ETV Bharat / city

ಇತರ ಪಕ್ಷಗಳ ಹಲವು ಶಾಸಕರು ಬಿಜೆಪಿ ಸಂಪರ್ಕದಲ್ಲಿದ್ದಾರೆ, ಸಿಎಂ ಸಮ್ಮುಖದಲ್ಲಿ ಪಕ್ಷ ಸೇರ್ಪಡೆ: ಕಟೀಲ್ - ಬೇರೆ ಪಕ್ಷಗಳ ಶಾಸಕರು ಬಿಜೆಪಿ ಸೇರ್ಪಡೆ

ಬೇರೆ ಬೇರೆ ಪಕ್ಷಗಳ ನಾಯಕರು, ಶಾಸಕರು ನಮ್ಮ ಸಂಪರ್ಕದಲ್ಲಿದ್ದು, ಪಕ್ಷಕ್ಕೆ ಸೇರಿಸಿಕೊಳ್ಳಲಿದ್ದೇವೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ತಿಳಿಸಿದರು.

ಕಟೀಲ್
ಕಟೀಲ್
author img

By

Published : Apr 24, 2022, 3:33 PM IST

ಬೆಂಗಳೂರು: ಬೇರೆ ಬೇರೆ ಪಕ್ಷಗಳ ಹಲವು ಶಾಸಕರು ನಮ್ಮ ಸಂಪರ್ಕದಲ್ಲಿದ್ದು, ನಾನು ಮತ್ತು ಮುಖ್ಯಮಂತ್ರಿಗಳು ಇದರ ಬಗ್ಗೆ ತೀರ್ಮಾನ ತೆಗೆದುಕೊಳ್ಳುತ್ತೇವೆ. ಮುಖ್ಯಮಂತ್ರಿಗಳ ಸಮ್ಮುಖದಲ್ಲಿ ಪಕ್ಷ ಸೇರ್ಪಡೆ ಮಾಡಿಕೊಳ್ಳುತ್ತೇವೆ. ಇದಕ್ಕೆ ರಾಷ್ಟ್ರೀಯ ನಾಯಕರ ಒಪ್ಪಿಗೆ ಪಡೆದುಕೊಳ್ಳುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ತಿಳಿಸಿದರು.

ಮತ್ತಿಕೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆಯವರೆಗೆ ಕಾದು ನೋಡಿ. ಹಲವರು ನಮ್ಮ ಪಕ್ಷಕ್ಕೆ ಬರಲಿದ್ದಾರೆ. ಬಿಜೆಪಿಯಲ್ಲಿ ಬಹಳ ಜನ ಗೆಲ್ಲುವ ಅಭ್ಯರ್ಥಿಗಳಿದ್ದಾರೆ. ಹೀಗಾಗಿ ನಮಗೆ ಇತರ ಪಕ್ಷಗಳ ಶಾಸಕರ ವಲಸೆ ಹೆಚ್ಚು ಅವಶ್ಯಕತೆ ಬರಲ್ಲ. ಹಳೇ ಮೈಸೂರು ಭಾಗದಲ್ಲಿ ತುಂಬಾ ಜನ ನಮ್ಮ ಪಕ್ಷದ ಸಂಪರ್ಕದಲ್ಲಿದ್ದಾರೆ, ಸಿಎಂ ಸಂಪರ್ಕದಲ್ಲೂ ಇದ್ದಾರೆ. ಎಲ್ಲವನ್ನೂ ಪರಿಶೀಲನೆ ಮಾಡುತ್ತಿದ್ದೇವೆ. ನಾವು ತೆಗೆದುಕೊಂಡ ನಿರ್ಣಯದ ಮೇಲೆ ವರಿಷ್ಠರು ಸಹಕಾರ ಕೊಡುತ್ತಾರೆ. ನಾನು ಮತ್ತು ಮುಖ್ಯಮಂತ್ರಿಗಳು ಇದರ ಬಗ್ಗೆ ತೀರ್ಮಾನ ತಗೆದುಕೊಳ್ಳುತ್ತೇವೆ. ಪಕ್ಷ ಸೇರ್ಪಡೆಗೆ ಅಮಿತ್ ಶಾ ಬರ್ತಾರೆ ಅಂತ ಏನೂ ಇಲ್ಲ. ಮುಖ್ಯಮಂತ್ರಿಗಳ ಸಮ್ಮುಖದಲ್ಲಿ ಪಕ್ಷ ಸೇರ್ಪಡೆ ಮಾಡಿಕೊಳ್ಳುತ್ತೇವೆ. ಇದಕ್ಕೆ ರಾಷ್ಟ್ರೀಯ ನಾಯಕರ ಒಪ್ಪಿಗೆ ಪಡೆಯುತ್ತೇವೆ ಎಂದರು.

