ಬೆಂಗಳೂರು: ಐದು ರಾಜ್ಯದ ಚುನಾವಣೆ ಇದೆ ಅಂತ ಯಾವುದೇ ಬೆಲೆ ಏರಿಕೆ ಮಾಡಿರಲಿಲ್ಲ. ಆದರೆ ಚುನಾವಣೆ ಮುಗಿದ ಮೇಲೆ ಬೆಲೆ ಏರಿಕೆ ಮಾಡಲಾಗಿದೆ. ಈಗಾಗಲೇ ಜನ ಬೆಲೆ ಏರಿಕೆಯಿಂದ ತತ್ತರಿಸಿದ್ದಾರೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಸಿದ್ದರಾಮಯ್ಯ ಅವರು ಈಗಾಗಲೇ ಜನ ಬೆಲೆ ಏರಿಕೆಯಿಂದ ತತ್ತರಿಸಿದ್ದಾರೆ. ಬೆಲೆ ಇಳಿಸುತ್ತೇವೆ ಎಂದು ಚುನಾವಣೆಗೋಸ್ಕರ ನಾಟಕ ಆಡುತ್ತಾರೆ. ನರೇಂದ್ರ ಮೋದಿಯವರು ಬಂದ ಮೇಲೆ ಎಲ್ಲವೂ ಜಾಸ್ತಿಯಾಗಿದೆ ಎಂದು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಕೇಂದ್ರ ಸರ್ಕಾರ ಜನರಿಗೆ ಮತ್ತೆ ಭಾರ ಹಾಕುವ ಕೆಲಸ ಮಾಡಿದೆ. ಐದು ರಾಜ್ಯಗಳ ಚುನಾವಣೆ ಇದೆ ಎಂದು ನವೆಂಬರ್ನಲ್ಲಿ ಡೀಸೆಲ್, ಪೆಟ್ರೋಲ್ ಬೆಲೆ ಕಡಿಮೆ ಮಾಡಿತ್ತು. ಚುನಾವಣೆ ಮುಗಿದ ಮೇಲೆ ಎಲ್ಲರ ನಿರೀಕ್ಷೆಯಂತೆ ಬೆಲೆ ಏರಿಕೆ ಮಾಡಿದ್ದಾರೆ. ಎಲ್ಲ ಬೆಲೆ ಏರಿಕೆಯಾಗಿ ಜನರಿಗೆ ತೊಂದರೆ ಆಗುತ್ತಿದೆ ಎಂದರು. ಡೀಸೆಲ್, ಪೆಟ್ರೋಲ್ ಬೆಲೆ ಏರಿಕೆಯಿಂದ ಬೇರೆ ಬೇರೆ ಅಗತ್ಯ ವಸ್ತುಗಳ ಬೆಲೆ ಹೆಚ್ಚಾಗುತ್ತದೆ. ಬೆಲೆ ಏರಿಕೆಯನ್ನು ನಾನು ಖಂಡಿಸುತ್ತದೆ. ತಕ್ಷಣ ಬೆಲೆ ಇಳಿಸಬೇಕು. ಶ್ರೀಮಂತರ ಮೇಲೆ ತೆರಿಗೆ ಹಾಕಿ ಬಡವರ ಮೇಲೆ ಬೇಡ. ಬೆಲೆ ಏರಿಕೆ ಬಗ್ಗೆ ಹೋರಾಟ ಮಾಡಲು ತೀರ್ಮಾನ ಮಾಡುತ್ತೇವೆ ಸಿದ್ದರಾಮಯ್ಯ ಹೇಳಿದರು.
ಇದನ್ನೂ ಓದಿ: ಜೇಮ್ಸ್ ಚಿತ್ರ ಯಥವಾತ್ತಾಗಿ ಮುಂದುವರಿಸಬೇಕು: ಕುಮಾರ ಬಂಗಾರಪ್ಪ ಒತ್ತಾಯ