ETV Bharat / city

ನೆರೆ ಸಂತ್ರಸ್ತರಿಗೆ ಸರ್ಕಾರಿ ನೌಕರರ ಒಂದು ದಿನದ ವೇತನ ನೀಡಲು ನಿರ್ಧಾರ

ನೆರೆ ಸಂತ್ರಸ್ತರಿಗೆ ನೆರವಾಗುವ ನಿಟ್ಟಿನಲ್ಲಿ ಸಿಎಂ ಪರಿಹಾರ ನಿಧಿಗೆ ಒಂದು‌ ದಿನದ ವೇತನ ಸಹಿತ ಎಲ್ಲಾ ಅಗತ್ಯ ಸಹಕಾರ ನೀಡಲು ಕರ್ನಾಟಕ ಸರ್ಕಾರಿ ನೌಕರರ ಸಂಘ ಮುಂದಾಗಿದೆ.

One day salary donate the govt employee's
author img

By

Published : Aug 9, 2019, 4:25 AM IST

ಬೆಂಗಳೂರು: ಪ್ರವಾಹ ಸಂತ್ರಸ್ತರ ನೆರವಿಗಾಗಿ ಸಿಎಂ ಪರಿಹಾರ ನಿಧಿಗೆ ಒಂದು‌ ದಿನದ ವೇತನ ಸಹಿತ ಎಲ್ಲಾ ಅಗತ್ಯ ಸಹಕಾರ ನೀಡಲು ಕರ್ನಾಟಕ ಸರ್ಕಾರಿ ನೌಕರರ ಸಂಘ ಮುಂದಾಗಿದೆ.

ಈ ಸಂಬಂಧ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಿಜಯ ಭಾಸ್ಕರ್ ಅವರನ್ನು ಭೇಟಿ ಮಾಡಿದ ಸಂಘದ ಅಧ್ಯಕ್ಷ ಸಿ.ಎಸ್.ಷಡಕ್ಷರಿ ನೇತೃತ್ವದ ನಿಯೋಗ ಸಂತ್ರಸ್ತರಿಗೆ ಸಹಾಯಹಸ್ತ ನೀಡುವ ಭರವಸೆ ನೀಡಿದೆ. ಕಳೆದ ಬಾರಿ ಕೊಡುಗು ಪ್ರವಾಹಕ್ಕೆ ಸಂಘದಿಂದ ವತಿಯಿಂದ ನೀಡಲಾಗಿದ್ದ, ಸಂತ್ರಸ್ತ ನಿಧಿಯ ಮಾದರಿಯಲ್ಲಿ ಉತ್ತರ ಕರ್ನಾಟಕ ಪ್ರವಾಹ ಪೀಡಿತ ಜನರ ನೆರವಿಗಾಗಿ ಈ ಬಾರಿಯೂ ಸಹ ಮುಖ್ಯಮಂತ್ರಿ ಪರಿಹಾರ ನಿಧಿಗೆ ಒಂದು ದಿನದ ವೇತನ ನೀಡುವ ಕುರಿತು ಭರವಸೆ ನೀಡಿದ್ದಾರೆ.

ವಿಜಯ ಭಾಸ್ಕರ್ ಅವರನ್ನು ಭೇಟಿ ಮಾಡಿದ ಸಿ.ಎಸ್.ಷಡಕ್ಷರಿ ನೇತೃತ್ವದ ನಿಯೋಗ
ಈ ಸಂಬಂಧ ಇಂದು ಸಂಘದ ಎಲ್ಲಾ ಪದಾಧಿಕಾರಿಗಳ ಜತೆ ಸಭೆ ನಡೆಸಿ ಈ ಬಗ್ಗೆ ನಿರ್ಧಾರ‌ ಕೈಗೊಳ್ಳುವುದಾಗಿ ಸಿ.ಎಸ್.ಷಡಕ್ಷರಿ ತಿಳಿಸಿದ್ದಾರೆ. ಸರ್ಕಾರಿ ನೌಕರರ ಒಂದು ದಿನದ ವೇತನ ಅಂದಾಜು ಸುಮಾರು ₹ 150 ಕೋಟಿ ಸಂಗ್ರಹವಾಗಲಿದೆ.

ಇದೇ ವೇಳೆ ಸರ್ವ ಶಿಕ್ಷಾ ಅಭಿಯಾನದಡಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಕರಿಗೆ ಕಾಲಕ್ಕೆ ಸರಿಯಾಗಿ ವೇತನ ನೀಡಬೇಕು. ಕರ್ನಾಟಕ ಸರ್ಕಾರಿ ವಿಮಾ ಇಲಾಖೆ (ಕೆಜಿಐಡಿ) ದಾಖಲೆಗಳನ್ನು ಆನ್​ಲೈನ್ ಮೂಲಕ ಗಣಕೀಕರಣಗೊಳಿಸಿ ವಿಮಾನಿಧಿ ಸುಲಭವಾಗಿ ಸಿಗುವಂತೆ ಮಾಡಬೇಕು ಎಂದು ಮನವಿ ಮಾಡಿದರು.

