ETV Bharat / city

ಪಿಡಿಒಗಳಿಗೆ ಜನನ, ಮರಣ ನೋಂದಣಿ ಹೊಣೆ: ಸರ್ಕಾರ ಆದೇಶ

ಪಿಡಿಒಗಳಿಗೆ ಜನನ, ಮರಣ ನೋಂದಣಾಧಿಕಾರಿ, ಗ್ರಾಮ ಲೆಕ್ಕಿಗರಿಗೆ ಉಪನೋಂದಾಣಿಕಾಧಿಯಾಗಿ ಹೆಚ್ಚುವರಿ ಹೊಣೆ ನೀಡಲು ಸರ್ಕಾರ ಆದೇಶಿಸಿದೆ.

ವಿಧಾನಸೌಧ
ವಿಧಾನಸೌಧ
author img

By

Published : Feb 20, 2022, 7:31 AM IST

ಬೆಂಗಳೂರು: ಪಿಡಿಒಗಳನ್ನು ಜನನ, ಮರಣ ನೋಂದಣಾಧಿಕಾರಿಗಳನ್ನಾಗಿ ಹಾಗೂ ಗ್ರಾಮ ಲೆಕ್ಕಿಗರನ್ನು ಜನನ, ಮರಣ ಉಪ ನೋಂದಣಾಧಿಕಾರಿಗಳನ್ನಾಗಿ ನೇಮಿಸಿ ಸರ್ಕಾರ ಆದೇಶಿಸಿದೆ.

ಗ್ರಾಮೀಣ ಪ್ರದೇಶದಲ್ಲಿ ನಾಗರಿಕ ನೋಂದಣಿ ಪದ್ಧತಿಯನ್ನು ಬಲಪಡಿಸಲು ಹಾಗೂ ಶೇ.100 ರಷ್ಟು ಜನನ, ಮರಣ ನೋಂದಣಿ ದಾಖಲಿಸಲು ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳನ್ನು ಜನನ, ಮರಣ ನೋಂದಣಾಧಿಕಾರಿಗಳನ್ನಾಗಿ ಮಾಡಲು ಕೇಂದ್ರ ಸರ್ಕಾರದ ಅನುಮೋದನೆ ಕೋರಲಾಗಿತ್ತು. ಅದಕ್ಕೆ ಕೇಂದ್ರ ಸರ್ಕಾರ ತನ್ನ ಸಹಮತಿ ವ್ಯಕ್ತಪಡಿಸಿತ್ತು.

ಕಳೆದ ವರ್ಷ ಸೆಪ್ಟೆಂಬರ್​​ನಲ್ಲಿ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು ಹಾಗೂ ಅಭಿವೃದ್ಧಿ ಆಯುಕ್ತರ ಅಧ್ಯಕ್ಷತೆಯಲ್ಲಿ ನಡೆದ ಸಭೆಯ ನಡವಳಿಯಲ್ಲಿ ಗ್ರಾಮೀಣ ಪ್ರದೇಶದ ಜನನ ಮತ್ತು ಮರಣ ನೋಂದಣಿಯನ್ನು ಗ್ರಾಮ ಪಂಚಾಯಿತಿಗಳು ಹೆಚ್ಚುವರಿಯಾಗಿ ಮಾಡಬೇಕು. ಒಂದು ವೇಳೆ ಗ್ರಾಮ ಪಂಚಾಯಿತಿ ಹಾಗೂ ಗ್ರಾಮ ಲೆಕ್ಕಾಧಿಕಾರಿಯ ಕಾರ್ಯ ವ್ಯಾಪ್ತಿಯ ಬಗ್ಗೆ ತಕರಾರು ಬಂದಲ್ಲಿ, ಗ್ರಾಮ ಪಂಚಾಯಿತಿಗಳು ತೀರ್ಮಾನ ತೆಗೆದು ಕೊಳ್ಳಬೇಕೆಂದು ಸೂಚಿಸಲಾಗಿದೆ. ಕಂದಾಯ ಇಲಾಖೆಯೂ ಈ ನಿಟ್ಟಿನಲ್ಲಿ ತನ್ನ ಸಹಮತಿ ನೀಡಿತ್ತು.

ಇದೀಗ ಸರ್ಕಾರ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳನ್ನು ಜನನ, ಮರಣ ನೋಂದಣಾಧಿಕಾರಿಗಳನ್ನಾಗಿ ಹಾಗೂ ಗ್ರಾಮ ಲೆಕ್ಕಿಗರನ್ನು ಉಪ ನೋಂದಣಾಧಿಕಾರಿಗಳನ್ನಾಗಿ ನೇಮಿಸಲು ಆದೇಶಿಸಿದೆ.

ಇದನ್ನೂ ಓದಿ:50 ವರ್ಷಗಳಿಂದ ಮಸೀದಿ ನಿರ್ವಹಣೆ ಮಾಡುತ್ತಿದೆ ಹಿಂದೂ ಕುಟುಂಬ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.