ETV Bharat / city

ಬಿಜೆಪಿ ಕಚೇರಿಯಲ್ಲಿ ಪ್ಲಾಸ್ಟಿಕ್ ಬ್ಯಾನ್​... ಸಂಕಲ್ಪ ತೊಟ್ಟ ನಾಯಕರು

ಪ್ಲಾಸ್ಟಿಕ್ ನಿಷೇಧ ಮಾಡುವ ಬಗ್ಗೆ ಬಿಜೆಪಿ ನಾಯಕರಿಂದ ಪ್ರಮಾಣ. ಪಕ್ಷದ ಕಚೇರಿಯಲ್ಲಿ ಮಹಾತ್ಮರ ಜಯಂತಿಯಂದು ಪ್ರತಿಜ್ಞೆ ಮಾಡಿದ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು.

ಇಂದಿನಿಂದ ಬಿಜೆಪಿ ಕಚೇರಿಯಲ್ಲಿ ಪ್ಲಾಸ್ಟಿಕ್ ಬ್ಯಾನ್​...ಸಂಕಲ್ಪ ತೊಟ್ಟ ಪದಾಧಿಕಾರಿಗಳು
author img

By

Published : Oct 3, 2019, 3:20 AM IST

ಬೆಂಗಳೂರು: ರಾಜ್ಯ ಬಿಜೆಪಿ ಕಚೇರಿಯಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧಗೊಳ್ಳಲಿದೆ. ಬಿಜೆಪಿ ಪದಾಧಿಕಾರಿಗಳು, ಮುಖಂಡರು ಹಾಗೂ ಕಾರ್ಯಕರ್ತರು ಪ್ಲಾಸ್ಟಿಕ್ ಬಳಕೆ ಮಾಡುವುದಿಲ್ಲ ಎಂದು ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜನ್ಮದಿನದಂದು ಸಂಕಲ್ಪ ಮಾಡುವ ಮೂಲಕ ಪ್ಲಾಸ್ಟಿಕ್ ಬಳಕೆ ನಿರ್ಬಂಧ ಅಭಿಯಾನಕ್ಕೆ ಮುಂದಾಗಿದ್ದಾರೆ.

ಬಿಜೆಪಿ ಕಚೇರಿಯಲ್ಲಿ ಪ್ಲಾಸ್ಟಿಕ್ ಬ್ಯಾನ್​...ಸಂಕಲ್ಪ ತೊಟ್ಟ ಪದಾಧಿಕಾರಿಗಳು

ರಾಜ್ಯ ಬಿಜೆಪಿ ಕಾರ್ಯಾಲಯದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧಿಯವರ 150ನೇ ಜನ್ಮ ವರ್ಷಾಚರಣೆ ನಿಮಿತ್ತ ಅನೇಕ ಕಾರ್ಯಗಳನ್ನು ಆಯೋಜಿಸಲಾಗಿತ್ತು. ಚಿತ್ರಕಲಾವಿದ ಅಕ್ಷಯ ಜಾಲಿಹಾಳ್ ಅವರು ರಂಗೋಲಿಯಲ್ಲಿ ಬಿಡಿಸಿದ ಮಹಾತ್ಮ ಗಾಂಧಿಯವರ ಚಿತ್ರಕ್ಕೆ ಅಂತಿಮ ಸ್ಪರ್ಶ ನೀಡುವ ಮೂಲಕ ಕಾರ್ಯಕ್ರಮ ಆರಂಭವಾಯಿತು. ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಶೋಭಾ ಕರಂದ್ಲಾಜೆ, ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು. ನಂತರ ಕಲಾವಿದರಾದ ಅಕ್ಷಯ್ ಅವರನ್ನು ಸನ್ಮಾನಿಸಿದರು.

ನಂತರ ಕಾರ್ಯಾಲಯದಲ್ಲಿ ಪರಿಸರ ರಕ್ಷಣೆಯ ಜಾಗೃತಿ ಮೂಡಿಸುವ ಚಿತ್ರಕಲಾ ಪ್ರದರ್ಶನವೂ ನಡೆಯಿತು. ಪ್ಲಾಸ್ಟಿಕ್ ಮುಕ್ತ ಜೀವನದ ಬಗ್ಗೆ ಅರಿವು ಮೂಡಿಸುವ ವೀಡಿಯೊ ಚಿತ್ರವನ್ನು ಶೋಭಾ ಕರಂದ್ಲಾಜೆ, ರವಿಕುಮಾರ್ ಮತ್ತು ಮಹಿಳಾ‌ ಘಟಕದ ರಾಜ್ಯಾಧ್ಯಕ್ಷೆ ಭಾರತಿ ಶೆಟ್ಟಿ ಅವರು ಬಿಡುಗಡೆ ಮಾಡಿದರು. ಘನತ್ಯಾಜ್ಯ ನಿರ್ವಹಣೆ ಕುರಿತಾದ ಪುಸ್ತಕವೂ ಇದೇ ಸಂದರ್ಭದಲ್ಲಿ ಬಿಡುಗಡೆಯಾಯಿತು. ಬಿಜೆಪಿ ಪ್ರಕಾಶನ ಪ್ರಕೋಷ್ಠದ ಸಂಚಾಲಕ ನರಸಿಂಹ ಮೂರ್ತಿ ಅವರ ಮಾರ್ಗದರ್ಶನದಲ್ಲಿ ಚಿತ್ರ ಕಲಾ ಪ್ರದರ್ಶನ, ವಿಡಿಯೋ ನಿರ್ಮಾಣವಾಗಿದ್ದು ಈ ಸಂದರ್ಭದಲ್ಲಿ ಅವರನ್ನು ಸನ್ಮಾನಿಸಲಾಯಿತು.

