ETV Bharat / city

ಮುಂದಿನ ಚುನಾವಣೆಯಲ್ಲಿಯೂ 'ಮೋದಿ ಮೋದಿ' ಎಂದರೆ ಬಡವರ ಬದುಕು 'ಬೂದಿ': ಸಿದ್ದರಾಮಯ್ಯ ಟ್ವಿಟ್ - ಸಿದ್ದರಾಮಯ್ಯ ಟ್ವೀಟ್

ರಾಜ್ಯದಲ್ಲಿ ಕೋವಿಡ್ ನಿಂದ ಈವರೆಗೆ 32 ಸಾವಿರ ಜನ ಸತ್ತಿದ್ದಾರೆ. ಅದರಲ್ಲಿ ಬಿಪಿಎಲ್ ಕಾರ್ಡ್ ನವರು 25 ಸಾವಿರ ಮಂದಿ ಇರಬಹುದು, ಎಲ್ಲರಿಗೂ ಪರಿಹಾರ ನೀಡಲು ಒಂದೂವರೆ ಸಾವಿರ ಕೋಟಿ ವೆಚ್ಚವಾಗಬಹುದು. ಅಷ್ಟು ಮಂದಿಗೂ ಪರಿಹಾರ ನೀಡಬೇಕು ಎಂದು ಮುಖ್ಯಮಂತ್ರಿ ಬಿಎಸ್​​ವೈ ಅವರನ್ನು ಆಗ್ರಹಿಸುತ್ತೇನೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಟ್ವೀಟ್ ಮೂಲಕ ತಿಳಿಸಿದ್ದಾರೆ.

Opposition leader Siddaramaiah tweet
ಸಿದ್ದರಾಮಯ್ಯ ಟ್ವಿಟ್
author img

By

Published : Jun 16, 2021, 10:44 PM IST

ಬೆಂಗಳೂರು: ಅಗತ್ಯ ವಸ್ತುಗಳ ಬೆಲೆ ಇಳಿಕೆಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಅಗತ್ಯ ವಸ್ತುಗಳ ಬೆಲೆ ಪ್ರತಿದಿನ ಗಗನಕ್ಕೇರುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅವರಾಗಲೀ, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಾಗಲಿ ಸಂಕಷ್ಟದ ಕಾಲದಲ್ಲಿ ಬಡವರ ನೆರವಿಗೆ ನಿಲ್ಲುತ್ತಿಲ್ಲ. ಮುಂದಿನ ಚುನಾವಣೆಯಲ್ಲಿಯೂ 'ಮೋದಿ ಮೋದಿ' ಎಂದೇನಾದರೂ ಹೇಳಿದರೆ ಬಡವರ ಬದುಕು ಬೂದಿಯಾಗುವುದು ಖಚಿತ ಎಂದಿದ್ದಾರೆ.

ಓದಿ: ರಾಜ್ಯದಲ್ಲಿ 7345 ಮಂದಿಗೆ ಸೋಂಕು ದೃಢ : 148 ಸೋಂಕಿತರು ಕೊರೊನಾಗೆ ಬಲಿ

ಕೊರೊನಾ ಸಂದರ್ಭದಲ್ಲಿ ಸಂಕಷ್ಟದಲ್ಲಿರುವ ಬಿಪಿಎಲ್ ಕಾರ್ಡುದಾರರಿಗೆ 10 ಕೆ.ಜಿ. ಅಕ್ಕಿ, 10 ಸಾವಿರ ರೂಪಾಯಿ ಕೊಡಿ ಎಂದರೆ ರಾಜ್ಯ ಬಿಜೆಪಿ ಸರ್ಕಾರ ಕೇಳುತ್ತಿಲ್ಲ. ರಾಜ್ಯ ಸರ್ಕಾರದ ಬಜೆಟ್ 2.42 ಲಕ್ಷ ಕೋಟಿ. ಅದರಲ್ಲಿ 15-20 ಸಾವಿರ ಕೋಟಿಯನ್ನ ಬಡವರಿಗೆ ನೀಡಿದರೆ ಏನೂ ನಷ್ಟವಾಗುತ್ತಿರಲಿಲ್ಲ. ರಾಜ್ಯ ಬಿಜೆಪಿ ಸರ್ಕಾರ ಘೋಷಿಸಿರುವ ಪುಡಿಗಾಸಿನ ಪ್ಯಾಕೇಜ್ ಯಾರಿಗೆ ಸಿಗುತ್ತೋ? ಬಿಡುತ್ತೋ? ಗೊತ್ತಿಲ್ಲ. ಕೊರೊನಾದಿಂದ ಮೃತರಾದರೆ ಕುಟುಂಬದಲ್ಲಿ ಒಬ್ಬರಿಗೆ ಒಂದು ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಸರ್ಕಾರ ಹೇಳಿದೆ. ಆಸ್ಪತ್ರೆಯಲ್ಲಿ ಕುಟುಂಬದ ಒಬ್ಬರ ಚಿಕಿತ್ಸೆಗೆ ಮಾತ್ರ ಹಣ ಪಡೆಯುವರೇ? ಎಂದು ಪ್ರಶ್ನಿಸಿದ್ದಾರೆ.