ಬೇರೆ ಬೇರೆ ಪಕ್ಷಗಳ ಹತ್ತಾರು ಜನ ಶಾಸಕರು, ನಾಯಕರು ನಮ್ಮ ಸಂಪರ್ಕದಲ್ಲಿದ್ದಾರೆ. ಯಾರನ್ನು ತೆಗೆದುಕೊಳ್ಳಬೇಕು ಎಂದು ಅಲ್ಲಿರುವ ಸಮಸ್ಯೆಗಳ ಅವಲೋಕನ ಮಾಡಿಕೊಂಡು ನಿರ್ಧಾರ ಕೈಗೊಳ್ಳಲಾಗುತ್ತದೆ. ಎಲ್ಲವನ್ನೂ ಯೋಚನೆ ಮಾಡ್ಕೊಂಡು ಮುಂದಿನ ದಿನಗಳಲ್ಲಿ ನಿರ್ಧರಿಸುತ್ತೇವೆ. ಮುಂದಿನ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆಗೆ ಸರ್ವೆ ವಿಚಾರ ಕುರಿತು ಪ್ರತಿಕ್ರಿಯಿಸುತ್ತಾ, ನಾವು ಎಲ್ಲ ರೀತಿಯ ಸರ್ವೆಗಳನ್ನೂ ಮಾಡುತ್ತೇವೆ. ಸರ್ವೆ ಕಾರ್ಯಗಳು ಪ್ರಾರಂಭ ಆಗುತ್ತಿವೆ. ಸರ್ಕಾರ, ಜನಾಭಿಪ್ರಾಯ ಎಲ್ಲವನ್ನೂ ನೋಡಿಯೇ ಟಿಕೆಟ್ ನೀಡಲಾಗುತ್ತದೆ ಎಂದು ತಿಳಿಸಿದರು.

ಎಲೆಕ್ಷನ್ ಕ್ಯಾಬಿನೆಟ್ ರಚಿಸುವ ವಿಚಾರ ಕುರಿತು ಪ್ರತಿಕ್ರಿಯೆ ನೀಡಿದ ರಾಜ್ಯಾಧ್ಯಕ್ಷ ಕಟೀಲ್, ಅಂತಹ ಯಾವುದೇ ಪ್ರಸ್ತಾಪ ಇಲ್ಲ. ಸರ್ಕಾರ ಮತ್ತು ಪಕ್ಷ ಒಟ್ಟಾಗಿ ಚುನಾವಣೆ ಎದುರಿಸುತ್ತೇವೆ ಎಂದರು. ಸ್ವಾಮೀಜಿಗಳಿಗೆ 50 ಕ್ಷೇತ್ರ ಬಿಟ್ಟುಕೊಡಿ ಎಂದು ಭಟ್ಕಳದಲ್ಲಿ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಹೇಳಿಕೆ ವಿಚಾರ ಕುರಿತು ಪ್ರತಿಕ್ರಿಯೆ ನೀಡಿದ ಕಟೀಲ್, ಬ್ರಹ್ಮಾನಂದ ಸ್ವಾಮೀಜಿಗಳು ನಮ್ಮ ಗುರುಗಳು. ಅವರ ಮೇಲೆ ಅಪಾರ ಗೌರವ ಇದೆ. ರಾಜಕಾರಣದ ಬಗ್ಗೆ ಅವರು ಏನು ಹೇಳಿದ್ದಾರೋ ನನಗೆ ಗೊತ್ತಿಲ್ಲ, ಅವರ ಹೇಳಿಕೆ ಬಗ್ಗೆ ವಿಚಾರಿಸುತ್ತೇವೆ ಎಂದರು.

ಇದನ್ನೂ ಓದಿ: ಪಿಎಸ್​ಐ ಆಯ್ತು ಈಗ ಅಸಿಸ್ಟೆಂಟ್ ಪ್ರೊಫೆಸರ್ ಪರೀಕ್ಷೆಯಲ್ಲೂ ಗೋಲ್ಮಾಲ್!?

ETV Bharat Logo

Copyright © 2024 Ushodaya Enterprises Pvt. Ltd., All Rights Reserved.