ETV Bharat / city

ಲೈಂಗಿಕ ಕಿರುಕುಳ ಆರೋಪದಡಿ ಪ್ರೊಫೆಸರ್​ ಅಮಾನತು.. ನೋಟಿಸ್ ರದ್ದುಪಡಿಸಿದ ನಿರ್ಧಾರಕ್ಕೆ ತಡೆಯಾಜ್ಞೆ

ಲೈಂಗಿಕ ಕಿರುಕುಳ ಆರೋಪಕ್ಕೆ ಸಂಬಂಧಿಸಿದಂತೆ ಪ್ರಾಧ್ಯಾಪಕ ಡಾ. ಯು. ಅರಬಿ ಎಂಬವರನ್ನು ಸೇವೆಯಿಂದ ವಜಾಗೊಳಿಸುವ ಕುರಿತಂತೆ ಜಾರಿ ಮಾಡಿದ್ದ ಶೋಕಾಸ್ ನೋಟಿಸ್ ರದ್ದುಪಡಿಸಿದ್ದ ಹೈಕೋರ್ಟ್ ಏಕ ಸದಸ್ಯ ಪೀಠದ ಆದೇಶಕ್ಕೆ ವಿಭಾಗೀಯ ಪೀಠ ತಡೆಯಾಜ್ಞೆ ನೀಡಿದೆ.

author img

By

Published : Mar 21, 2022, 10:44 PM IST

notice-to-professor-on-sexual-harassment
ಲೈಂಗಿಕ ಕಿರುಕುಳ ಆರೋಪದಡಿ ಪ್ರಾಧ್ಯಾಪಕನಿಗೆ ನೋಟಿಸ್: ತಡೆಯಾಜ್ಞೆ ನೀಡಿದ ಹೈಕೋರ್ಟ್

ಬೆಂಗಳೂರು: ಮಂಗಳೂರು ವಿಶ್ವವಿದ್ಯಾಲಯವು ಲೈಂಗಿಕ ಕಿರುಕುಳ ಆರೋಪಕ್ಕೆ ಸಂಬಂಧಿಸಿದಂತೆ ಪ್ರಾಧ್ಯಾಪಕ ಡಾ. ಯು. ಅರಬಿ ಎಂಬವರನ್ನು ಸೇವೆಯಿಂದ ವಜಾಗೊಳಿಸುವ ಕುರಿತಂತೆ ಜಾರಿ ಮಾಡಿದ್ದ ಶೋಕಾಸ್ ನೋಟಿಸ್ ರದ್ದುಪಡಿಸಿದ್ದ ಹೈಕೋರ್ಟ್ ಏಕ ಸದಸ್ಯ ಪೀಠದ ಆದೇಶಕ್ಕೆ ವಿಭಾಗೀಯ ಪೀಠ ತಡೆಯಾಜ್ಞೆ ನೀಡಿದೆ.

ಮಂಗಳೂರು ವಿವಿ ಸಲ್ಲಿಸಿರುವ ಮೇಲ್ಮನವಿ ವಿಚಾರಣೆ ನಡೆಸಿದ ನ್ಯಾ. ಅಲೋಕ್ ಅರಾಧೆ ಮತ್ತು ನ್ಯಾ. ಎಸ್. ವಿಶ್ವಜಿತ್ ಶೆಟ್ಟಿ ಅವರಿದ್ದ ವಿಭಾಗೀಯ ಪೀಠ ಈ ಆದೇಶ ನೀಡಿದೆ. ವಿಶ್ವವಿದ್ಯಾಲಯದಲ್ಲಿ ಅರ್ಥಶಾಸ್ತ್ರ ಪ್ರಾಧ್ಯಾಪಕರಾಗಿರುವ ಡಾ. ಯು. ಅರಬಿ ವಿರುದ್ಧ ವಿದ್ಯಾರ್ಥಿನಿ ಲೈಂಗಿಕ ಕಿರಕುಳದ ಆರೋಪ ಮಾಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅರಬಿ ಉತ್ತರಿಸಿದ್ದರೂ, ತೃಪ್ತಿಯಾಗದ ವಿವಿ ‘ಉದ್ಯೋಗದ ಸ್ಥಳದಲ್ಲಿ ಮಹಿಳೆಯರ ಮೇಲಿನ ಲೈಂಗಿಕ ಕಿರುಕುಳ (ನಿಯಂತ್ರಣ, ನಿಷೇಧ ಮತ್ತು ಪರಿಹಾರ) ಕಾಯ್ದೆ ಅಡಿ ವಿಚಾರಣೆ ನಡೆಸಲು ಆಂತರಿಕ ದೂರುಗಳ ಸಮಿತಿ ರಚಿಸಿತ್ತು.