ಬಳಿಕ ಸಭೆಯಲ್ಲಿ ಮಾತನಾಡಿದ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ರವಿಕುಮಾರ್, ಬರೀ ಹೆಸರಿಗೆ ಪ್ಲಾಸ್ಟಿಕ್ ನಿಷೇಧದ ಬಗ್ಗೆ ಮಾತನಾಡುವುದಲ್ಲ. ಒಮ್ಮೆ ಬಳಸಿ ಎಸೆಯುವ ಪ್ಲಾಸ್ಟಿಕ್​ಅನ್ನ ಇನ್ಮುಂದೆ ಬಿಜೆಪಿ ಕಚೇರಿಯಲ್ಲಿ ಬಳಸುವಂತಿಲ್ಲ. ಬಕೆಟ್, ಮಗ್ ಬಳಸಿ. ಬೇಕರಿಯಿಂದ‌ ಪ್ಲಾಸ್ಟಿಕ್​ನಲ್ಲಿ ತಿನಿಸು ತರುವುದು, ಬಾಟಲಿ ನೀರು ತರುವುದಕ್ಕೆ ಅವಕಾಶ ಇಲ್ಲ. ಒಮ್ಮೆ ಬಳಸಿ ಎಸೆಯುವ ಪ್ಲಾಸ್ಟಿಕ್ ನಿಷೇಧ ಮಾಡುತ್ತೇವೆ ಎಂದು ಸಂಕಲ್ಪ ತೊಡುವಂತೆ ಕರೆ ನೀಡಿದರು.

ನಂತರ ಒಂದು ಬಾರಿ ಉಪಯೋಗಿಸುವ ಪ್ಲಾಸ್ಟಿಕ್ ವಸ್ತುಗಳನ್ನು ನಾನು ಗುರುವಾರದಿಂದ ಉಪಯೋಗಿಸುವುದಿಲ್ಲವೆಂದು ಗಾಂಧಿ ಜಯಂತಿ, ಲಾಲ್‌ಬಹದ್ದೂರ್ ಶಾಸ್ತ್ರಿ ಜಯಂತಿಯ ಈ ದಿನ ಸಂಕಲ್ಪ ಮಾಡುತ್ತೇನೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಸೇರಿದಂತೆ ಉಪಸ್ಥಿತ ಎಲ್ಲಾ ನಾಯಕರು, ಕಾರ್ಯಕರ್ತರು, ಪದಾಧಿಕಾರಿಗಳು ಪ್ರಮಾಣ ಮಾಡಿದರು.

Intro:

ಬೆಂಗಳೂರು:ನಾಳೆಯಿಂದ ರಾಜ್ಯ ಬಿಜೆಪಿ ಕಚೇರಿಯಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧಗೊಳ್ಳಲಿದೆ, ಪದಾಧಿಕಾರಿಗಳು, ಮುಖಂಡರು ಹಾಗು ಕಾರ್ಯಕರ್ತರು ಪ್ಲಾಸ್ಟಿಕ್ ಬಳಕೆ ಮಾಡುವುದಿಲ್ಲ ಎಂದು ಮಹಾತ್ಮ ಗಾಂಧೀಜಿ ಹಾಗು ಲಾಲ್ ಬಹದ್ದೂರ್ ಶಾಸ್ತ್ರಿ ಜನ್ಮದಿನವಾದ ಇಂದು ಸಂಕಲ್ಪ ಮಾಡುವ ಮೂಲಕ ಪ್ಲಾಸ್ಟಿಕ್ ಬಳಕೆ ನಿರ್ಬಂಧ ಅಭಿಯಾನಕ್ಕೆ ಮುಂದಾಗಿದ್ದಾರೆ.

ರಾಜ್ಯ ಬಿಜೆಪಿ ಕಾರ್ಯಾಲಯದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧಿಯವರ 150ನೇ ಜನ್ಮ ವರ್ಷಾಚರಣೆ ನಿಮಿತ್ತ ಅನೇಕ ಕಾರ್ಯಗಳನ್ನು ಆಯೋಜಿಸಲಾಗಿತ್ತು. ಚಿತ್ರಕಲಾವಿದ ಅಕ್ಷಯ ಜಾಲಿಹಾಳ್ ಅವರು ರಂಗೋಲಿಯಲ್ಲಿ ಬಿಡಿಸಿದ ಮಹಾತ್ಮ ಗಾಂಧಿಯವರ ಚಿತ್ರಕ್ಕೆ ಅಂತಿಮ ಸ್ಪರ್ಶ ನೀಡುವ ಮೂಲಕ ಕಾರ್ಯಕ್ರಮ ಆರಂಭವಾಯಿತು. ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಶೋಭಾ ಕರಂದ್ಲಾಜೆ ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು. ನಂತರ ಕಲಾವಿದರಾದ ಅಕ್ಷಯ್ ಅವರನ್ನು ಸನ್ಮಾನಿಸಿದರು.

