ETV Bharat / city

repeal 3 farm laws..ಕೃಷಿ ಕಾಯ್ದೆ ವಾಪಸ್ ಮಣ್ಣಿನ ಮಕ್ಕಳ ಅಭೂತಪೂರ್ವ ಹೋರಾಟಕ್ಕೆ ಸಿಕ್ಕ ಗೆಲುವು: ಸಿದ್ದರಾಮಯ್ಯ ಬಣ್ಣನೆ - ಬೆಂಗಳೂರು

ಕರಾಳ ಕೃಷಿ ಕಾಯ್ದೆ(farm laws)ಗಳನ್ನು ರದ್ದುಗೊಳಿಸಿದ ಕೇಂದ್ರ ಬಿಜೆಪಿ ಸರ್ಕಾರದ(BJP Govt) ನಿರ್ಧಾರ ದೇಶದ ಮಣ್ಣಿನ ಮಕ್ಕಳ‌ ಅಭೂತಪೂರ್ವ ಹೋರಾಟಕ್ಕೆ‌ ಸಿಕ್ಕ ಗೆಲುವಾಗಿದೆ. ರೈತ ಹೋರಾಟಗಾರರಿಗೆ ಅಭಿನಂದನೆಗಳು ಎಂದು ಸಿದ್ದರಾಮಯ್ಯ ಟ್ವೀಟ್(Opposition leader Siddaramaiah tweet) ಮಾಡಿದ್ದಾರೆ.

Opposition leader Siddaramaiah
ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ
author img

By

Published : Nov 19, 2021, 11:51 AM IST

ಬೆಂಗಳೂರು: ತೀವ್ರ ವಿರೋಧಕ್ಕೆ ಒಳಗಾಗಿದ್ದ ಹಾಗೂ ವಿವಾದಕ್ಕೆ ಕಾರಣವಾಗಿದ್ದ ಮೂರು ಕೃಷಿ ಕಾಯ್ದೆ(3 farm laws)ಗಳನ್ನು ವಾಪಸ್ ಪಡೆದಿರುವ ಕೇಂದ್ರ ಸರ್ಕಾರದ ನಿಲುವು ಮಣ್ಣಿನ ಮಕ್ಕಳ ಅಭೂತಪೂರ್ವ ಹೋರಾಟಕ್ಕೆ ಸಿಕ್ಕ ಗೆಲುವು ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ(Opposition leader Siddaramaiah) ಅಭಿಪ್ರಾಯಪಟ್ಟಿದ್ದಾರೆ.

  • ರೈತರ ಹೋರಾಟಕ್ಕೆ ಸಿಕ್ಕ ಗೆಲುವಿನ‌‌ ಸ್ಪೂರ್ತಿ ಕೇಂದ್ರ @BJP4India ಸರ್ಕಾರದ ಜನವಿರೋಧಿ ನೀತಿ ವಿರುದ್ಧದ ಜನ ಹೋರಾಟಕ್ಕೆ ನಾಂದಿಯಾಗಲಿದೆ.

    ಪೆಟ್ರೋಲ್-ಡೀಸೆಲ್ ಸೇರಿದಂತೆ ಅಗತ್ಯವಸ್ತುಗಳ ಬೆಲೆ ಏರಿಕೆ ವಿರುದ್ಧದ ಹೋರಾಟಕ್ಕೆ ದೇಶದ ಜನ ಅಣಿಯಾಗಿದ್ದಾರೆ. 5/5#ಜೈಕಿಸಾನ್

    — Siddaramaiah (@siddaramaiah) November 19, 2021 " class="align-text-top noRightClick twitterSection" data=" ">

'ಜೈ ಕಿಸಾನ್' ಎಂಬ ಶೀರ್ಷಿಕೆ ಅಡಿ ಸರಣಿ ಟ್ವೀಟ್(Tweet) ಮೂಲಕ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿರುವ ಅವರು, ಕರಾಳ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸಿದ ಕೇಂದ್ರ ಬಿಜೆಪಿ ಸರ್ಕಾರದ ನಿರ್ಧಾರ ದೇಶದ ಮಣ್ಣಿನ ಮಕ್ಕಳ‌ ಅಭೂತಪೂರ್ವ ಹೋರಾಟಕ್ಕೆ‌ ಸಿಕ್ಕ ಗೆಲುವಾಗಿದೆ. ರೈತ ಹೋರಾಟಗಾರರಿಗೆ ಅಭಿನಂದನೆಗಳು ಎಂದಿದ್ದಾರೆ.

  • ಕೃಷಿ ಕಾಯ್ದೆ‌ಯಷ್ಟೇ ಅಲ್ಲ, ಕೇಂದ್ರ @BJP4India ಸರ್ಕಾರದ ಪ್ರತಿಯೊಂದು ನೀತಿ ಮತ್ತು ಕಾರ್ಯಕ್ರಮಗಳು ರೈತ ವಿರೋಧಿಯಾದುದು.

