ETV Bharat / city

ಬೆಂಗಳೂರಿನ ಕ್ಲಾರೆನ್ಸ್ ಹೈಸ್ಕೂಲ್‌ನಲ್ಲಿ ಬೈಬಲ್ ಶಿಕ್ಷಣ ಕಡ್ಡಾಯ?: ಆರೋಪವೇನು? - Oppose to compulsory Bible study for students at Clarence High School

ಬೆಂಗಳೂರಿನ ಕ್ಲಾರೆನ್ಸ್ ಹೈಸ್ಕೂಲಿನಲ್ಲಿ ಬೈಬಲ್ ಶಿಕ್ಷಣವನ್ನು ಕಡ್ಡಾಯಗೊಳಿಸಲಾಗಿದೆ ಎಂದು ಹಿಂದೂಪರ ಸಂಘಟನೆಯೊಂದು ಆರೋಪಿಸಿದೆ.

oppose-to-compulsory-bible-study-for-students-at-clarence-high-school
ಕ್ಲಾರೆನ್ಸ್ ಹೈ ಸ್ಕೂಲ್ ನಲ್ಲಿ ಬೈಬಲ್ ಶಿಕ್ಷಣ ಕಡ್ಡಾಯ! ಹಿಂದೂಪರ ಸಂಘಟನೆಗಳಿಂದ ಆಕ್ರೋಶ.
author img

By

Published : Apr 24, 2022, 2:51 PM IST

ಬೆಂಗಳೂರು: ಇಲ್ಲಿನ ಕ್ಲಾರೆನ್ಸ್ ಹೈಸ್ಕೂಲಿನಲ್ಲಿ ಬೈಬಲ್ ಶಿಕ್ಷಣವನ್ನು ಕಡ್ಡಾಯಗೊಳಿಸಲಾಗಿದೆ ಎಂದು ಹಿಂದೂಪರ ಸಂಘಟನೆಗಳಿಂದ ಆಕ್ರೋಶ ವ್ಯಕ್ತವಾಗಿದೆ. ರಿಚರ್ಡ್ಸ್ ಟೌನ್‌ನಲ್ಲಿರುವ ಈ ಶಾಲೆಗೆ ಪ್ರವೇಶಾತಿ ಪಡೆಯುವ ಪ್ರತಿ ವಿದ್ಯಾರ್ಥಿಗಳಿಗೂ ಬೈಬಲ್ ಓದುವುದನ್ನು ಕಡ್ಡಾಯ ಮಾಡಲಾಗಿದೆ ಎಂದು ಹೇಳಲಾಗಿದೆ. ಇದು ಸಂವಿಧಾನದ ಪರಿಚ್ಛೇದ 25ರ ಉಲ್ಲಂಘನೆ ಎಂದು ಹಿಂದೂ ಜನಜಾಗೃತಿ ಸಮಿತಿ ವಕ್ತಾರ ಮೋಹನ್ ಗೌಡ ಹೇಳಿದರು.

ಬೈಬಲ್ ಶಿಕ್ಷಣವನ್ನು ಇತರ ಮಕ್ಕಳಿಗೆ ಕಡ್ಡಾಯ ಮಾಡಿರುವುದು ಈ ಶಾಲೆಯ ಪ್ರಕಟಣೆಯಲ್ಲಿ ಇದೆ ಎಂದು ಹೇಳಲಾಗಿದೆ. ಕ್ರೈಸ್ತೇತರ ವಿದ್ಯಾರ್ಥಿಗಳ ಮೇಲೆ ಒಂದು ಧರ್ಮದ ಧಾರ್ಮಿಕ ಗ್ರಂಥವನ್ನು ಬಲವಂತವಾಗಿ ಹೇರುವುದು ಧಾರ್ಮಿಕ ನಂಬಿಕೆಗೆ ವಿರುದ್ಧ. ಇದು ಸರ್ವೋಚ್ಛ ನ್ಯಾಯಾಲಯದ ಆದೇಶದ ಉಲ್ಲಂಘನೆಯೂ ಎಂದು ಹೇಳಲಾಗಿದೆ. ಈ ಸಂಬಂಧ ಶಿಕ್ಷಣ ಸಚಿವರಿಗೆ ದೂರು ನೀಡಲಾಗುವುದು. ಮುಂದಿನ ದಿನಗಳಲ್ಲಿ ನ್ಯಾಯಲಯದ ಮೊರೆ ಹೋಗಲಿದ್ದೇವೆ ಎಂದು ಅವರು ತಿಳಿಸಿದರು. ಶಾಲೆಯ ಆಡಳಿತ ಮಂಡಳಿ ಈ ಬಗ್ಗೆ ಪ್ರತಿಕ್ರಿಯೆ ನೀಡಿಲ್ಲ.

ಈ ವಿಚಾರವಾಗಿ ದೂರವಾಣಿ ಮೂಲಕ ಪ್ರತಿಕ್ರಿಯಿಸಿರುವ ಶಿಕ್ಷಣ ಸಚಿವ ನಾಗೇಶ್, ಶಾಲೆಯೊಂದು ಬೈಬಲ್ ಕಡ್ಡಾಯ ಮಾಡಿರುವುದು ಗಮನಕ್ಕೆ ಬಂದಿದೆ. ಈ ಬಗ್ಗೆ ನಮ್ಮ ಅಧಿಕಾರಿಗಳಿಂದ ಮಾಹಿತಿ ಪಡೆದು ಚರ್ಚೆ ಮಾಡುತ್ತೇನೆ. ನಂತರ ಮುಂದಿನ ಕ್ರಮ ಕೈಗೊಳ್ಳುವುದಾಗಿ ಹೇಳಿದರು.

ಇದನ್ನೂ ಓದಿ: ವಿದ್ಯಾರ್ಥಿ ಸಾವು: ವಿಶ್ವಭಾರತಿಯಲ್ಲಿ ಉದ್ವಿಗ್ನ ಪರಿಸ್ಥಿತಿ, ಉಪಕುಲಪತಿಗಳ ಮನೆಗೆ ಪೊಲೀಸ್ ರಕ್ಷಣೆ

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.