ಬೆಂಗಳೂರು: ರಾಜ್ಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿರುವ ಐಪಿಎಸ್ ಅಧಿಕಾರಿಗಳ ಫೋನ್ ಕದ್ದಾಲಿಕೆ ಪ್ರಕರಣವನ್ನು ರಾಜ್ಯ ಸರ್ಕಾರ ಅಧಿಕೃತವಾಗಿ ಸಿಬಿಐ ತನಿಖೆಗೆ ವಹಿಸಿದೆ.
2018ರ ಆಗಸ್ಟ್ 1ರಿಂದ ಈವರೆಗೂ ಕಾನೂನುಬಾಹಿರವಾಗಿ ಆಡಳಿತ ಹಾಗೂ ಪ್ರತಿಪಕ್ಷಗಳ ನಾಯಕರು ಮತ್ತು ಅವರ ಸಂಬಂಧಿಕರು ಹಾಗೂ ಸಹವರ್ತಿಗಳ ಫೋನ್ ಕದ್ದಾಲಿಕೆ ಮಾಡಿರುವ ಆರೋಪ ಕೇಳಿ ಬಂದಿತ್ತು. ಫೋನ್ ಕದ್ದಾಲಿಕೆ ಪ್ರಕರಣಕ್ಕೆ ಸಂಬಂಧಪಟ್ಟ ಎಲ್ಲ ಸಾಕ್ಷ್ಯಾಧಾರಗಳನ್ನು ಸಿಬಿಐಗೆ ನೀಡಲು ರಾಜ್ಯ ಪೊಲೀಸ್ ಮಹಾನಿರ್ದೇಶಕಿ ನೀಲಮಣಿ ಎನ್. ರಾಜು ಅವರಿಗೆ ಆದೇಶಿಸಲಾಗಿದೆ.
-
ರಾಜ್ಯದಲ್ಲಿ ದೂರವಾಣಿ ಕರೆಗಳ ಕದ್ದಾಲಿಕೆ ಪ್ರಕರಣವನ್ನು ಸರ್ಕಾರ ಸಿಬಿಐಗೆ ವಹಿಸಿ ಆದೇಶ ಹೊರಡಿಸಿದೆ.ರಾಜ್ಯ ಪೊಲೀಸ್ ಮಹಾನಿರ್ದೇಶಕರು ಹಾಗೂ ಮಹಾನಿರೀಕ್ಷಕರ ಶಿಫಾರಸಿನ ಮೇರೆಗೆ ಸರ್ಕಾರ ಈ ಕ್ರಮ ಕೈಗೊಂಡಿದೆ. pic.twitter.com/LecQyBGrcJ
— CM of Karnataka (@CMofKarnataka) August 19, 2019 " class="align-text-top noRightClick twitterSection" data="
">ರಾಜ್ಯದಲ್ಲಿ ದೂರವಾಣಿ ಕರೆಗಳ ಕದ್ದಾಲಿಕೆ ಪ್ರಕರಣವನ್ನು ಸರ್ಕಾರ ಸಿಬಿಐಗೆ ವಹಿಸಿ ಆದೇಶ ಹೊರಡಿಸಿದೆ.ರಾಜ್ಯ ಪೊಲೀಸ್ ಮಹಾನಿರ್ದೇಶಕರು ಹಾಗೂ ಮಹಾನಿರೀಕ್ಷಕರ ಶಿಫಾರಸಿನ ಮೇರೆಗೆ ಸರ್ಕಾರ ಈ ಕ್ರಮ ಕೈಗೊಂಡಿದೆ. pic.twitter.com/LecQyBGrcJ
— CM of Karnataka (@CMofKarnataka) August 19, 2019ರಾಜ್ಯದಲ್ಲಿ ದೂರವಾಣಿ ಕರೆಗಳ ಕದ್ದಾಲಿಕೆ ಪ್ರಕರಣವನ್ನು ಸರ್ಕಾರ ಸಿಬಿಐಗೆ ವಹಿಸಿ ಆದೇಶ ಹೊರಡಿಸಿದೆ.ರಾಜ್ಯ ಪೊಲೀಸ್ ಮಹಾನಿರ್ದೇಶಕರು ಹಾಗೂ ಮಹಾನಿರೀಕ್ಷಕರ ಶಿಫಾರಸಿನ ಮೇರೆಗೆ ಸರ್ಕಾರ ಈ ಕ್ರಮ ಕೈಗೊಂಡಿದೆ. pic.twitter.com/LecQyBGrcJ
— CM of Karnataka (@CMofKarnataka) August 19, 2019
ನಗರ ಪೊಲೀಸ್ ಆಯುಕ್ತ ಹುದ್ದೆಗಾಗಿ ಐಪಿಎಸ್ ಅಧಿಕಾರಿಯಾಗಿರುವ ಭಾಸ್ಕರ್ ರಾವ್ ಅವರ ಫೋನ್ ಕದ್ದಾಲಿಕೆ ಮಾಡಲಾಗಿತ್ತು ಎಂಬ ಆರೋಪ ಕೇಳಿಬಂದಿತ್ತು. ಅಲ್ಲದೆ, ಹಿಂದಿನ ದೋಸ್ತಿ ಸರ್ಕಾರದಲ್ಲಿ ಮುಖ್ಯಮಂತ್ರಿಯಾಗಿದ್ದ ಹೆಚ್.ಡಿ. ಕುಮಾರಸ್ವಾಮಿ ಅವರು ರಾಜಕೀಯ ನಾಯಕರ ಫೋನ್ ಕದ್ದಾಲಿಕೆ ಮಾಡಿದ್ದರು ಎಂಬ ಆರೋಪ ಕೇಳಿ ಬಂದಿತ್ತು. ಈ ಆರೋಪವನ್ನು ಕುಮಾರಸ್ವಾಮಿ ಅವರು ತಳ್ಳಿ ಹಾಕಿದ್ದರು. ಕ್ಷಿಪ್ರ ರಾಜಕೀಯ ಬೆಳವಣಿಗೆ ಹಿನ್ನೆಲೆಯಲ್ಲಿ ಫೋನ್ ಟ್ಯಾಪಿಂಗ್ ಪ್ರಕರಣವನ್ನು ಸಿಬಿಐ ತನಿಖೆಗೆ ರಾಜ್ಯ ಸರ್ಕಾರ ಒಪ್ಪಿಸಿದೆ.
