಿವಕುಮಾರ್ ಪರ ಒಕ್ಕಲಿಗ ಸಮುದಾಯ ನಡೆಸಿದ ಪ್ರತಿಭಟನೆಯಲ್ಲಿ ಕುಮಾರಸ್ವಾಮಿ ಅವರು ಗೈರಾದುದರ ಬಗ್ಗೆ ಪ್ರತಿಕ್ರಿಯಿಸಿದ ಗೌಡರು, ಅನ್ಯತಾ ಭಾವಿಸೋದು ಬೇಡ. ವಿಚಾರಣೆಗೆ ದೆಹಲಿಗೆ ತೆರಳುವ ಮುನ್ನ ಡಿಕೆ ಶಿವಕುಮಾರ್ ನನ್ನ ಮನೆಗೆ ಬಂದಿದ್ರು. ಧೈರ್ಯ ಹೇಳಿ ಕಳಿಸಿಕೊಟ್ಟೆ. ಪ್ರತಿಭಟನೆಯ ಮುನ್ನಾ ದಿನ ರಾತ್ರಿ ನನ್ನ ಮನೆಗೆ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಟಿ.ಎ. ನಾರಾಯಣಗೌಡ ಬಂದಿದ್ರು. ನಾನು ಮಾಜಿ ಪ್ರಧಾನಿಯಾಗಿ ಪ್ರತಿಭಟನೆಯಲ್ಲಿ ಭಾಗವಹಿಸಲಾಗಲ್ಲ. ನನ್ನ ಪಕ್ಷದ ಶಾಸಕರು, ಮುಖಂಡರು ಕಾರ್ಯಕರ್ತರನ್ನು ಕಳಿಸುವುದಾಗಿ ಹೇಳಿದ್ದೆ. ಅದರಂತೆ ನಮ್ಮ ಪಕ್ಷದ ಮುಖಂಡರು ಭಾಗವಹಿಸಿದ್ದರು. ಕುಮಾರಸ್ವಾಮಿ ಅವರು, ಶಿವಕುಮಾರ್ ಊರಿಗೆ ತೆರಳಿ, ಅವರ ಮನೆಯಲ್ಲಿ ಡಿಕೆಶಿ ತಾಯಿಯವರನ್ನು ಭೇಟಿಯಾಗಿ ಧೈರ್ಯ ಹೇಳಿ ಬಂದಿದ್ದಾರೆ. ಭಯದಿಂದ ಕುಮಾರಸ್ವಾಮಿ ಪ್ರತಿಭಟನೆಯಲ್ಲಿ ಭಾಗವಹಿಸಿಲ್ಲ ಎಂಬ ಭಾವ ಬೇಡ ಎಂದು ಸ್ಪಷ್ಟಪಡಿಸಿದರು.
ಕುಮಾರಸ್ವಾಮಿ ವಿರುದ್ಧ ಕಾಂಗ್ರೆಸ್ ಮುಖಂಡ ಚಲುವರಾಯಸ್ವಾಮಿ ಆರೋಪ ವಿಚಾರಕ್ಕೆ ಪ್ರತಿಕ್ರಿಯಿಸಿದ ದೇವೇಗೌಡರು, ಅವರು ಪಕ್ಷ ಬಿಟ್ಟು 7 ವರ್ಷಗಳಾಗಿವೆ. ಅವರ ಹೇಳಿಕೆಗಳಿಗೆ ಪ್ರತಿಕ್ರಿಯೆ ನೀಡಲ್ಲ ಎಂದರು.

Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.