ETV Bharat / city

Govt school ಸೀಟ್​ಗಾಗಿ ಅಧಿಕಾರಿಗಳು, ರಾಜಕಾರಣಿಗಳು ಫೋನ್ ಮಾಡ್ತಾರೆ: ಶಿಕ್ಷಣ ಸಚಿವ - ಭೌತಿಕ ತರಗತಿ ನಡೆಸುವ ವಿಚಾರ

ಅನೇಕ ಸಚಿವ ಸಂಪುಟ ಸದಸ್ಯರು ಕರೆ ಮಾಡಿ ಸರಕಾರಿ ಪಬ್ಲಿಕ್ ಶಾಲೆಯಲ್ಲಿ ಒಂದು ಸೀಟ್ ನೀಡುವಂತೆ ಮನವಿ ಮಾಡುತ್ತಿದ್ದಾರೆ. ಐಎಎಸ್ ಅಧಿಕಾರಿಗಳೂ ಸಹ ಕರೆ ಮಾಡಿ ಸೀಟ್ ನೀಡುವಂತೆ ಮನವಿ ಮಾಡುತ್ತಿದ್ದಾರೆ ಇದು ಅತ್ಯಂತ ಸ್ವಾಗತಾರ್ಹ ವಿಚಾರವಾಗಿದೆ. ಎಲ್ಲ ಶಾಲೆಗಳಲ್ಲಿ ಸೆಕ್ಷನ್ ಹೆಚ್ಚು ಮಾಡಲು ತೀರ್ಮಾನ ಮಾಡಲಾಗಿದೆ ಎಂದು ಎಸ್. ಸುರೇಶ್ ಕುಮಾರ್ ತಿಳಿಸಿದರು.

officials-and-politicians-asking-for-govt-school-seat
ಶಿಕ್ಷಣ ಸಚಿವ
author img

By

Published : Jul 17, 2021, 6:29 PM IST

ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಪ್ರಮಾಣ ಹೆಚ್ಚಾಗಿದೆ ಮತ್ತು ಪಬ್ಲಿಕ್ ಶಾಲೆಯಲ್ಲಿ ಸೀಟ್​ಗಾಗಿ ಐಎಎಸ್ ಅಧಿಕಾರಿಗಳು ಫೋನ್​ ಮಾಡಿ ಮನವಿ ಮಾಡುತ್ತಿರುವುದು ಸ್ವಾಗತಾರ್ಹ ವಿಚಾರವಾಗಿದೆ ಎಂದು ಎಸ್. ಸುರೇಶ್ ಕುಮಾರ್ ಹೇಳಿದರು.

ಜುಲೈ 19 ರಂದು ರಾಜ್ಯದಲ್ಲಿ ಎಸ್​ಎಸ್​ಎಲ್​ಸಿ ಪರೀಕ್ಷೆ ನಡೆಯಲ್ಲಿದ್ದು, ಪರೀಕ್ಷಾ ತಯಾರಿ ಬಗ್ಗೆ ಪರಿಶೀಲನೆ ನಡೆಸಲು ಪರೀಕ್ಷಾ ಕೇಂದ್ರಗಳಿಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಭೇಟಿ ನೀಡುತ್ತಿದ್ದಾರೆ. ಇಂದು ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ, ಕೊಂಗಾಡಿಯಪ್ಪ, ನಳಂದ, ಮತ್ತು ಸರಕಾರಿ ಪದವಿ ಪೂರ್ವ ಕಾಲೇಜು ಪ್ರೌಢ ಶಿಕ್ಷಣ ವಿಭಾಗಕ್ಕೆ ಭೇಟಿ ನೀಡಿದರು.

ಸರ್ಕಾರಿ ಶಾಲೆಗಳ ಸೀಟ್​ಗಾಗಿ ಅಧಿಕಾರಿಗಳು, ರಾಜಕಾರಣಿಗಳು ಫೋನ್​ ಮಾಡ್ತಾರೆ

ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿದ ನಂತರ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಹೆಚ್ಚಾಗಿರುವ ಬಗ್ಗೆ ಮಾತನಾಡಿದ ಅವರು, ಅನೇಕ ಸಚಿವ ಸಂಪುಟ ಸದಸ್ಯರು ಕರೆ ಮಾಡಿ ಸರಕಾರಿ ಪಬ್ಲಿಕ್ ಶಾಲೆಯಲ್ಲಿ ಒಂದು ಸೀಟ್ ನೀಡುವಂತೆ ಮನವಿ ಮಾಡುತ್ತಿದ್ದಾರೆ. ಐಎಎಸ್ ಅಧಿಕಾರಿಗಳು ಕರೆ ಮಾಡಿ ಸೀಟ್ ನೀಡುವಂತೆ ಮನವಿ ಮಾಡುತ್ತಿದ್ದಾರೆ ಇದು ಅತ್ಯಂತ ಸ್ವಾಗತಾರ್ಹ ವಿಚಾರವಾಗಿದೆ. ಎಲ್ಲಾ ಶಾಲೆಗಳಲ್ಲಿ ಸೆಕ್ಷನ್ ಹೆಚ್ಚು ಮಾಡಲು ತೀರ್ಮಾನ ಮಾಡಲಾಗಿದೆ ಎಂದರು.

