ETV Bharat / city

ಪ್ರಮಾಣ ವಚನ ಸ್ವೀಕರಿಸಿದ ಹೈಕೋರ್ಟ್ ನೂತನ ನ್ಯಾಯಮೂರ್ತಿ ಪಿ. ಕೃಷ್ಣಭಟ್ - P krishna Bhat is New high court judge

ನ್ಯಾಯಮೂರ್ತಿ ಪಂಜಿಗದ್ದೆ ಕೃಷ್ಣಭಟ್ ಅವರು ಇಂದು ಹೈಕೋರ್ಟ್ ನೂತನ ನ್ಯಾಯಮೂರ್ತಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಮುಂದಿನ ಎರಡು ವರ್ಷಗಳ ಕಾಲ ಅವರು ನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸಲಿದ್ದಾರೆ.

P Krishna bhat is New high court judge
ನೂತನ ನ್ಯಾಯಮೂರ್ತಿ ಪಿ. ಕೃಷ್ಣಭಟ್
author img

By

Published : May 21, 2020, 8:46 PM IST

ಬೆಂಗಳೂರು: ರಾಜ್ಯ ಹೈಕೋರ್ಟ್‌ಗೆ ನೇಮಕಗೊಂಡಿರುವ ನೂತನ ನ್ಯಾಯಮೂರ್ತಿ ಪಂಜಿಗದ್ದೆ ಕೃಷ್ಣಭಟ್ ಅವರು ಗುರುವಾರ ಪ್ರಮಾಣ ವಚನ ಸ್ವೀಕರಿಸಿದರು. ಕೋರ್ಟ್ ಹಾಲ್ ಒಂದರಲ್ಲಿ ನಡೆದ ಸರಳ ಸಮಾರಂಭದಲ್ಲಿ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ ಅವರು, ನ್ಯಾ. ಪಿ.ಕೃಷ್ಣಭಟ್ ಅವರಿಗೆ ಪ್ರಮಾಣವಚನ ಬೋಧಿಸಿದರು.

ಜಿಲ್ಲಾ ನ್ಯಾಯಾಧೀಶರಾಗಿ ಸುದೀರ್ಘ 22 ವರ್ಷಗಳ ಕಾಲ ಸೇವೆ ಸಲ್ಲಿಸಿರುವ ನ್ಯಾಯಮೂರ್ತಿ ಪಿ. ಕೃಷ್ಣಭಟ್ ಅವರನ್ನು ಸುಪ್ರೀಂ ಕೋರ್ಟ್ ಕೊಲಿಜಿಯಂ, 2019ರ ಅಕ್ಟೋಬರ್ 15 ರಂದು ಹೈಕೋರ್ಟ್ ನ್ಯಾಯಮೂರ್ತಿ ಹುದ್ದೆಗೆ ಶಿಫಾರಸು ಮಾಡಿತ್ತು. ಈ ಶಿಫಾರಸು ಪರಿಗಣಿಸಿದ ಕೇಂದ್ರ ಸರ್ಕಾರ, ಮೇ 18ರಂದು ಪಿ. ಕೃಷ್ಣಭಟ್ ಅವರನ್ನು ಹೈಕೋರ್ಟ್ ಹೆಚ್ಚುವರಿ ನ್ಯಾಯಮೂರ್ತಿಯಾಗಿ ನೇಮಿಸಿ ಆದೇಶ ಹೊರಡಿಸಿತ್ತು. ಗುರುವಾರ ಹೈಕೋರ್ಟ್ ನ್ಯಾಯಮೂರ್ತಿಯಾಗಿ ಪ್ರಮಾಣವಚನ ಸ್ವೀಕರಿಸಿರುವ ಕೃಷ್ಣಭಟ್ ಮುಂದಿನ ಎರಡು ವರ್ಷಗಳ ಕಾಲ ಸೇವೆ ಸಲ್ಲಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಹೈಕೋರ್ಟ್ ನ್ಯಾಯಮೂರ್ತಿಗಳಾದ ಬಿ.ವಿ. ನಾಗರತ್ನ, ಎಸ್.ಎನ್. ಸತ್ಯನಾರಾಯಣ, ಅರವಿಂದ ಕುಮಾರ್, ಎಸ್. ಸುಜಾತಾ, ಜಿ. ನರೇಂದ್ರರ್, ರಾಜ್ಯ ಅಡ್ವೋಕೇಟ್ ಜನರಲ್ ಪ್ರಭುಲಿಂಗ ಕೆ. ನಾವದಗಿ, ಹೆಚ್ಚುವರಿ ಸಾಲಿಸಿಟರ್ ಜನರಲ್ ಎಂ.ಬಿ. ನರಗುಂದ, ಸಹಾಯಕ ಸಾಲಿಸಿಟರ್ ಜನರಲ್ ಸಿ. ಶಶಿಕಾಂತ, ಬೆಂಗಳೂರು ವಕೀಲರ ಸಂಘದ ಅಧ್ಯಕ್ಷ ಎ.ಪಿ. ರಂಗನಾಥ್ ಮತ್ತಿತರರು ಭಾಗವಹಿಸಿದ್ದರು.

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.