-
2018ರ ಆಗಸ್ಟ್ 1 ರಿಂದ ಈವರೆಗಿನ ಅವಧಿಗೆ ನಡೆದಿರಬಹುದಾದ ಆಡಳಿತ ಹಾಗೂ ವಿರೋಧ ಪಕ್ಷಗಳ ಮುಖಂಡರು,ಅವರ ಬಂಧುಮಿತ್ರರ ಹಾಗೂ ಸರ್ಕಾರಿ ಅಧಿಕಾರಿಗಳ ದೂರವಾಣಿ ಕದ್ದಾಲಿಕೆ ಕುರಿತು ತನಿಖೆ ನಡೆಸುವಂತೆ ಆದೇಶಿಸಲಾಗಿದೆ.
— CM of Karnataka (@CMofKarnataka) August 19, 2019 " class="align-text-top noRightClick twitterSection" data="
">2018ರ ಆಗಸ್ಟ್ 1 ರಿಂದ ಈವರೆಗಿನ ಅವಧಿಗೆ ನಡೆದಿರಬಹುದಾದ ಆಡಳಿತ ಹಾಗೂ ವಿರೋಧ ಪಕ್ಷಗಳ ಮುಖಂಡರು,ಅವರ ಬಂಧುಮಿತ್ರರ ಹಾಗೂ ಸರ್ಕಾರಿ ಅಧಿಕಾರಿಗಳ ದೂರವಾಣಿ ಕದ್ದಾಲಿಕೆ ಕುರಿತು ತನಿಖೆ ನಡೆಸುವಂತೆ ಆದೇಶಿಸಲಾಗಿದೆ.
— CM of Karnataka (@CMofKarnataka) August 19, 20192018ರ ಆಗಸ್ಟ್ 1 ರಿಂದ ಈವರೆಗಿನ ಅವಧಿಗೆ ನಡೆದಿರಬಹುದಾದ ಆಡಳಿತ ಹಾಗೂ ವಿರೋಧ ಪಕ್ಷಗಳ ಮುಖಂಡರು,ಅವರ ಬಂಧುಮಿತ್ರರ ಹಾಗೂ ಸರ್ಕಾರಿ ಅಧಿಕಾರಿಗಳ ದೂರವಾಣಿ ಕದ್ದಾಲಿಕೆ ಕುರಿತು ತನಿಖೆ ನಡೆಸುವಂತೆ ಆದೇಶಿಸಲಾಗಿದೆ.
— CM of Karnataka (@CMofKarnataka) August 19, 2019
ಸಿಬಿಐ ತನಿಖೆಗೆ ಆದೇಶ: ರಾಜ್ಯದಲ್ಲಿ ನಡೆದಿದೆ ಎನ್ನಲಾದ ದೂರವಾಣಿ ಕರೆಗಳ ಕದ್ದಾಲಿಕೆ ಪ್ರಕರಣವನ್ನು ಸರ್ಕಾರ ಸಿಬಿಐಗೆ ವಹಿಸಿ ರಾಜ್ಯ ಪೊಲೀಸ್ ಮಹಾನಿರ್ದೇಶಕರು ಅಧಿಕೃತವಾಗಿ ಆದೇಶ ಹೊರಡಿಸಿದ್ದಾರೆ. ಸರ್ಕಾರದ ಶಿಫಾರಸ್ಸಿನ ಹಿನ್ನೆಲೆಯಲ್ಲಿ ನಿರ್ದೇಶಿಸಲಾಗಿದೆ.
2018ರ ಆಗಸ್ಟ್ 1 ರಿಂದ ಇಲ್ಲಿಯವರೆಗೂ ನಡೆದಿರಬಹುದಾದ ದೂರವಾಣಿ ಕದ್ದಾಲಿಕೆ ಕುರಿತು ತನಿಖೆ ನಡೆಸಲಾಗುತ್ತದೆ. ಸೈಬರ್ ಕ್ರೈಮ್ನಲ್ಲಿ ದಾಖಲಾಗಿರುವ ಪ್ರಕರಣದ ಸಂಖ್ಯೆ 6963/2019 ಇದಾಗಿದೆ. ಪ್ರಕರಣದಲ್ಲಿ ಯಾರೆಲ್ಲ ಅಧಿಕಾರಿಗಳ ಹೆಸರು ಕೇಳಿಬಂದಿದೆ? ಯಾರ ಫೋನ್ ಕದ್ದಾಲಿಕೆಯಾಗಿದೆ? ಹೇಗೆ ಸೋರಿಕೆಯಾಗಿದೆ? ಎಂಬೆಲ್ಲ ಪ್ರಶ್ನೆಗಳನ್ನು ಮುಂದಿಟ್ಟುಕೊಂಡು ವಿಚಾರಣೆ ಆರಂಭಿಸಲಿದ್ದಾರೆ.