ಬೆಂಗಳೂರು: ರಾಷ್ಟ್ರಮಟ್ಟದ 2021ನೇ ಸಾಲಿನ ಉತ್ತಮ ಶಿಕ್ಷಕ ಪ್ರಶಸ್ತಿಗೆ ಅರ್ಹ ಶಿಕ್ಷಕರು/ಮುಖ್ಯ ಶಿಕ್ಷಕರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಆಹ್ವಾನಿಸಲಾಗಿದೆ.
ಓದಿ: ಡ್ಯಾಮೇಜ್ ಕಂಟ್ರೋಲ್ಗೆ ಮುಂದಾದರಾ ಸಚಿವ ಸಿ.ಪಿ.ಯೋಗೇಶ್ವರ್..?
ಭಾರತ ಸರ್ಕಾರದ ಮಾನವ ಸಂಪನ್ಮೂಲ ಅಭಿವೃದ್ಧಿ ಇಲಾಖೆಯ ಈ ಪ್ರಶಸ್ತಿಗೆ ಅರ್ಜಿ ಸಲ್ಲಿಸಲು ಇದೇ ಜೂನ್ 20 ರವರೆಗೆ ಅವಕಾಶ ಕಲ್ಪಿಸಲಾಗಿದೆ. ರಾಜ್ಯ ಸರ್ಕಾರದ ಅಧೀನದಲ್ಲಿರುವ ಶಾಲೆಗಳು, ಅನುದಾನಿತ ಶಾಲೆಗಳು ಮತ್ತು ಸ್ಥಳೀಯ ಸಂಸ್ಥೆಗಳ ಅಧೀನದಲ್ಲಿರುವ ಶಾಲೆಗಳಲ್ಲಿ ಖಾಯಂಗೊಂಡ ಮತ್ತು ಮನೆಪಾಠದಲ್ಲಿ ತೊಡಗಿಸಿಕೊಂಡಿರದ ಶಿಕ್ಷಕರು ಮತ್ತು ಮುಖ್ಯ ಶಿಕ್ಷಕರು ಭಾಗಿಯಾಗಬಹುದು.
ಹಾಗೇ, ಕೇಂದ್ರ ಸರ್ಕಾರದ ಅಧೀನದಲ್ಲಿರುವ ಶಾಲೆಗಳು ಮತ್ತು ಸಿಬಿಎಸ್ಇ ಮತ್ತು ಸಿಐಎಸ್ಸಿಇ ಮಾನ್ಯತೆ ಪಡೆದ ಶಾಲೆಗಳ ಶಿಕ್ಷಕರು ರಾಷ್ಟ್ರ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಅರ್ಜಿ ಸಲ್ಲಿಸಬಹುದು. https://nationalawardstoteachers.education.gov.in/Login.aspx ಅಥವಾ http://www.schooleducation.kar.nic.in ಮೂಲಕ ಅರ್ಹ ಶಿಕ್ಷಕರು/ ಮುಖ್ಯ ಶಿಕ್ಷಕರು ತಾವೇ ಸ್ವಯಃ (Self-nomination) ಆನ್‌ಲೈನ್ ಮೂಲಕ ನೋಂದಾಯಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬೇಕು.
ಅರ್ಜಿ ಸಲ್ಲಿಸುವ ಪ್ರಕ್ರಿಯೆಯಲ್ಲಿ ಯಾವುದೇ ರೀತಿಯ ಆಡಚಣೆಗಳು ಉಂಟಾದಲ್ಲಿ ಇ-ಮೇಲ್ ಐಡಿ helpdesk-nat@gov.in ಯನ್ನು ಸಂಪರ್ಕಿಸಿ, ಸಮಸ್ಯೆ ನಿವಾರಿಸಿಕೊಳ್ಳುವುದು.