    ಇದು ವಿರಮಿಸುವ ಕಾಲ ಅಲ್ಲ,‌ ರೈತ ವಿರೋಧಿ ಬಿಜೆಪಿ ವಿರುದ್ಧದ ಹೋರಾಟ ಮುಂದುವರಿಯಲಿದೆ. 4/5#ಜೈಕಿಸಾನ್

ಕೃಷಿ‌ ಕಾಯ್ದೆಯನ್ನು ರದ್ದುಗೊಳಿಸಿದರಷ್ಟೇ ಸಾಲದು, ಈ ಕರಾಳ ಕಾಯ್ದೆ ರದ್ದತಿಗಾಗಿ ನಡೆದ ಹೋರಾಟದಲ್ಲಿ ಹುತಾತ್ಮರಾದ ರೈತ ಕುಟುಂಬಗಳಿಗೆ ಕೇಂದ್ರ ಬಿಜೆಪಿ ಸರ್ಕಾರ(BJP Govt) ತಲಾ 25 ಲಕ್ಷ ರೂ. ಪರಿಹಾರ ಕೊಡಬೇಕೆಂದು ಒತ್ತಾಯಿಸುತ್ತೇನೆ. ಸರ್ವಾಧಿಕಾರಿ ಎಷ್ಟೇ ಶಕ್ತಿಶಾಲಿಯಾಗಿರಲಿ, ಎದೆಯಗಲ ಎಷ್ಟೇ ಇಂಚಿನದ್ದಾಗಿರಲಿ, ಜನಶಕ್ತಿಯ ಎದುರು ಆತ ಮಣಿಯಲೇಬೇಕು. ಇದುವೇ ಪ್ರಜಾಪ್ರಭುತ್ವದ ಸೊಗಸು. ಇದುವೇ ರೈತರ ಸ್ವಾತಂತ್ರ್ಯೋತ್ಸವ ಎಂದು ಅಭಿಪ್ರಾಯಪಟ್ಟಿದ್ದಾರೆ.

  • ಸರ್ವಾಧಿಕಾರಿ ಎಷ್ಟೇ ಶಕ್ತಿಶಾಲಿಯಾಗಿರಲಿ, ಎದೆಯಗಲ ಎಷ್ಟೇ ಇಂಚಿನದ್ದಾಗಿರಲಿ,
    ಜನಶಕ್ತಿಯ ಎದುರು ಆತ ಮಣಿಯಲೇಬೇಕು.

    ಇದುವೇ ಪ್ರಜಾಪ್ರಭುತ್ವದ ಸೊಗಸು.
    ಇದುವೇ ರೈತರ ಸ್ವಾತಂತ್ರ್ಯೋತ್ಸವ. 3/5#ಜೈಕಿಸಾನ್

ಹೋರಾಟ ಮುಂದುವರಿಯಲಿದೆ:

ಕೃಷಿ ಕಾಯ್ದೆ‌ಯಷ್ಟೇ ಅಲ್ಲ, ಕೇಂದ್ರ ಬಿಜೆಪಿ ಸರ್ಕಾರದ ಪ್ರತಿಯೊಂದು ನೀತಿ ಮತ್ತು ಕಾರ್ಯಕ್ರಮಗಳು ರೈತ ವಿರೋಧಿಯಾದುದು. ಇದು ವಿರಮಿಸುವ ಕಾಲ ಅಲ್ಲ,‌ ರೈತ ವಿರೋಧಿ ಬಿಜೆಪಿ ವಿರುದ್ಧದ ಹೋರಾಟ ಮುಂದುವರಿಯಲಿದೆ. ರೈತರ ಹೋರಾಟಕ್ಕೆ ಸಿಕ್ಕ ಗೆಲುವಿನ‌‌ ಸ್ಪೂರ್ತಿ ಕೇಂದ್ರ ಬಿಜೆಪಿ ಸರ್ಕಾರದ ಜನವಿರೋಧಿ ನೀತಿ ವಿರುದ್ಧದ ಜನ ಹೋರಾಟಕ್ಕೆ ನಾಂದಿಯಾಗಲಿದೆ. ಪೆಟ್ರೋಲ್-ಡೀಸೆಲ್ ಸೇರಿದಂತೆ ಅಗತ್ಯವಸ್ತುಗಳ ಬೆಲೆ ಏರಿಕೆ ವಿರುದ್ಧದ ಹೋರಾಟಕ್ಕೆ ದೇಶದ ಜನ ಅಣಿಯಾಗಿದ್ದಾರೆ ಎಂದು ಸಿದ್ದರಾಮಯ್ಯ ಎಚ್ಚರಿಸಿದ್ದಾರೆ.

ಇದನ್ನೂ ಓದಿ: Big Breaking.. ಮೂರು ಕೃಷಿ ಕಾನೂನುಗಳು ರದ್ದು: ಪ್ರಧಾನಿ ಮೋದಿ ಘೋಷಣೆ..!

ETV Bharat Logo

Copyright © 2024 Ushodaya Enterprises Pvt. Ltd., All Rights Reserved.