ETV Bharat / city

ಪಂಚಾಯತ್ ರಾಜ್ ಕಾಯ್ದೆಗೆ ತಿದ್ದುಪಡಿ ಪ್ರಶ್ನಿಸಿ ಪಿಐಎಲ್: ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್

ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿ ಕ್ಷೇತ್ರಗಳ ಗಡಿ ಮತ್ತು ಮೀಸಲಾತಿ ನಿಗದಿಪಡಿಸುವ ಅಧಿಕಾರವನ್ನು ಚುನಾವಣಾ ಆಯೋಗದಿಂದ ಹಿಂಪಡೆದಿರುವ ಕ್ರಮ ಪ್ರಶ್ನಿಸಿ ಚುನಾವಣೆ ಆಯೋಗ ಸಲ್ಲಿಸಿರುವ ಅರ್ಜಿ ಸಂಬಂಧ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ನೀಡಿದೆ.

author img

By

Published : Dec 6, 2021, 9:26 PM IST

ಪಂಚಾಯತ್ ರಾಜ್ ಕಾಯ್ದೆಗೆ ತಿದ್ದುಪಡಿ ಪ್ರಶ್ನಿಸಿ ಪಿಐಎಲ್,PIL on Panchayat Raj Amendment
ಪಂಚಾಯತ್ ರಾಜ್ ಕಾಯ್ದೆಗೆ ತಿದ್ದುಪಡಿ ಪ್ರಶ್ನಿಸಿ ಪಿಐಎಲ್

ಬೆಂಗಳೂರು: ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಕ್ಷೇತ್ರಗಳ ಗಡಿ ಮತ್ತು ಮೀಸಲಾತಿ ನಿಗದಿಪಡಿಸುವ ಅಧಿಕಾರವನ್ನು ಚುನಾವಣಾ ಆಯೋಗದಿಂದ ಹಿಂಪಡೆದು, ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗ ರಚಿಸಿ ಅದಕ್ಕೆ ನೀಡುವ ನಿಟ್ಟಿನಲ್ಲಿ ಕರ್ನಾಟಕ ಪಂಚಾಯತ್ ರಾಜ್ ಮತ್ತು ಗ್ರಾಮ ಸ್ವರಾಜ್ ಕಾಯ್ದೆಗೆ ತಿದ್ದುಪಡಿ ತಂದಿರುವ ಕ್ರಮ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿ ಸಂಬಂಧ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.

ಈ ಕುರಿತು ರಾಜ್ಯ ಚುನಾವಣಾ ಆಯೋಗ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯ ಪೀಠ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಲು ಆದೇಶಿಸಿದೆ.

ಅರ್ಜಿದಾರರ ಕೋರಿಕೆ:
ರಾಜ್ಯದ ಹಲವು ಜಿಪಂ ಮತ್ತು ತಾಪಂ ಅವಧಿ 2021ರ ಏಪ್ರಿಲ್ - ಆಗಸ್ಟ್ ನಡುವೆ ಮುಕ್ತಾಯಗೊಂಡಿದೆ. ರಾಜ್ಯ ಸರ್ಕಾರ 2021ರ ಮಾ.12ರಂದು, ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಕಾಯ್ದೆಗೆ ತಿದ್ದುಪಡಿ ತಂದು, ರಾಜ್ಯಪಾಲರ ಅಂಕಿತ ಪಡೆದು 2021ರ ಸೆ.18ರಂದು ಗೆಜೆಟ್ ನೋಟಿಫಿಕೇಷನ್ ಪ್ರಕಟಿಸಲಾಗಿದೆ.

