ETV Bharat / city

ಶಿಶು ಮರಣ ಪ್ರಮಾಣ ಒಂದಂಕಿಗೆ ಇಳಿಸುವುದು ನಮ್ಮ ಗುರಿ: ಬಸವರಾಜ ಬೊಮ್ಮಾಯಿ

author img

By

Published : Jul 17, 2022, 2:10 PM IST

ತಾಯಿಯ ಆರೋಗ್ಯದಿಂದ ಹಿಡಿದು ಕುಟುಂಬದ ಆರೋಗ್ಯ, ಕುಟುಂಬದ ಆರ್ಥಿಕ ಸಬಲೀಕರಣ, ಆರೋಗ್ಯವಂತ ಮಗುವಿನ ಜನನ, ಮಗುವಿನ ಶಿಕ್ಷಣ ಸೇರಿದಂತೆ ಸಮಗ್ರ ಅಭಿವೃದ್ಧಿಯಾಗಬೇಕು. ಈ ಬಗ್ಗೆ ವೈಜ್ಞಾನಿಕವಾಗಿ ಆಲೋಚಿಸುವ ಸಚಿವರು ಹಾಗೂ ಅಧಿಕಾರಗಳ ತಂಡ ನಮ್ಮಲ್ಲಿದ್ದು, ಪ್ರಗತಿಪರ ಚಿಂತನೆಯುಳ್ಳ ಸರ್ಕಾರ ನಮ್ಮದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

Basavaraj Bommai
ಬಸವರಾಜ ಬೊಮ್ಮಾಯಿ

ಬೆಂಗಳೂರು: ಶಿಶು ಮರಣ ಪ್ರಮಾಣವು ರಾಜ್ಯದಲ್ಲಿ 2% ರಷ್ಟಿದ್ದು, ಇದನ್ನು ಒಂದಂಕಿಗೆ ಇಳಿಸುವುದು ನಮ್ಮ ಸರ್ಕಾರದ ಗುರಿ. ನಮ್ಮದು ಸೂಕ್ಷ್ಮ ಚಿಂತನೆಗಳುಳ್ಳ ಸರ್ಕಾರ. ಬಡತನ ನಿರ್ಮೂಲನೆಗೆ ಕ್ರಮ ವಹಿಸಲಾಗಿದೆ. ಶಿಕ್ಷಣ, ಮೂಲ ಸೌಕರ್ಯ ಸೇರಿದಂತೆ ತಾಂತ್ರಿಕ ಶಿಕ್ಷಣಕ್ಕೆ ಒತ್ತು ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ರೇನ್ಬೋ ಚಿಲ್ಡ್ರನ್ ಆಸ್ಪತ್ರೆ ಆಯೋಜಿಸಿದ್ದ ಮಕ್ಕಳ ವೈದ್ಯಕೀಯ ಶಾಸ್ತ್ರದಲ್ಲಿನ ವಿಶೇಷ ನವೀಕರಣಗಳ ಕುರಿತಾದ ಸಮ್ಮೇಳನದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ತಾಯಿ ಮರಣ ಪ್ರಮಾಣದಲ್ಲಿಯೂ ಇಳಿಕೆಯಾಗಬೇಕು. ರಾಜ್ಯದ 5-6 ಜಿಲ್ಲೆಗಳ ಕಾರಣದಿಂದ ಈ ಪ್ರಮಾಣ ಇಳಿಕೆಯಾಗುತ್ತಿಲ್ಲ. ಈ ಕಾರಣದಿಂದ ರಾಜ್ಯದ ಇತಿಹಾಸದಲ್ಲಿಯೇ ಪ್ರಥಮ ಬಾರಿಗೆ ಅಭಿವೃದ್ಧಿ ಆಕಾಂಕ್ಷಿ ತಾಲೂಕುಗಳನ್ನು ಗುರುತಿಸಿ ಶಿಕ್ಷಣ, ಆರೋಗ್ಯ, ಅಪೌಷ್ಟಿಕತೆ, ಮಹಿಳಾ ಮತ್ತು ಮಕ್ಕಳ ಆರೋಗ್ಯದ ಮಾನದಂಡಗಳನ್ನು ಇರಿಸಿಕೊಂಡು ಅಭಿವೃದ್ಧಿಗೆ ಕ್ರಮ ವಹಿಸಲಾಗಿದೆ. ಈ 5 ಜಿಲ್ಲೆಗಳಲ್ಲಿ ಉತ್ತಮ ಸೌಲಭ್ಯಗಳನ್ನು ಒದಗಿಸುವ ಮೂಲಕ ಐ.ಎಂ.ಆರ್ ಇಳಿಕೆ ಮಾಡಲು ಸಮರೋಪಾದಿಯಲ್ಲಿ ಕಾರ್ಯನಿರ್ವಹಿಸಲಾಗುತ್ತಿದೆ. ಸ್ವಸ್ಥ ಭವಿಷ್ಯಕ್ಕಾಗಿ ಮಕ್ಕಳ ತಜ್ಞರು ಈ ಕಾರ್ಯದಲ್ಲಿ ನಮ್ಮೊಂದಿಗೆ ಕೈಜೋಡಿಸಬೇಕು ಎಂದು ಮುಖ್ಯಮಂತ್ರಿಗಳು ಕರೆ ನೀಡಿದರು.