ನಂತರ ಕಾರ್ಯಾಲಯದಲ್ಲಿ ಪರಿಸರ ರಕ್ಷಣೆಯ ಜಾಗೃತಿ ಮೂಡಿಸುವ ಚಿತ್ರಕಲಾ ಪ್ರದರ್ಶನವೂ ನಡೆಯಿತು.ಪ್ಲಾಸ್ಟಿಕ್ ಮುಕ್ತ ಜೀವನದ ಬಗ್ಗೆ ಅರಿವು ಮೂಡಿಸುವ ವೀಡಿಯೊ ಚಿತ್ರವನ್ನು ಶೋಭಾ ಕರಂದ್ಲಾಜೆ, ರವಿಕುಮಾರ್ ಮತ್ತು ಮಹಿಳಾ‌ ಘಟಕದ ರಾಜ್ಯಾಧ್ಯಕ್ಷೆ ಭಾರತಿ ಶೆಟ್ಟಿ ಅವರು ಬಿಡುಗಡೆ ಮಾಡಿದರು. ಘನತ್ಯಾಜ್ಯ ನಿರ್ವಹಣೆ ಕುರಿತಾದ ಪುಸ್ತಕವೂ ಇದೇ ಸಂದರ್ಭದಲ್ಲಿ ಬಿಡುಗಡೆಯಾಯಿತು.
ಬಿಜೆಪಿ ಪ್ರಕಾಶನ ಪ್ರಕೋಷ್ಠದ ಸಂಚಾಲಕ ನರಸಿಂಹ ಮೂರ್ತಿ ಅವರ ಮಾರ್ಗದರ್ಶನ ದಲ್ಲಿ ಚಿತ್ರ ಕಲಾ ಪ್ರದರ್ಶನ,ವೀಡಿಯೋ ನಿರ್ಮಾಣವಾಗಿದ್ದು ಈ ಸಂದರ್ಭದಲ್ಲಿ ಅವರನ್ನು ಸನ್ಮಾನಿಸಲಾಯಿತು.

ಬಳಿಕ ಸಭೆಯಲ್ಲಿ ಮಾತನಾಡಿದ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ರವಿಕುಮಾರ್,ಬರೀ ಹೆಸರಿಗೆ ಪ್ಲಾಸ್ಟಿಕ್ ನಿಷೇಧದ ಬಗ್ಗೆ ಮಾತನಾಡುವುದಲ್ಲ‌ ಒಮ್ಮೆ ಬಳಸಿ ಎಸೆಯುವ ಪ್ಲಾಸ್ಟಿಕ್ ಅನ್ನು ಇನ್ಮುಂದೆ ಬಿಜೆಪಿ ಕಚೇರಿಯಲ್ಲಿ ಬಳಸುವಂತಿಲ್ಲ, ಬಕೆಟ್,ಮಗ್ ಬಳಸಿ,ಬೇಕರಿ ಯಿಂದ‌ ಪ್ಲಾಸ್ಟಿಕ್ ನಲ್ಲಿ ತಿನಿಸು ತರುವುದು,ಬಾಟಲಿ ನೀರು ತರುವುದಕ್ಕೆ ಅವಕಾಶ ಇಲ್ಲ,ಒಮ್ಮೆ ಬಳಸಿ ಎಸೆಯುವ ಪ್ಲಾಸ್ಟಿಕ್ ನಿಷೇಧ ಮಾಡುತ್ತೇವೆ ಎಂದು ಸಂಕಲ್ಪ ತೊಡುವಂತೆ ಕರೆ ನೀಡಿದರು.

ನಂತರ ಒಂದು ಬಾರಿ ಉಪಯೋಗುಸುವ ಪ್ಲಾಸ್ಟಿಕ್ ವಸ್ತುಗಳನ್ನು ನಾನು ನಾಳೆಯಿಂದ ಉಪಯೋಗಿಸುವುದಿಲ್ಲವೆಂದು ಗಾಂಧಿ ಜಯಂತಿ,ಲಾಲ್‌ಬಹದ್ದೂರ್ ಶಾಸ್ತ್ರ ಜಯಂತಿಯ ಈ ದಿನ ಸಂಕಲ್ಪ ಮಾಡುತ್ತೇನೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಸೇರಿದಂತೆ ಉಪಸ್ಥಿತ ಎಲ್ಲಾ ನಾಯಕರು,ಕಾರ್ಯಕರ್ತರು, ಪದಾಧಿಕಾರಿಗಳು ಪ್ರಮಾಣ ಮಾಡಿದರು.Body:.Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.