ಬೆಂಗಳೂರು : ಅಕ್ರಮವಾಗಿ ಪಿಸ್ತೂಲ್ ಮಾರಾಟದಲ್ಲಿ ತೊಡಗಿದ್ದ ರಿಯಲ್ ಎಸ್ಟೇಟ್ ಬ್ರೋಕರ್ನನ್ನು ಬಾಣಸವಾಡಿ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಶಕೀಲ್ ಅಹ್ಮದ್ ಎಂದು ಗುರುತಿಸಲಾಗಿದೆ.
ರಿಯಲ್ ಎಸ್ಟೇಟ್ ಬ್ರೋಕರ್ ಕೆಲಸ ಮಾಡುತ್ತಿದ್ದ ಆರೋಪಿ ಜೊತೆಗೆ ಮಹಾರಾಷ್ಟ್ರದ ಅಮರಾವತಿಯಿಂದ ಪಿಸ್ತೂಲ್ ಬೆಂಗಳೂರಿನಲ್ಲಿ ಮಾರಾಟ ಮಾಡುತ್ತಿದ್ದ.
ಸದ್ಯ ಆರೋಪಿಯನ್ನ ಬಂಧಿಸಿರುವ ಪೊಲೀಸರು, ಆತನಿಂದ 2 ಪಿಸ್ತೂಲ್ 4 ಜೀವಂತ ಗುಂಡುಗಳನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿಯನ್ನ 2016ರಲ್ಲಿ ಸಂಪಿಗಹಳ್ಳಿ ಪೊಲೀಸರು, 2019ರಲ್ಲೂ ಸಿಸಿಬಿ ಪೊಲೀಸರು ಕೂಡ ಪ್ರತ್ಯೇಕ ಪ್ರಕರಣಗಳಲ್ಲಿ ಬಂಧಿಸಿದ್ದರು. ಸದ್ಯ ಆರೋಪಿಯನ್ನ ಬಂಧಿಸಿರುವ ಬಾಣಸವಾಡಿ ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.
ಇದನ್ನೂ ಓದಿ: ಪಾವಗಡ ಬಸ್ ಅಪಘಾತ : ಮೃತರ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ನೀಡಿ ಎಂದ ಹೆಚ್ಡಿಕೆ