ಇನ್ನು ಭೌತಿಕ ತರಗತಿ ನಡೆಸುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ತಜ್ಞರು, ಪೋಷಕರು ಮತ್ತು ಶಾಲಾ ಶಿಕ್ಷಕರನ್ನು ಸೇರಿ ಮೊದಲ ಮೀಟಿಂಗ್ ಮಾಡಲಾಗಿದೆ. ಆರೋಗ್ಯ ಇಲಾಖೆಯ ಸಹಮತಿ ಕೇಳುತ್ತಿದ್ದೇವೆ. ಶಾಲೆಗಳನ್ನು ಯಾವಾಗ ಪ್ರಾರಂಭ ಮಾಡಬೇಕು ಯಾವ ರೀತಿ ಮಾಡಬೇಕು ಎಂದು ಅಕ್ಟೋಬರ್ ಮೊದಲ ವಾರದಲ್ಲಿ ತೀರ್ಮಾನ ಮಾಡಲಾಗುತ್ತದೆ. ಕಮಿಟಿಯಲ್ಲಿ ಖಾಸಗಿ ಶಾಲೆಯವರು ಕೂಡ ಜೊತೆಯಲ್ಲಿ ಇದ್ದರು ಎಂದು ಮಾಹಿತಿ ನೀಡಿದರು.

19 ಮತ್ತು 22ರಂದು ಎಸ್​ಎಸ್​ಎಲ್​ಸಿ ಪರೀಕ್ಷೆ

ರಾಜ್ಯದಲ್ಲಿ 19 ಮತ್ತು 22 ರಂದು ಪರೀಕ್ಷೆ ಮಾಡಲಿದ್ದೇವೆ. ಕಳೆದ ಬಾರಿಗಿಂತ ಈ ಬಾರಿ ಪರೀಕ್ಷಾ ಕೇಂದ್ರ ಮತ್ತು ಕೊಠಡಿಗಳ ಸಂಖ್ಯೆ ಹೆಚ್ಚಳ ಮಾಡಿದ್ದೇವೆ. ಕಳೆದ ಬಾರಿ 76 ಸಾವಿರ ಪರೀಕ್ಷಾ ಸಿಬ್ಬಂದಿ ನಿಯೋಜನೆ ಮಾಡಲಾಗಿತ್ತು. ಈ ಬಾರಿ 1 ಲಕ್ಷದ 19 ಸಾವಿರ ಜನರ ನಿಯೋಜನೆ ಮಾಡಲಾಗಿದೆ. ಕಳೆದ ಬಾರಿ ಪರೀಕ್ಷೆ ಮಾಡಿದಾಗ ರಾಜ್ಯದಲ್ಲಿ ಕೊರೊನಾ ಸೊಂಕಿತರ ಸಂಖ್ಯೆ 13.5 ರಷ್ಟಿತ್ತು, ಈಗ 1.6 ರಷ್ಟಿದೆ. ಈ ಬಾರಿ ರಾಜ್ಯದಲ್ಲಿ 8 ಲಕ್ಷ 76 ಸಾವಿರ ಮಕ್ಕಳು ಯಶಸ್ವಿಯಾಗಿ ಪರೀಕ್ಷೆ ಬರೆಯಲಿದ್ದಾರೆ ಎಂದರು.

ಶಿಕ್ಷಕರ ವರ್ಗಾವಣೆ 72 ಸಾವಿರ ಶಿಕ್ಷಕರ ಅರ್ಜಿ

3 ತಿಂಗಳಲ್ಲಿ ನಡೆಯಬೇಕಿದ್ದ ಶಿಕ್ಷಕರ ವರ್ಗಾವಣೆ 7 ತಿಂಗಳವರೆಗೂ ನಡೆಯುತ್ತಿದೆ ಎಂಬ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಸಚಿವರು, ಶಿಕ್ಷಕರ ವರ್ಗಾವಣೆಯನ್ನ ಮೂರು ಹಂತದಲ್ಲಿ ಮಾಡುತ್ತಿದ್ದೇವೆ. ವರ್ಗಾವಣೆಗಾಗಿ 72 ಸಾವಿರ ಶಿಕ್ಷಕರು ಅರ್ಜಿ ಸಲ್ಲಿಸಿದ್ದಾರೆ. ಹೊಸದಾಗಿ ಅರ್ಜಿ ಸಲ್ಲಿಸಲು ಕೂಡ ಅವಕಾಶ ನೀಡಿದ್ದೇವೆ ಎಂದರು.

ಹಾಲ್ ಟಿಕೆಟ್ ವಿಚಾರಕ್ಕೆ ಮಾತನಾಡಿದ ಅವರು ರಾಜ್ಯದಲ್ಲಿ ಒಟ್ಟು 14,929 ಶಾಲೆಗಳ ವಿದ್ಯಾರ್ಥಿಗಳು ಪರೀಕ್ಷೆಗೆ ಕುಳಿತುಕೊಂಡಿದ್ದಾರೆ. ಎಲ್ಲೆಲ್ಲಿ ಸಮಸ್ಯೆ ಇದೆ ಅಲ್ಲಿ ಬಿಇಒ ನೇತೃತ್ವದಲ್ಲಿ ಸಮಸ್ಯೆ ಬಗೆಹರಿಸಿಕೊಳ್ಳುವಂತೆ ಸಲಹೆ ನೀಡಲಾಗಿದೆ, ವಲಸೆ ವಿದ್ಯಾರ್ಥಿಗಳಿಗೆ ಯಾರಿಗಾದರೂ ಸಮಸ್ಯೆ ಇದ್ದರೆ ಬಿಇಒ ಸಂಪರ್ಕಿಸಿ ಪರಿಹಾರ ಕಂಡುಕೊಳ್ಳಬೇಕು, ಈ ಎಲ್ಲ ಶಾಲೆಯ ವಿದ್ಯಾರ್ಥಿಗಳು ಹಾಲ್ ಟಿಕೆಟ್ ಡೋನ್ ಲೋಡ್ ಮಾಡಿಕೊಂಡಿದ್ದಾರೆಂದು ಹೇಳಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.