ETV Bharat / city

ಬಾಡಿಗೆ ಮನೆಯಲ್ಲಿ ವೇಶ್ಯಾವಾಟಿಕೆ: ಮನೆ ಮಾಲೀಕನ ವಿರುದ್ಧದ ಕೇಸ್ ರದ್ದು - ಹೈಕೋರ್ಟ್ ಆದೇಶ

ಬಾಡಿಗೆ ಮನೆಯಲ್ಲಿ ವೇಶ್ಯಾವಾಟಿಕೆ ಬಗ್ಗೆ ಮಾಲೀಕನಿಗೆ ಮಾಹಿತಿ ಇಲ್ಲದಿದ್ದರೆ ಆತನ ವಿರುದ್ಧ ಮಾನವ ಕಳ್ಳಸಾಗಣೆ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸುವಂತಿಲ್ಲ ಎಂದು ಹೈಕೋರ್ಟ್ ಆದೇಶಿಸಿದೆ.

Karnataka High Court
ಹೈಕೋರ್ಟ್
author img

By

Published : Mar 25, 2022, 1:56 PM IST

ಬೆಂಗಳೂರು: ಬಾಡಿಗೆ ಮನೆಯಲ್ಲಿ ವೇಶ್ಯಾವಾಟಿಕೆ ನಡೆಯುತ್ತಿರುವ ಬಗ್ಗೆ ಮನೆಯ ಮಾಲೀಕನಿಗೆ ಅರಿವಿಲ್ಲವಾದರೆ ಆತನ ವಿರುದ್ಧ ಮಾನವ ಕಳ್ಳಸಾಗಣೆ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಲು ಅವಕಾಶವಿಲ್ಲ ಎಂದಿರುವ ಹೈಕೋರ್ಟ್, ಮನೆ ಮಾಲಿಕನ ವಿರುದ್ಧದ ಪ್ರಕರಣವನ್ನು ರದ್ದುಪಡಿಸಿದೆ. ವೇಶ್ಯಾವಾಟಿಕೆ ನಡೆಸುತ್ತಿದ್ದ ಆರೋಪದ ಸಂಬಂಧ ಚಂದ್ರಲೇಔಟ್ ಠಾಣೆ ಪೊಲೀಸರು ತಮ್ಮ ವಿರುದ್ಧ ದಾಖಲಿಸಿರುವ ಎಫ್‌ಐಆರ್ ರದ್ದುಪಡಿಸುವಂತೆ ಕೋರಿ ನಾಗರಭಾವಿ ನಿವಾಸಿ ಪ್ರಭುರಾಜ್ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿ ಪುರಸ್ಕರಿಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಪೀಠ, ಅರ್ಜಿದಾರರ ವಿರುದ್ಧದ ಎಫ್‌ಐಆರ್ ರದ್ದುಪಡಿಸಿ ಆದೇಶಿಸಿದೆ.

ಮಾನವ ಕಳ್ಳಸಾಗಣೆ ತಡೆ ಕಾಯ್ದೆಯ ಸೆಕ್ಷನ್ 3(2)(ಬಿ) ಪ್ರಕಾರ ಯಾವುದೇ ಜಾಗದಲ್ಲಿ ಏನು ನಡೆಯುತ್ತಿದೆ ಎಂಬುದು ಅದರ ಮಾಲೀಕನಿಗೆ ಅರಿವು ಇದ್ದಾಗ ಮಾತ್ರ ಆತನ ವಿರುದ್ಧ ಪ್ರಕರಣ ದಾಖಲಿಸಬಹುದಾಗಿದೆ. ಆದರೆ, ಈ ಪ್ರಕರಣದಲ್ಲಿ ಅರ್ಜಿದಾರನ ಒಡೆತನದಲ್ಲಿರುವ ಜಾಗದಲ್ಲಿ (ಮನೆ) ವೇಶ್ಯಾವಾಟಿಕೆ ನಡೆಸುತ್ತಿದ್ದ ಬಗ್ಗೆ ಆತನಿಗೆ ಅರಿವು ಇರಲಿಲ್ಲ. ಈ ಕುರಿತ ಹೇಳಿಕೆಯನ್ನು ಪೊಲೀಸರೇ ದೋಷಾರೋಪ ಪಟ್ಟಿಯಲ್ಲಿ ದಾಖಲಿಸಿದ್ದಾರೆ. ಹೀಗಿದ್ದರೂ ಪ್ರಕರಣ ಮುಂದುವರಿಯಲು ಬಿಟ್ಟರೆ ಅರ್ಜಿದಾರರಿಗೆ ಕಿರುಕುಳವಾಗಲು ಮತ್ತು ಕಾನೂನಿನ ಸ್ಪಷ್ಟ ದುರ್ಬಳಕೆಯಾಗಲು ಅವಕಾಶ ಮಾಡಿಕೊಟ್ಟಂತಾಗುತ್ತದೆ ಎಂದು ಅಭಿಪ್ರಾಯಪಟ್ಟು ಅರ್ಜಿದಾರನ ವಿರುದ್ಧದ ಪ್ರಕರಣ ರದ್ದುಪಡಿಸಿದೆ.