Intro:GggBody:KN_BNG_03_GOVTEMPLOYEE_AIDCSMEETING_SCRIPT_7201951

ಸರ್ಕಾರಿ ನೌಕರರ ನಿಯೋಗ ಸಿಎಸ್ ಭೇಟಿ: ಸಿಎಂ ಪರಿಹಾರ ನಿಧಿಗೆ ದಿನದ ವೇತನ ಸಹಿತ ಅಗತ್ಯ ಸಹಾಯಹಸ್ತ ನೀಡುವ ಭರವಸೆ

ಬೆಂಗಳೂರು: ಉತ್ತರ ಕರ್ನಾಟಕದ ನೆರೆ ಪೀಡಿತ ಜಿಲ್ಲೆಗಳ ಜನರ ನೆರವಿಗಾಗಿ ಸಿಎಂ ಪರಿಹಾರ ನಿಧಿಗೆ ಒಂದು‌ ದಿನದ ವೇತನ ಸಹಿತ ಎಲ್ಲಾ ಅಗತ್ಯ ಸಹಕಾರವನ್ನು‌ ನೀಡಲು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಮುಂದಾಗಿದೆ.

ಈ ಸಂಬಂಧ ಇಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಿಜಯ ಭಾಸ್ಕರ್ ಅವರನ್ನು ಬೇಟಿ ಮಾಡಿದ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಕ್ಷರಿ ನೇತೃತ್ವದ ನಿಯೋಗ ಸಂತ್ರಸ್ತರಿಗೆ ಸಹಾಯಹಸ್ತ ನೀಡುವ ಭರವಸೆ ನೀಡಿದೆ.

ಕಳೆದ ಬಾರಿ ಕೊಡುಗು ಪ್ರವಾಹಕ್ಕೆ ಸರ್ಕಾರಿ ನೌಕರರ ವತಿಯಿಂದ ನೀಡಲಾಗಿದ್ದ, ಸಂತ್ರಸ್ತ ನಿಧಿಯ ಮಾದರಿಯಲ್ಲಿ ಉತ್ತರ ಕರ್ನಾಟಕ ಪ್ರವಾಹ ಪೀಡಿತ ಜನರ ನೆರವಿಗಾಗಿ ಈ ಬಾರಿಯೂ ಸಹ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಒಂದು ದಿನದ ವೇತನ ನೀಡುವ ಕುರಿತು ಭರವಸೆ ನೀಡಿದ್ದಾರೆ.

ಈ ಸಂಬಂಧ ನಾಳೆ ಸಂಘದ ಎಲ್ಲಾ ಪದಾಧಿಕಾರಿಗಳ ಜತೆ ಸಭೆ ನಡೆಸಿ ಸಹಾಯಹಸ್ತ ನೀಡುವ ಬಗ್ಗೆ ನಿರ್ಧಾರ‌ ಕೈಗೊಳ್ಳುವುದಾಗಿ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಕ್ಷರಿ ತಿಳಿಸಿದ್ದಾರೆ. ಸರ್ಕಾರಿ ನೌಕರರ ಒಂದು ದಿನದ ವೇತನ ಅಂದಾಜು ಸುಮಾರು 150 ಕೋಟಿ ರೂ. ಆಗಲಿದೆ.

ಇದೇ ವೇಳೆ ಸರ್ವ ಶಿಕ್ಷಾ ಅಭಿಯಾನದಡಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಕರಿಗೆ ಕಾಲಕ್ಕೆ ಸರಿಯಾಗಿ ವೇತನ ನೀಡುವ ಕುರಿತು ಮನವಿ ಮಡಿದರು. ಕರ್ನಾಟಕ ಸರ್ಕಾರಿ ವಿಮಾ ಇಲಾಖೆ(ಕೆಜಿಐಡಿ) ದಾಖಲೆಗಳನ್ನು ಆನ್ ಲೈನ್ ಮೂಲಕ ಗಣಕೀಕರಣ ಗೊಳಿಸಿ ವಿಮಾನಿಧಿ ಸುಲಭವಾಗಿ ಸಿಗುವಂತೆ ಮಾಡಬೇಕು ಎಂದು ಮನವಿ ಮಾಡಿದರು.Conclusion:Hhh
ETV Bharat Logo

Copyright © 2024 Ushodaya Enterprises Pvt. Ltd., All Rights Reserved.