ಈ ಪ್ರಕರಣದ ಕುರಿತು ವಿಚಾರಣೆ ನಡೆಸಿದ್ದ ಸಮಿತಿ, ಅರಬಿ ಅವರನ್ನು ಪ್ರಕರಣದಲ್ಲಿ ದೋಷಿ ಎಂದು ತಿಳಿಸಿತ್ತು. ಇದನ್ನು ಒಪ್ಪಿದ್ದ ವಿವಿಯ ಸಿಂಡಿಕೇಟ್, ಅರಬಿ ಅವರನ್ನು ಸೇವೆಯಿಂದ ವಜಾಗೊಳಿಸುವ ಪ್ರಸ್ತಾವನೆಯನ್ನು ಅಂಗೀಕರಿಸಿತ್ತು. ಹಾಗೆಯೇ, ಆರೋಪಿ ಪ್ರಾಧ್ಯಾಪಕರನ್ನು ಅಮಾನತ್ತಿನಲ್ಲಿಟ್ಟು, ಸೇವೆಯಿಂದ ವಜಾಗೊಳಿಸುವ ಪ್ರಸ್ತಾವನೆಗೆ ವಿವರಣೆ ಕೇಳಿ ಎರಡನೇ ಶೋಕಾಸ್ ನೋಟಿಸ್ ನೀಡಿತ್ತು. ಆ ಬಳಿಕ ಡಾ. ಅರಬಿ ಎರಡನೇ ಶೋಕಾಸ್ ನೋಟಿಸ್ ಪ್ರಶ್ನಿಸಿ ಹೈಕೋರ್ಟ್‌ ಗೆ ಅರ್ಜಿ ಸಲ್ಲಿಸಿದ್ದರು. ಸೇವಾ ನಿಯಮಗಳಡಿ ಯಾವುದೇ ವಿಚಾರಣೆ ನಡೆಸದೆ ಸೇವೆಯಿಂದ ವಜಾಗೊಳಿಸುವ ಪ್ರಸ್ತಾವನೆ ಅಂಗೀಕರಿಸಿರುವುದು ನಿಯಮಬಾಹಿರ ಎಂದು ಅರಬಿ ದೂರಿದ್ದರು.

ಈ ಬಗ್ಗೆ ಅರ್ಜಿ ವಿಚಾರಣೆ ನಡೆಸಿದ್ದ ಏಕಸದಸ್ಯ ಪೀಠ, ಉದ್ಯೋಗದ ಸ್ಥಳದಲ್ಲಿನ ಲೈಂಗಿಕ ಕಿರುಕುಳ ಪ್ರಕರಣಗಳಿಗೆ ಸಂಬಂಧಿಸಿದಂತೆ ಉದ್ಯೋಗಿಯನ್ನು ಸೇವೆಯಿಂದ ವಜಾ ಮಾಡುವಂತ ಕಠಿಣ ನಿರ್ಧಾರಗಳನ್ನು ಕೈಗೊಳ್ಳುವಾಗ ಉದ್ಯೋಗದಾತರು ಸೇವಾ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಅಭಿಪ್ರಾಯಪಟ್ಟು, ಶೋಕಾಸ್ ನೋಟಿಸ್ ರದ್ದುಪಡಿಸಿತ್ತು. ಅಲ್ಲದೇ, ಆಂತರಿಕ ವಿಚಾರಣಾ ಸಮಿತಿ ವರದಿ ಆಧರಿಸಿ ಅರಬಿ ವಿರುದ್ಧ ದಂಡನಾ ಕ್ರಮ ಜರುಗಿಸಬಾರದು. ಆದರೆ, ವಿವಿ ಸೇವಾ ನಿಯಮದಡಿ ವಿಚಾರಣೆ ನಡೆಸಬಹುದು ಎಂದು ಆದೇಶಿಸಿತ್ತು.

ಈ ಆದೇಶ ರದ್ದು ಕೋರಿ ಮಂಗಳೂರು ವಿವಿ ಮೇಲ್ಮನವಿ ಸಲ್ಲಿಸಿತ್ತು. ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ ವಿಭಾಗೀಯ ಪೀಠ ಏಕ ಸದಸ್ಯ ಪೀಠದ ಆದೇಶಕ್ಕೆ ಮುಂದಿನ ವಿಚಾರಣೆವರೆಗೂ ತಡೆಯಾಜ್ಞೆ ನೀಡಿದೆ.

ಓದಿ : ಚೀನಾದಲ್ಲಿ ಪತನಗೊಂಡ ವಿಮಾನದಲ್ಲಿ ವಿದೇಶಿ ಪ್ರಜೆಗಳಿಲ್ಲ: ವರದಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.