ಬೆಂಗಳೂರು: ದಕ್ಷಿಣ ಆಫಿಕ್ರಾದಿಂದ ಬಂದು ಒಮಿಕ್ರಾನ್ ಸೋಂಕು ದೃಢಪಟ್ಟಿದ್ದ 34 ವರ್ಷ ವಯಸ್ಸಿನ ವ್ಯಕ್ತಿ ಗುಣಮುಖರಾಗಿದ್ದು, ಇಂದು ಬಿಡುಗಡೆಯಾಗಲಿದ್ದಾರೆ. ಬೌರಿಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ, ಸೋಂಕಿತ ಡಿ.1 ರಂದು ದಕ್ಷಿಣ ಆಫ್ರಿಕಾದಿಂದ ಆರ್ಟಿ-ಪಿಸಿಆರ್ ನೆಗೆಟಿವ್ (RT-PCR Negative) ವರದಿಯೊಂದಿಗೆ ಪ್ರಯಾಣಿಸಿದ್ದರು. ಅದೇ ದಿನ ಬೆಂಗಳೂರಿನ ವಿಮಾನ ನಿಲ್ದಾಣದಲ್ಲಿ ಪರೀಕ್ಷಿಸಿದಾಗ ನೆಗೆಟಿವ್ ವರದಿ ನೀಡಲಾಗಿತ್ತು.
ಆದರೆ ಮನೆಗೆ ತಲುಪಿದ ಮರು ದಿನ ರೋಗ ಲಕ್ಷಣಗಳು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸ್ವಯಂಪ್ರೇರಿತರಾಗಿ ಲ್ಯಾಬ್ಗೆ ಹೋಗಿ ಗಂಟಲು ದ್ರವ ನೀಡಿ ಬಂದಿದ್ದರು. ಈ ವೇಳೆ ಕೋವಿಡ್ ಪಾಸಿಟಿವ್ ದೃಢಪಟ್ಟಿತ್ತು. ಹೈರಿಸ್ಕ್ ದೇಶದಿಂದ ಬಂದ ಹಿನ್ನೆಲೆ ಸ್ಯಾಂಪಲ್ಸ್ನ್ನು ಜಿನೋಮಿಕ್ ಸೀಕ್ವೆನ್ಸಿಂಗ್ಗೆ ಕಳುಹಿಸಲಾಗಿತ್ತು. ಈ ವೇಳೆ ಒಮಿಕ್ರಾನ್ ಸೋಂಕು ದೃಢಪಟ್ಟಿತ್ತು.
ಇತ್ತ ಅವರನ್ನು ಡಿ.3ರಿಂದ ಇಲ್ಲಿಯವರೆಗೆ ಬೌರಿಂಗ್ ಆಸ್ಪತ್ರೆಯಲ್ಲಿ ದಾಖಲಿಸಿ, ಪ್ರತ್ಯೇಕವಾಗಿ ಚಿಕಿತ್ಸೆ ನೀಡಲಾಗುತ್ತಿತ್ತು. 10 ದಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಬಳಿಕ ವ್ಯಕ್ತಿಗೆ ಎರಡು ಬಾರಿ ನಡೆಸಿದ ಆರ್ಟಿಪಿಸಿಆರ್ ಟೆಸ್ಟ್ ನೆಗೆಟಿವ್ ಬಂದಿದೆ. ಸಂಪೂರ್ಣ ಗುಣಮುಖರಾದ ಕಾರಣ ಇಂದು ಈ ವ್ಯಕ್ತಿ ಆಸ್ಪತ್ರೆಯಿಂದ ಬಿಡುಗಡೆ ಆಗಲಿದ್ದಾರೆ ಎಂದು ತಿಳಿದು ಬಂದಿದೆ.
ಇದನ್ನೂ ಓದಿ: ನೀವು ಒಮಿಕ್ರಾನ್ ವ್ಯಾಪಿತ ದೇಶದಿಂದ ಬರುತ್ತಿದ್ದೀರಾ.. ಆರ್ಟಿಪಿಸಿಆರ್ ಟೆಸ್ಟ್ಗೆ ಈಗಲೇ ನೋಂದಣಿ ಮಾಡಿಕೊಳ್ಳಿ