ETV Bharat / city

ಸಾರಿಗೆ ನೌಕರರ ಮುಷ್ಕರ.. ನ್ಯಾಯಮೂರ್ತಿ ನೇತೃತ್ವದ ಸಮಿತಿ ರಚನೆ ಕೋರಿ ಪಿಐಎಲ್

ಸಾರಿಗೆ ನೌಕರರು ವಿವಿಧ ಬೇಡಿಕೆಗೆ ಆಗ್ರಹಿಸಿ 2021ರ ಏ.7ರಿಂದ ಮುಷ್ಕರ ನಡೆಸುತ್ತಿದ್ದಾರೆ. ಇದರಿಂದ ಬಸ್‌ಗಳ ಸೇವೆ ಸ್ಥಗಿತಗೊಂಡಿದ್ದು, ಸಾರ್ವಜನಿಕರು ಅನಿವಾರ್ಯವಾಗಿ ಟ್ಯಾಕ್ಸಿ ಹಾಗೂ ಆಟೋಗಳ ದುಬಾರಿ ಸಾರಿಗೆ ಸೌಲಭ್ಯದ ಮೊರೆ ಹೋಗುವಂತಾಗಿದೆ. ಬಡವರ ಮೇಲೆ ಹೆಚ್ಚಿನ ಹೊರೆ ಬೀಳುತ್ತಿದೆ. ಕೋವಿಡ್ ಸಾಂಕ್ರಾಮಿಕ ರೋಗ ಹರಡುತ್ತಿರುವ ಈ ಸಂದರ್ಭದಲ್ಲಿ ಸಾರಿಗೆ ಸೌಕರ್ಯ ಒದಗಿಸುವುದು ಸರ್ಕಾರದ ಕರ್ತವ್ಯ..

highcourt
ಹೈಕೋರ್ಟ್
author img

By

Published : Apr 20, 2021, 3:00 PM IST

ಬೆಂಗಳೂರು : ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ಬಸ್‌ಗಳ ಮುಷ್ಕರ ಹಿನ್ನೆಲೆ ಸಾರಿಗೆ ನೌಕರರು ಮತ್ತು ಸರ್ಕಾರದ ನಡುವೆ ಮಧ್ಯವಸ್ಥಿಕೆವಹಿಸಿ, ಸಮಸ್ಯೆ ಅಧ್ಯಯನ ಮಾಡಿ ಶಾಶ್ವತ ಪರಿಹಾರ ಕ್ರಮ ಸೂಚಿಸಲು ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿಯೊಬ್ಬರ ನೇತೃತ್ವದಲ್ಲಿ ಸಮಿತಿ ರಚಿಸುವಂತೆ ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಕೋರಿ ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದೆ.

ಬೆಂಗಳೂರಿನ ವಕೀಲ ನಟರಾಜ ಶರ್ಮಾ ಈ ಅರ್ಜಿ ಸಲ್ಲಿಸಿದ್ದಾರೆ. ಸರ್ಕಾರದ ಮುಖ್ಯ ಕಾರ್ಯದರ್ಶಿ, ಸಾರಿಗೆ ಇಲಾಖೆ ಸಚಿವರು, ಪ್ರಧಾನ ಕಾರ್ಯದರ್ಶಿ, ಕೆಎಸ್‌ಆರ್‌ಟಿಸಿ, ಬಿಎಂಟಿಸಿ ವ್ಯವಸ್ಥಾಪಕರ ನಿರ್ದೇಶಕರು ಮತ್ತು ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟದ ಅಧ್ಯಕ್ಷರನ್ನು ಅರ್ಜಿಯಲ್ಲಿ ಪ್ರತಿವಾದಿ ಮಾಡಲಾಗಿದೆ. ಅರ್ಜಿ ಇನ್ನಷ್ಟೇ ವಿಚಾರಣೆಗೆ ಬರಬೇಕಿದೆ.

