ETV Bharat / city

ರೈತರಿಗೆ ಒಂದು ಜಿಲ್ಲೆ, ಒಂದು ಉತ್ಪನ್ನ ತರಬೇತಿ: ಸಚಿವ ಬಿ.ಸಿ.ಪಾಟೀಲ್ - One district, one product training to farmers

ಅಸಂಘಟಿತ ವಲಯದಲ್ಲಿರುವ ಸಣ್ಣ ಆಹಾರ ಸಂಸ್ಕರಣ ಉದ್ದಿಮೆಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾಲಯ (CFTRI) ಮೈಸೂರಿನಲ್ಲಿ ರೈತರಿಗೆ ತರಬೇತಿ ನೀಡುವ ಬಗ್ಗೆ ವಿಕಾಸಸೌಧದ ಕಚೇರಿಯಲ್ಲಿ ಕೃಷಿ ಸಚಿವ ಬಿ.ಸಿ.ಪಾಟೀಲ್, ಸಿಎಫ್​ಟಿಆರ್​ಐ ಮುಖ್ಯಸ್ಥರು ಹಾಗೂ ವಿಜ್ಞಾನಿಗಳೊಂದಿಗೆ ಮಹತ್ವದ ಸಭೆ ನಡೆಸಿ ಚರ್ಚಿಸಿದರು.

One district, one product training to farmers: B.C. Patil
ಆಹಾರ ಸಂಸ್ಕರಣ ಉದ್ದಿಮೆಗಳ ಸ್ಪರ್ಧಾತ್ಮಕತೆ ಹೆಚ್ಚಿಸಲು ರೈತರಿಗೆ ಒಂದು ಜಿಲ್ಲೆ, ಒಂದು ಉತ್ಪನ್ನ ತರಬೇತಿ: ಬಿ.ಸಿ.ಪಾಟೀಲ್
author img

By

Published : Dec 5, 2020, 3:07 PM IST

Updated : Dec 5, 2020, 3:13 PM IST

ಬೆಂಗಳೂರು: ಅಸಂಘಟಿತ ವಲಯದಲ್ಲಿರುವ ಸಣ್ಣ ಆಹಾರ ಸಂಸ್ಕರಣ ಉದ್ದಿಮೆಗಳ ಸ್ಪರ್ಧಾತ್ಮಕತೆ ಹೆಚ್ಚಿಸುವ ನಿಟ್ಟಿನಲ್ಲಿ ರೈತರಿಗೆ ಒಂದು ಜಿಲ್ಲೆ, ಒಂದು ಉತ್ಪನ್ನ ತರಬೇತಿ ನೀಡಲು ಕೃಷಿ ಸಚಿವ ಬಿ.ಸಿ.ಪಾಟೀಲ್ ನಿರ್ಧರಿಸಿದ್ದಾರೆ.

ಆತ್ಮ ನಿರ್ಭರ ಭಾರತ ಅಭಿಯಾನದ ಭಾಗವಾಗಿ ಕೇಂದ್ರ ಸರ್ಕಾರದ ಆಹಾರ ಸಂಸ್ಕರಣಾ ಉದ್ದಿಮೆಗಳ ಮಂತ್ರಾಲಯ, ಪ್ರಧಾನಮಂತ್ರಿ ಸಣ್ಣ ಆಹಾರ ಸಂಸ್ಕರಣಾ ಉದ್ಯಮಗಳ ಕ್ರಮ ಬದ್ಧಗೊಳಿಸುವಿಕೆ ಯೋಜನೆಯನ್ನು ರಾಜ್ಯ ಸರ್ಕಾರದ ಸಹಯೋಗದೊಂದಿಗೆ ಅನುಷ್ಠಾನಗೊಳಿಸಲು ಉದ್ದೇಶಿಸಿದೆ. ಅಸಂಘಟಿತ ವಲಯದಲ್ಲಿರುವ ಸಣ್ಣ ಆಹಾರ ಸಂಸ್ಕರಣ ಉದ್ದಿಮೆಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾಲಯ (CFTRI) ಮೈಸೂರಿನಲ್ಲಿ ರೈತರಿಗೆ ತರಬೇತಿ ನೀಡುವ ಬಗ್ಗೆ ವಿಕಾಸಸೌಧದ ಕಚೇರಿಯಲ್ಲಿ ಕೃಷಿ ಸಚಿವ ಬಿ.ಸಿ.ಪಾಟೀಲ್, ಸಿಎಫ್​ಟಿಆರ್​ಐ ಮುಖ್ಯಸ್ಥರು ಹಾಗೂ ವಿಜ್ಞಾನಿಗಳೊಂದಿಗೆ ಮಹತ್ವದ ಸಭೆ ನಡೆಸಿ ಚರ್ಚಿಸಿದರು.