  • ಅಗತ್ಯ ವಸ್ತುಗಳ ಬೆಲೆ ಪ್ರತಿದಿನ ಗಗನಕ್ಕೇರುತ್ತಿದೆ, ಪ್ರಧಾನಿ @narendramodi ಅವರಾಗಲೀ, ಮುಖ್ಯಮಂತ್ರಿ @BSYBJP ಅವರಾಗಲಿ ಸಂಕಷ್ಟದ ಕಾಲದಲ್ಲಿ ಬಡವರ ನೆರವಿಗೆ ನಿಲ್ಲುತ್ತಿಲ್ಲ.

    ಮುಂದಿನ ಚುನಾವಣೆಯಲ್ಲಿಯೂ 'ಮೋದಿ ಮೋದಿ' ಎಂದೇನಾದರೂ ಹೇಳಿದರೆ ಬಡವರ ಬದುಕು ಬೂದಿಯಾಗುವುದು ಖಚಿತ. 1/5#BJPFailsIndia

    — Siddaramaiah (@siddaramaiah) June 16, 2021 " class="align-text-top noRightClick twitterSection" data=" ">

ರಾಜ್ಯದಲ್ಲಿ ಕೋವಿಡ್ ನಿಂದ ಈವರೆಗೆ 32 ಸಾವಿರ ಜನ ಸತ್ತಿದ್ದಾರೆ. ಅದರಲ್ಲಿ ಬಿಪಿಎಲ್ ಕಾರ್ಡ್ ನವರು 25 ಸಾವಿರ ಮಂದಿ ಇರಬಹುದು, ಎಲ್ಲರಿಗೂ ಪರಿಹಾರ ನೀಡಲು ಒಂದೂವರೆ ಸಾವಿರ ಕೋಟಿ ವೆಚ್ಚವಾಗಬಹುದು. ಅಷ್ಟು ಮಂದಿಗೂ ಪರಿಹಾರ ನೀಡಬೇಕು ಎಂದು ಮುಖ್ಯಮಂತ್ರಿ ಬಿಎಸ್​​ವೈ ಅವರನ್ನು ಆಗ್ರಹಿಸುತ್ತೇನೆ. ಸೆಪ್ಟಂಬರ್-ಅಕ್ಟೋಬರ್ ನಲ್ಲಿ ಮೂರನೇ ಅಲೆ ಬರುವ ನಿರೀಕ್ಷೆ ಇದೆ. ಅಷ್ಟರಲ್ಲಿ ಎಲ್ಲರಿಗೂ ಉಚಿತವಾಗಿ ಲಸಿಕೆ ಕೊಡಬೇಕು. ಲಸಿಕೆ ಹಾಕಿಸಿಕೊಂಡ ಶೇ.80ರಷ್ಟು ಜನರಿಗೆ ಕೊರೊನಾ ಬರುವುದಿಲ್ಲ. ಹೀಗಾಗಿ ಪ್ರತಿಯೊಬ್ಬರು ಲಸಿಕೆ ಹಾಕಿಸಿಕೊಳ್ಳಬೇಕು ಎಂದು ರಾಜ್ಯದ ಜನರಲ್ಲಿ ಮನವಿ ಮಾಡುತ್ತೇನೆ ಎಂದಿದ್ದಾರೆ.

ಶ್ರೀಲಂಕಾದ ಡೆಪ್ಯುಟಿ ಹೈಕಮಿಷನರ್ ಡಾ. ಡಿ. ವೆಂಕಟೇಶ್ವರನ್ ಅವರು ಬುಧವಾರ ಪ್ರತಿಪಕ್ಷ ಸಿದ್ದರಾಮಯ್ಯ ಅವರನ್ನು ಭೇಟಿಯಾದರು. ಇದೇ ಸಂದರ್ಭ ಅವರು ವಿವಿಧ ವಿಚಾರಗಳ ಕುರಿತು ಸುದೀರ್ಘ ಚರ್ಚೆ ನಡೆಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.