ಅರ್ಜಿದಾರರ ಕೋರಿಕೆ : ಸಾರಿಗೆ ನೌಕರರು ವಿವಿಧ ಬೇಡಿಕೆಗೆ ಆಗ್ರಹಿಸಿ 2021ರ ಏ.7ರಿಂದ ಮುಷ್ಕರ ನಡೆಸುತ್ತಿದ್ದಾರೆ. ಇದರಿಂದ ಬಸ್‌ಗಳ ಸೇವೆ ಸ್ಥಗಿತಗೊಂಡಿದ್ದು, ಸಾರ್ವಜನಿಕರು ಅನಿವಾರ್ಯವಾಗಿ ಟ್ಯಾಕ್ಸಿ ಹಾಗೂ ಆಟೋಗಳ ದುಬಾರಿ ಸಾರಿಗೆ ಸೌಲಭ್ಯದ ಮೊರೆ ಹೋಗುವಂತಾಗಿದೆ. ಬಡವರ ಮೇಲೆ ಹೆಚ್ಚಿನ ಹೊರೆ ಬೀಳುತ್ತಿದೆ. ಕೋವಿಡ್ ಸಾಂಕ್ರಾಮಿಕ ರೋಗ ಹರಡುತ್ತಿರುವ ಈ ಸಂದರ್ಭದಲ್ಲಿ ಸಾರಿಗೆ ಸೌಕರ್ಯ ಒದಗಿಸುವುದು ಸರ್ಕಾರದ ಕರ್ತವ್ಯ.

ಮತ್ತೊಂದೆಡೆ ತಮ್ಮ ಬೇಡಿಕೆ ಈಡೇರದ ಕಾರಣ ಕೆಲ ಸಾರಿಗೆ ನೌಕರರು ಬೇಸತ್ತು ಆತ್ಮಹತ್ಯೆಗೂ ಪ್ರಯತ್ನಿಸಿದ್ದಾರೆ. ಸರ್ಕಾರ ಸಾರಿಗೆ ನೌಕರರ ಬೇಡಿಕೆ ಈಡೇರಿಸುವುದಿರಲಿ, ಅವರೊಂದಿಗೆ ಮಾತುಕತೆ ನಡೆಸಿ ಸಮಸ್ಯೆಗೆ ಪರಿಹಾರ ಕಲ್ಪಿಸುವ ಪ್ರಯತ್ನವನ್ನೂ ಮಾಡುತ್ತಿಲ್ಲ. ಬದಲಿಗೆ ನೌಕರರ ವಿರುದ್ಧ ಸೇವೆಯಿಂದ ವಜಾ ಮತ್ತು ವರ್ಗಾವಣೆಯಂತಹ ಕಠಿಣ ಅಸ್ತ್ರ ಪ್ರಯೋಗಿಸುತ್ತಿದೆ. ಇದರಿಂದ ನೌಕರರು ಮುಷ್ಕರ ಮುಂದುವರಿಸುತ್ತಿದ್ದಾರೆ.

ಒಂದೊಮ್ಮೆ ಈ ಸಮಸ್ಯೆ ಪರಿಹಾರವಾಗದಿದ್ದರೆ ಬೊಕ್ಕಸಕ್ಕೆ ಕೋಟ್ಯಂತರ ರೂ. ನಷ್ಟವಾಗುತ್ತದೆ. ಆದ್ದರಿಂದ ಸಾರಿಗೆ ನೌಕರರ ಮತ್ತು ಸರ್ಕಾರದ ನಡುವೆ ಮಧ್ಯವಸ್ಥಿಕೆವಹಿಸಿ, ಸಮಸ್ಯೆಯನ್ನು ಅಧ್ಯಯನ ಮಾಡಿ ಶಾಶ್ವತ ಪರಿಹಾರ ಕ್ರಮ ಸೂಚಿಸಲು ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿಯೊಬ್ಬರ ನೇತೃತ್ವದಲ್ಲಿ ಸಮಿತಿ ರಚಿಸಲು ಸರ್ಕಾರಕ್ಕೆ ನಿರ್ದೇಶಿಸಬೇಕು. ಕೂಡಲೇ ಮುಷ್ಕರ ಹಿಂಪಡೆದು ಕರ್ತವ್ಯಕ್ಕೆ ಹಾಜರಾಗುವಂತೆ ಸಾರಿಗೆ ನೌಕರರ ಕೂಟಕ್ಕೆ ಸೂಚಿಸಬೇಕು ಎಂದು ಅರ್ಜಿಯಲ್ಲಿ ಕೋರಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.