ಓದಿ: ಇಂದು ವಿಶ್ವ ಮಣ್ಣಿನ ದಿನ: ರೈತರಿಗೆ ಕೃಷಿ ಸಚಿವರ ಸಲಹೆ ಏನು?
ಜ. 11ರಿಂದ ಮಾ. 30ರವರೆಗೆ ತರಬೇತಿ ನಡೆಸಲು ಉದ್ದೇಶಿಸಲಾಗಿದ್ದು, ಕೃಷಿ ಇಲಾಖೆಯ ಕೆಪೆಕ್ (ಕರ್ನಾಟಕ ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಹಾಗೂ ರಫ್ತು ನಿಗಮ)50 ಮಂದಿಯಂತೆ ಪ್ರತಿ ತಾಲೂಕಿನಿಂದ ಇಬ್ಬರು ರೈತರನ್ನು ಆಯ್ಕೆ ಮಾಡಿ, ಒಂದು ಗುಂಪು ರಚಿಸಿ ಒಟ್ಟು 500 ಜನರಿಗೆ ತರಬೇತಿ ನೀಡುವ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗಿದೆ. 6 ದಿನ ನಡೆಯುವ ಈ ತರಬೇತಿಯಲ್ಲಿ ಕೊನೆಯ 2 ದಿನಗಳನ್ನು ಮಾರ್ಕೆಟಿಂಗ್, ಬ್ರಾಂಡ್​ಗಾ​ಗಿ ಹೆಚ್ಚಿನ ಒತ್ತು ನೀಡಲು ಕೃಷಿ ಸಚಿವರು ಸಲಹೆ ನೀಡಿದರು. ವಿಶೇಷವಾಗಿ ಮೆಕ್ಕೆಜೋಳ, ತೊಗರಿ ಹಾಗೂ ಸಿರಿಧಾನ್ಯಗಳ ಉತ್ಪನ್ನಗಳಿಗೆ ಹೆಚ್ಚಿನ ಆದ್ಯತೆ ನೀಡುವ ಬಗ್ಗೆಯೂ ಬಿ.ಸಿ.ಪಾಟೀಲ್ ಸಭೆಯಲ್ಲಿ ಚರ್ಚಿಸಿದರು.

ಸಭೆಯನ್ನುದ್ದೇಶಿಸಿ ಮಾತನಾಡಿದ ಸಚಿವ ಬಿ.ಸಿ.ಪಾಟೀಲ್, ಅಸಂಘಟಿತ ವಲಯದಲ್ಲಿರುವ ಸಣ್ಣ ಆಹಾರ ಸಂಸ್ಕರಣ ಉದ್ದಿಮೆಗಳ ಸ್ಪರ್ಧಾತ್ಮಕತೆಯನ್ನು ಹೆಚ್ಚಿಸುವುದು, ಅವುಗಳನ್ನು ಸಂಘಟಿತ ವಲಯಕ್ಕೆ ತರುವುದು, ರೈತ ಉತ್ಪಾದಕ ಸಂಸ್ಥೆಗಳು, ಸ್ವಸಹಾಯ ಸಂಘಗಳು ಹಾಗೂ ಉತ್ಪಾದಕ ಸಹಕಾರಿ ಸಂಘಗಳಿಗೆ ಉತ್ತೇಜನ ನೀಡುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ‌ ಎಂದರು.

ಕೃಷಿ ಇಲಾಖೆ ಹಾಗೂ ಕೃಷಿ ಸಂಬಂಧಿತ ಇಲಾಖೆಗಳು ಒಂದು ಜಿಲ್ಲೆ, ಒಂದು ಉತ್ಪನ್ನ(ಬೆಳೆ) ಯೋಜನೆಯಡಿ ಉತ್ಪನ್ನಗಳನ್ನು ಗುರುತಿಸಿ, ಈ ಉತ್ಪನ್ನದ ಮೌಲ್ಯವರ್ಧನೆ, ಸಂಸ್ಕರಣೆ, ಪ್ಯಾಕಿಂಗ್, ಬ್ರಾಂಡ್ ಅಭಿವೃದ್ಧಿ, ಮಾರುಕಟ್ಟೆಗೆ ಪ್ರೋತ್ಸಾಹಿಸಲು ತರಬೇತಿ ನೀಡುತ್ತಿರುವುದಾಗಿ ಮಾಹಿತಿ ನೀಡಿದರು.

Last Updated : Dec 5, 2020, 3:13 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.