ಬೆಂಗಳೂರು : ಕಂದಾಯ ಸಚಿವ ಆರ್ ಅಶೋಕ್ ಇಂದು ಮಧ್ಯಾಹ್ನ ಶಿವಾಜಿನಗರದ ಜನನಿಬಿಡ ಪ್ರದೇಶಗಳಿಗೆ ತೆರಳಿ ಗುಂಪು ಗುಂಪಾಗಿ ಸೇರಿದ್ದ ಜನರಿಗೆ ಕೈಮುಗಿದು ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಜಾಗೃತಿ ಮೂಡಿಸಿದರು. ಮನೆ ಬಿಟ್ಟು ಹೊರ ಬರಬೇಡಿ ಎಂದು ಕೇಳಿಕೊಂಡರು.
ಸ್ಥಳೀಯ ಶಾಸಕ ರಿಜ್ವಾನ್ ಅರ್ಷದ್ ಕೂಡಾ ಮನೆಯಿಂದ ಹೊರಗೆ ಬರಬೇಡಿ ಎಂದು ಮನವಿ ಮಾಡಿದರು. ಈ ವೇಳೆ ಪೊಲೀಸ್ ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿಗಳು ಸ್ಥಳದಲ್ಲಿದ್ದರು.