ತಿದ್ದುಪಡಿ ಕಾಯ್ದೆಯ ಸೆಕ್ಷನ್ 12(1)ರ ಪ್ರಕಾರ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿಗಳ ಚುನಾವಣೆ ಹಿನ್ನೆಲೆಯಲ್ಲಿ ಪುನರ್ ವಿಂಗಡಣೆ ಮತ್ತು ಸೆಕ್ಷನ್ 12(2)ರ ಪ್ರಕಾರ ಮೀಸಲು ನಿಗದಿಪಡಿಸಿ ಅಧಿಸೂಚನೆ ಹೊರಡಿಸಲು ರಾಜ್ಯ ಚುನಾವಣಾ ಆಯೋಗ ಹೊಂದಿದ್ದ ಅಧಿಕಾರ ಹಿಂಪಡೆಯಲಾಗಿದೆ.

ಹಾಗೆಯೇ, ತಿದ್ದುಪಡಿ ಕಾಯ್ದೆಯ ಸೆಕ್ಷನ್ 12(3) ರ ಅಡಿ ಮೀಸಲು ಮತ್ತು ಕ್ಷೇತ್ರ ಪುನರ್ ವಿಂಗಡಣೆ ಅಧಿಕಾರವನ್ನು ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಸೀಮಾ ಆಯೋಗಕ್ಕೆ ನೀಡಿದೆ. ಆಯೋಗವನ್ನು ರಚನೆ ಮಾಡಲು ಕೂಡಲೇ ಕ್ರಮ ಕೈಗೆತ್ತಿಕೊಳ್ಳುವಂತೆ ಸೂಚಿಸಲಾಗಿದೆ.

ಸಂವಿಧಾನದ ವಿಧಿ 243 ಇ(3) ಪ್ರಕಾರ ಪಂಚಾಯಿತಿ ಕಚೇರಿಗಳ ಅಧಿಕಾರಾವಧಿ ಪೂರ್ಣಗೊಳ್ಳುವ ಮುನ್ನವೇ ಚುನಾವಣೆ ನಡೆಸಬೇಕು. ಈಗಾಗಲೇ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿಗಳ ಅವಧಿ ಪೂರ್ಣಗೊಂಡಿದ್ದು, ಚುನಾವಣೆ ಬಾಕಿಯಿರುವ ಸಂದರ್ಭದಲ್ಲಿ ಸರ್ಕಾರ ತಿದ್ದುಪಡಿ ತಂದು ಚುನಾವಣಾ ಆಯೋಗದ ಅಧಿಕಾರವನ್ನು ಮತ್ತೊಂದು ಆಯೋಗಕ್ಕೆ ನೀಡಿದೆ. ಅದರಂತೆ ಮೀಸಲು ಮತ್ತು ಕ್ಷೇತ್ರ ಪುನರ್ವಿಂಗಡಣೆ ಪ್ರಕ್ರಿಯೆ ನಡೆಸಿ, ಚುನಾವಣೆ ಪೂರ್ಣಗೊಳ್ಳಲು ಒಂದೂವರೆ ವರ್ಷ ಬೇಕಾಗುತ್ತದೆ.

ತಿದ್ದುಪಡಿ ಕಾಯ್ದೆಯಿಂದಾಗಿ ಸಂವಿಧಾನದ ವಿಧಿ 243ಇ ಆಶಯಕ್ಕೆ ಸೋಲುಂಟು ಮಾಡಲಿದೆ. ಆದ್ದರಿಂದ ‘ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ತಿದ್ದುಪಡಿ) ಕಾಯ್ದೆ-2021 ನ್ನು ರದ್ದುಪಡಿಸಬೇಕು. ಚುನಾವಣಾ ಆಯೋಗ ಈಗಾಗಲೇ ಪ್ರಕಟಿಸಿರುವ ಕರಡು ಮೀಸಲು ಮತ್ತು ಕ್ಷೇತ್ರ ಮರುವಿಂಗಡಣೆ ಅಧಿಸೂಚನೆ ಆಧರಿಸಿ ಚುನಾವಣಾ ಪ್ರಕ್ರಿಯೆ ಮುಂದುವರಿಸಲು ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಅರ್ಜಿಯಲ್ಲಿ ಮನವಿ ಮಾಡಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.