ಪ್ರಕರಣದ ಹಿನ್ನೆಲೆ: ಅರ್ಜಿದಾರರು 2019ರ ಡಿಸೆಂಬರ್‌ನಲ್ಲಿ ನಾಗರಬಾವಿಯಲ್ಲಿನ ತನ್ನ ಮನೆಯನ್ನು ವ್ಯಕ್ತಿಯೊಬ್ಬರಿಗೆ ಬಾಡಿಗೆಗೆ ನೀಡಿದ್ದರು. 2020ರ ಜನವರಿಯಲ್ಲಿ ಚಂದ್ರಾಲೇಔಟ್ ಠಾಣೆ ಪೊಲೀಸರು ಆ ಮನೆ ಮೇಲೆ ದಾಳಿ ನಡೆಸಿ ತಪಾಸಣೆ ನಡೆಸಿದ್ದರು. ಈ ವೇಳೆ, ಬಾಡಿಗೆದಾರ ಆ ಮನೆಯಲ್ಲಿ ವೇಶ್ಯಾವಾಟಿಕೆ ನಡೆಸುತ್ತಿರುವುದು ಬಹಿರಂಗವಾಗಿತ್ತು. ಇದರಿಂದ ಬಾಡಿಗೆದಾರ ಮತ್ತು ಮನೆ ಮಾಲೀಕರಾದ ಅರ್ಜಿದಾರರ ಮೇಲೆ ಮಾನವ ಕಳ್ಳ ಸಾಗಣೆ ತಡೆ ಕಾಯ್ದೆ ಎಫ್‌ಐಆರ್ ದಾಖಲಿಸಿದ್ದರು.

ತನಿಖೆ ವೇಳೆ ಅರ್ಜಿದಾರರಿಗೆ ಪೊಲೀಸರು ನೋಟಿಸ್ ನೀಡಿದ್ದರು. ಅದಕ್ಕೆ ಉತ್ತರಿಸಿದ್ದ ಅವರು, ಮನೆಯಲ್ಲಿ ಬಾಡಿಗೆದಾರ ವೇಶ್ಯಾವಾಟಿಕೆ ನಡೆಸುತ್ತಿದ್ದ ಬಗ್ಗೆ ತನಗೆ ಯಾವುದೇ ಮಾಹಿತಿ ಇರಲಿಲ್ಲ ಎಂದು ಸ್ಪಷ್ಟವಾಗಿ ನುಡಿದಿದ್ದರು. ನಂತರ ತನಿಖೆ ಪೂರ್ಣಗೊಳಿಸಿದ್ದ ಪೊಲೀಸರು ಅರ್ಜಿದಾರನ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಇದರಿಂದ ಹೈಕೋರ್ಟ್ ಮೆಟ್ಟಿಲೇರಿದ್ದ ಅರ್ಜಿದಾರ, ತನ್ನ ವಿರುದ್ಧದ ಎಫ್‌ಐಆರ್, ದೋಷಾರೋಪ ಪಟ್ಟಿ ಮತ್ತು ವಿಚಾರಣಾ ನ್ಯಾಯಾಲಯದ ವಿಚಾರಣೆ ರದ್ದುಪಡಿಸುವಂತೆ ಕೋರಿದ್ದರು.

ಇದನ್ನೂ ಓದಿ: ಕೃಷಿ ಭೂಮಿಯಲ್ಲಿ ಕಟ್ಟಡ ನಿರ್ಮಾಣ ತಡೆಯುವ ಅಧಿಕಾರ ಜಿಲ್ಲಾಧಿಕಾರಿಗಿಲ್ಲ: ಹೈಕೋರ್ಟ್

ETV Bharat Logo

Copyright © 2025 Ushodaya Enterprises Pvt. Ltd., All Rights Reserved.