ಮಕ್ಕಳ ವೈದ್ಯಕೀಯ ಶಾಸ್ತ್ರದಲ್ಲಿನ ವಿಶೇಷ ನವೀಕರಣಗಳ ಕುರಿತಾದ ಸಮ್ಮೇಳನ

ಅಪೌಷ್ಟಿಕತೆ ನಿವಾರಣೆಗೆ ವಿಶೇಷ ಒತ್ತು: ಆಯವ್ಯಯದಲ್ಲಿ ಶಿಕ್ಷಣ ಮತ್ತು ಆರೋಗ್ಯಕ್ಕೆ ಅನುದಾನವನ್ನು ಹೆಚ್ಚಿಸಲಾಗಿದೆ. ಅಪೌಷ್ಟಿಕತೆ ನಿವಾರಣೆಗೆ ವಿಶೇಷ ಒತ್ತು ನೀಡಲಾಗಿದೆ. ತೀವ್ರ ಅಪೌಷ್ಟಿಕತೆಯುಳ್ಳ ಮಕ್ಕಳಿಗೆ ನೀಡುವ ಆಹಾರವನ್ನೇ ಸಾಮಾನ್ಯ ಅಪೌಷ್ಟಿಕತೆಯುಳ್ಳ ಮಕ್ಕಳಿಗೂ ನೀಡಲಾಗುತ್ತಿದೆ. ಅಂಗನವಾಡಿಗಳಲ್ಲಿ ಮಕ್ಕಳಿಗೆ ಉತ್ತಮ ಆಹಾರ ನೀಡುತ್ತಿರುವುದಲ್ಲದೇ, ಕಾರ್ಮಿಕರ ಮಕ್ಕಳಿಗೂ ವಿಶೇಷ ಪೌಷ್ಟಿಕ ಆಹಾರ ಒದಗಿಸಲಾಗುತ್ತಿದೆ. ತಾಂತ್ರಿಕ ಆಧಾರಿತ ರಾಜ್ಯ ನಮ್ಮದು. ಹಳ್ಳಿಗಳಲ್ಲಿ ಕೂಡ ನಮ್ಮ ಯುವಕರು ತಾಂತ್ರಿಕವಾಗಿ ಕೌಶಲ್ಯಯುಳ್ಳವರಾಗಿರಬೇಕು. ಈ ನಿಟ್ಟಿನಲ್ಲಿ ನಮ್ಮ ಸರ್ಕಾರ ಕಾರ್ಯೋನ್ಮುಖವಾಗಿದೆ. ನಾವೆಲ್ಲರೂ ಪರಿಹಾರದ ಭಾಗವಾಗೋಣ. ಆರೋಗ್ಯದ ಕುರಿತ ಸವಾಲುಗಳನ್ನು ಗೆಲ್ಲೋಣ. ತಾಯಿ ಗರ್ಭದಿಂದ ಭೂ ಗರ್ಭದವರೆಗಿನ ಪಯಣದ ಮಧ್ಯೆ ನಮ್ಮ ಪಾತ್ರಗಳನ್ನು ಉತ್ತಮವಾಗಿ ನಿರ್ವಹಿಸೋಣ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಗರ್ಭಧಾರಣೆಯಿಂದ ಹಿಡಿದು ಪೂರ್ಣ ಪ್ರಮಾಣದ ಮಾನವನ ಸೃಷ್ಟಿ ಅದ್ಭುತವಾದುದ್ದು. ಈ ನಿಟ್ಟಿನಲ್ಲಿ ಮಕ್ಕಳ ತಜ್ಞರ ಪಾತ್ರ ಗರ್ಭಧಾರಣೆಯಿಂದಲೇ ಪ್ರಾರಂಭವಾಗುತ್ತದೆ. ತಾಯಿಯ ಆರೋಗ್ಯ ಮಗುವಿನ ಆರೋಗ್ಯದ ಮೇಲೂ ಪರಿಣಾಮ ಬೀರುತ್ತದೆ. ಗರ್ಭದಲ್ಲಿಯೇ ಮಗುವಿಗೆ ಪೌಷ್ಟಿಕಾಂಶ ದೊರೆಯಬೇಕು. ಗರ್ಭಿಣಿಯರ ಆರೋಗ್ಯ ಕಾಪಾಡುವುದು ಸರ್ಕಾರ ಮತ್ತು ಸಮಾಜದ ಜವಾಬ್ದಾರಿ. ದೇಶದಲ್ಲಿ ಅಪೌಷ್ಟಿಕತೆಯಿಂದಾಗಿ ಕುರುಡಾಗಿರುವವರ ಸಂಖ್ಯೆ ಹೆಚ್ಚಿದೆ. ಅಪೌಷ್ಟಿಕತೆಯಿಂದ ವಿವಿಧ ಸಮಸ್ಯೆಗಳನ್ನು ಹೊತ್ತುಕೊಂಡು ಹುಟ್ಟುವವರ ಸಂಖ್ಯೆ ಹೆಚ್ಚಿದೆ. ಈ ಕುರಿತು ಸೂಕ್ತ ಪೌಷ್ಟಿಕ ಆಹಾರ ಹಾಗೂ ಕಾಳಜಿ ವಹಿಸಬೇಕು. ಸ್ವಸ್ಥ ಸಮಾಜ ನಿರ್ಮಾಣಕ್ಕೆ ಇದು ಸಕಾಲ ಎಂದರು.

ಇದನ್ನೂ ಓದಿ: ಸರ್ಕಾರ ಮತ್ತು ಪ್ರತಿಪಕ್ಷಗಳ ನಡುವೆ ಪರಸ್ಪರ ಗೌರವ ಕಡಿಮೆಯಾಗುತ್ತಿದೆ: ನ್ಯಾ.ಎನ್‌.ವಿ.ರಮಣ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.