ಬೆಂಗಳೂರು:ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಸಂಬಂಧ ಇದೇ ಫೆಬ್ರವರಿ 13ರಂದು ಕರ್ನಾಟಕ ಬಂದ್ಗೆ ಕನ್ನಡಪರ ಸಂಘಟನೆಗಳು ಕರೆ ನೀಡಿವೆ. ಈ ಹಿನ್ನೆಲೆಯಲ್ಲಿ ಓಲಾ,ಉಬರ್,ಆಟೋ ಹಾಗೂ ಟ್ಯಾಕ್ಸಿಗಳು ಬೆಳಗ್ಗೆ 6 ರಿಂದ ಸಂಜೆ 6ರವರೆಗೆ ಬಂದ್ ಆಗಲಿದೆ.
ಕರ್ನಾಟಕದಲ್ಲಿ ಕನ್ನಡಿಗರ ಉದ್ಯೋಗಕ್ಕಾಗಿ ಸರೋಜಿನಿ ಮಹಿಷಿ ವರದಿ ಅನುಷ್ಠಾನಕ್ಕೆ ಒತ್ತಾಯಿಸಿ ಕನ್ನಡಪರ ಸಂಘಟನೆಗಳು ನಡೆಸುತ್ತಿರುವ ಪ್ರತಿಭಟನೆ ಫೆಬ್ರವರಿ 13ಕ್ಕೆ 100ನೇ ದಿನಕ್ಕೆ ಕಾಲಿಡಲಿದೆ. ಹಾಗಾಗಿ ಫೆಬ್ರವರಿ 13ಕ್ಕೆ ಕನ್ನಡಪರ ಸಂಘಟನೆಗಳು ಕರ್ನಾಟಕ ಬಂದ್ಗೆ ಕರೆ ನೀಡಿವೆ. ಹೀಗಾಗಿ, ಅಂದು ಓಲಾ, ಉಬರ್ ಚಾಲಕರ ಸಂಘದ ಪದಾಧಿಕಾರಿಗಳೊಂದಿಗೆ ಮತ್ತು ಆದರ್ಶ ಆಟೋ ಯೂನಿಯನ್, ಪೀಸ್ ಆಟೋ ಯೂನಿಯನ್ ಸೇರಿ ಹಲವು ಆಟೋ ಸಂಘಟನೆಗಳು ಬಂದ್ಗೆ ಬೆಂಬಲ ನೀಡಿವೆ.
ಹೀಗಾಗಿ, ಬೆಳಗ್ಗೆ 6 ಗಂಟೆಯಿಂದ ಸಂಜೆ 6ರವರೆಗೂ ಇವುಗಳ ಸೇವೆ ಇರುವುದಿಲ್ಲ ಎಂದು ಓಲಾ,ಉಬರ್ ಸಂಘದ ಅಧ್ಯಕ್ಷ ತನ್ವೀರ್ ಪಾಷ ತಿಳಿಸಿದ್ದಾರೆ.