ಬೆಂಗಳೂರು: ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ನಟ ಪುನೀತ್ ರಾಜಕುಮಾರ್ ಅವರನ್ನು ನಿನ್ನೆ ಇಹಲೋಕ ತ್ಯಜಿಸಿದ್ದಾರೆ. ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ರಾತ್ರಿಯಿಡೀ ಅಂತಿಮ ದರ್ಶನಕ್ಕೆ ಅವಕಾಶ ಮಾಡಿಕೊಟ್ಟರೂ ಸಹ ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಜನಸಾಗರ ಹರಿದುಬರುತ್ತಿದೆ.
ರಾಜ್ಯದ ವಿವಿಧ ಜಿಲ್ಲೆಗಳಿಂದ ಪುನೀತ್ ಅಂತಿಮ ದರ್ಶನ ಪಡೆಯಲು ಮಕ್ಕಳು, ಯುವಕರು, ವಯೋವೃದ್ಧರು ಆಗಮಿಸುತ್ತಿದ್ದು, ಉತ್ತರ ಕರ್ನಾಟಕ ಭಾಗದಿಂದ ಬಸ್ಗಳನ್ನು ಮಾಡಿಕೊಂಡು ಅಭಿಮಾನಿಗಳು ಬರುತ್ತಿದ್ದಾರೆ. ಜನರನ್ನು ಅಷ್ಟೇ ತಾಳ್ಮೆಯಿಂದ ಪೊಲೀಸರು ನಿಯಂತ್ರಿಸುತ್ತಿದ್ದಾರೆ.
ಮಾಜಿ ಸಚಿವ ಸಿ.ಪಿ ಯೋಗೀಶ್ವರ್, ನಟ ಚೇತನ್, ಮಾಜಿ ಸಚಿವ, ಕಾಂಗ್ರೆಸ್ ಮುಖಂಡ ಚಲುವರಾಯಸ್ವಾಮಿ, ಖ್ಯಾತ ಗಾಯಕ ರಾಜೇಶ್ ಕೃಷ್ಣನ್ ಸೇರಿದಂತೆ ಹಲವರು ಪುನೀತ್ ಅಂತಿಮ ದರ್ಶನ ಪಡೆದರು.
ಹೆಚ್ಚುತ್ತಿರೋ ಅಭಿಮಾನಿ ಸಮೂಹ:
ರಾತ್ರಿಯಿಡೀ ನೆಚ್ಚಿನ ನಾಯಕನ ಅಂತಿಮ ದರ್ಶನಕ್ಕೆ ಅವಕಾಶ ನೀಡಲಾಗಿತ್ತು. ಸಮಯ ಕಳೆದಂತೆ ಮತ್ತಷ್ಟು ಹೆಚ್ಚಿನ ಸಂಖ್ಯೆಯಲ್ಲಿ ಅಭಿಮಾನಿಗಳು ಆಗಮಿಸುತ್ತಿದ್ದಾರೆ. ಇಂದು ಬೆಳಗಾಗುತ್ತಿದ್ದಂತೆ ಮತ್ತಷ್ಟು ಜನ ಕಂಠೀರವ ಸ್ಟೂಡಿಯೋ ಕಡೆಗೆ ಮುಖಮಾಡಿದ್ದು, ರಾಜ್ಯ, ಅಂತಾರಾಜ್ಯಗಳಿಂದ ಜನರು ಬರುತ್ತಿದ್ದಾರೆ.
ಪೊಲೀಸ್ ಭದ್ರತೆ:
ಕಂಠೀರವ ಕ್ರೀಡಾಂಗಣದಲ್ಲಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಹಾವೇರಿ, ಹುಬ್ಬಳ್ಳಿಯಿಂದ ರಿಸರ್ವ್ ಪೊಲೀಸರನ್ನು ಕರೆತಂದು ಇಲ್ಲಿ ನಿಯೋಜನೆ ಮಾಡಲಾಗಿದೆ. ನಿನ್ನೆ ರಾತ್ರಿಯೇ 200 ಪೊಲೀಸರು ಬಂದಿಳಿದಿದ್ದಾರೆ.