ETV Bharat / city

ಇಂದಿನ ತೈಲ ದರ.. ಮಂಗಳೂರಲ್ಲಿ 56 ಪೈಸೆ ಪೆಟ್ರೋಲ್ ಇಳಿಕೆ

author img

By

Published : Jun 8, 2022, 10:32 AM IST

ದೇಶ ಹಾಗೂ ರಾಜ್ಯದ ಪ್ರಮುಖ ನಗರಗಳಲ್ಲಿ ಇಂದಿನ ಪೆಟ್ರೋಲ್, ಡೀಸೆಲ್ ಬೆಲೆ ಹೀಗಿದೆ..

ಇಂದಿನ ತೈಲ ದರ
ಇಂದಿನ ತೈಲ ದರ

ಬೆಂಗಳೂರು/ನವದೆಹಲಿ: ದೇಶದಲ್ಲಿ ಇಂಧನ ದರಗಳು ನಿತ್ಯವೂ ಪರಿಷ್ಕರಿಸಲ್ಪಡುತ್ತವೆ. ತೈಲ ಬೆಲೆಯು ಅಬಕಾರಿ ಸುಂಕ, ಮೌಲ್ಯವರ್ಧಿತ ತೆರಿಗೆ (ವ್ಯಾಟ್) ಮತ್ತು ಡೀಲರ್ ಕಮಿಷನ್ ಒಳಗೊಂಡಿರುತ್ತದೆ. ವ್ಯಾಟ್‌ ರಾಜ್ಯದಿಂದ ರಾಜ್ಯಕ್ಕೆ ವಿಭಿನ್ನವಾಗಿರುತ್ತದೆ. ತೈಲ ಬೆಲೆಯಲ್ಲಿ ಇಂದು ಯಾವುದೇ ಬದಲಾವಣೆ ಆಗಿಲ್ಲ.

ಇಂದಿನ ದರಗಳ ಬಗ್ಗೆ ತಿಳಿಯೋದಾದರೆ: ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 96.72 ರೂ.ಗೆ ಇದ್ದು, ಡೀಸೆಲ್ ಬೆಲೆ 89.62 ಆಗಿದೆ. ಮುಂಬೈನಲ್ಲಿ ಇತ್ತೀಚಿನ ಅಬಕಾರಿ ಸುಂಕ ಕಡಿತದ ನಂತರ ಪೆಟ್ರೋಲ್ ಪ್ರತಿ ಲೀಟರ್‌ಗೆ 111.35 ರೂ.ಗೆ ಮಾರಾಟವಾಗುತ್ತಿದ್ದು, ಡೀಸೆಲ್ 97.28 ರೂ. ಇದೆ. ಕೋಲ್ಕತ್ತಾದಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್‌ಗೆ 106.03 ರೂ. ಆಗಿದ್ದರೆ, ಡೀಸೆಲ್ ಬೆಲೆ 92.76 ರೂ. ಆಗಿದೆ. ಚೆನ್ನೈನಲ್ಲಿ ಪ್ರತಿ ಲೀಟರ್ ಪೆಟ್ರೋಲ್‌ಗೆ 102.63 ರೂ. ಮತ್ತು ಡೀಸೆಲ್‌ಗೆ 94.24 ರೂ.ಗೆ ಮಾರಾಟವಾಗುತ್ತಿದೆ. ಪಂಜಾಬ್‌ನ ಚಂಡೀಗಢದಲ್ಲಿ ಪೆಟ್ರೋಲ್ ಬೆಲೆ 96.20 ರೂ. ಮತ್ತು ಡೀಸೆಲ್ ಬೆಲೆ 84.26 ರೂ. ಆಗಿದೆ.

ರಾಜ್ಯದಲ್ಲಿ ತೈಲ ದರ: ರಾಜಧಾನಿ ಬೆಂಗಳೂರಿನಲ್ಲಿ ಪೆಟ್ರೋಲ್​ ಮತ್ತು ಡೀಸೆಲ್​ ಬೆಲೆ ಯಥಾಸ್ಥಿತಿಯಲ್ಲಿದೆ. ಪೆಟ್ರೋಲ್​ ಲೀಟರ್​ಗೆ 101.96 ರೂ.ಗೆ ಮಾರಾಟವಾಗುತ್ತಿದ್ದರೆ, ಡೀಸೆಲ್ 87.91ರೂ.ಗೆ ಮಾರಾಟವಾಗುತ್ತಿದೆ. ಹುಬ್ಬಳ್ಳಿಯಲ್ಲಿ ಪೆಟ್ರೋಲ್ ದರ ಒಂದು ಲೀಟರ್​ಗೆ 101.65 ರೂಪಾಯಿ ಮತ್ತು ಡೀಸೆಲ್​ ದರ ಒಂದು ಲೀಟರ್​ಗೆ 87.65 ರೂಪಾಯಿ ಇದೆ. ಮಂಗಳೂರಿನಲ್ಲಿ ಪೆಟ್ರೋಲ್ ಲೀಟರ್​ಗೆ 101.21 ರೂಪಾಯಿ ( 56 ಪೈಸೆ ಇಳಿಕೆ), ​ ಡೀಸೆಲ್ 87.20 (50 ಪೈಸೆ ಏರಿಕೆ) ರೂ. ಗೆ ಮಾರಾಟವಾಗುತ್ತಿದೆ. ಮೈಸೂರಿನಲ್ಲಿ ಒಂದು ಲೀಟರ್‌ ಪೆಟ್ರೋಲ್​ಗೆ 101.44 ರೂಪಾಯಿ ಇದ್ದು, ಒಂದು ಲೀಟರ್‌ ಡೀಸೆಲ್​ಗೆ 87.43 ರೂಪಾಯಿ ಇದೆ. ದಾವಣಗೆರೆಯಲ್ಲಿ ಪೆಟ್ರೋಲ್ ಲೀಟರ್​ಗೆ 103.54 ರೂಪಾಯಿ ಇದ್ದು, ಲೀಟರ್​ ಡೀಸೆಲ್​ಗೆ 89.52 ರೂಪಾಯಿ ಇದೆ.

ಇದನ್ನೂ ಓದಿ: ಭಾರತದಲ್ಲಿ ಮತ್ತಷ್ಟು ಹೆಚ್ಚಾಯ್ತು ಕೋವಿಡ್​.. 5,233 ಹೊಸ ಪ್ರಕರಣ ದಾಖಲು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.