ETV Bharat / city

ಕನ್ನಡದಲ್ಲೇ ರಾಜ್ಯೋತ್ಸವದ ಶುಭಾಶಯ ಕೋರಿದ ಮೋದಿ, ಅಮಿತ್ ಶಾ - ಪ್ರಧಾನಿ ನರೇಂದ್ರ ಮೋದಿ ಟ್ವೀಟ್​​

"ನಾಡಿನ ಸಮಸ್ತ ಜನತೆಗೆ 66ನೇ ಕನ್ನಡ ರಾಜ್ಯೋತ್ಸವದ ಹೃತ್ಪೂರ್ವಕ ಶುಭ ಕಾಮನೆಗಳು. ನಾಡಿನ ಏಕತೆ, ಸ್ವಾಭಿಮಾನ, ಸಾಮರಸ್ಯ, ಸಹಬಾಳ್ವೆಯ ಸಂಕೇತವಾದ ರಾಜ್ಯೋತ್ಸವ ಪ್ರತಿಯೊಬ್ಬ ಕನ್ನಡಿಗನ ಹೆಮ್ಮೆಯ ಆಚರಣೆ. ನಮ್ಮ ಕನ್ನಡದ ಅಸ್ಮಿತೆ ಸದಾ ಜಾಗೃತವಾಗಿರಲಿ, ಕನ್ನಡತನದ ಅಭಿಮಾನ ನಿರಂತರವಾಗಿರಲಿ" ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ.

PM modi and Amit shah
ನರೇಂದ್ರ ಮೋದಿ ಹಾಗು ಅಮಿತ್ ಶಾ
author img

By

Published : Nov 1, 2021, 9:51 AM IST

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಹಾಗು ಕೇಂದ್ರ ಗೃಹ ಸಚಿವ ಅಮಿತ್ ಶಾ ಕನ್ನಡಿಗರಿಗೆ ಕನ್ನಡದಲ್ಲೇ ಕನ್ನಡ ರಾಜ್ಯೋತ್ಸವದ ಶುಭಾಶಯ ಕೋರಿ ಟ್ವೀಟ್ ಮಾಡಿದ್ದಾರೆ. ಜತೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ರಾಜ್ಯ ಬಿಜೆಪಿ ನಾಯಕರು ಸಹ ನಾಡಿನ ಜನತೆಗೆ ರಾಜ್ಯೋತ್ಸವದ ಶುಭಾಶಯ ಕೋರಿದ್ದಾರೆ.

ಕರ್ನಾಟಕ ರಾಜ್ಯೋತ್ಸವದ ವಿಶೇಷ ಸಂದರ್ಭದಲ್ಲಿ ಶುಭ ಹಾರೈಕೆಗಳು. ಕರ್ನಾಟಕವು ತನ್ನ ಜನರ ಹೊಸತನದ ಶೋಧದ ತುಡಿತದಿಂದಾಗಿ ವಿಶೇಷ ಛಾಪು ಮೂಡಿಸಿದೆ. ರಾಜ್ಯವು ಅತ್ಯುತ್ಕೃಷ್ಟ ಸಂಶೋಧನೆ ಮತ್ತು ಉದ್ಯಮಶೀಲತೆಯಿಂದಾಗಿ ಮುಂಚೂಣಿಯಲ್ಲಿದೆ. ಮುಂಬರುವ ದಿನಗಳಲ್ಲಿ ಕರ್ನಾಟಕವು ಯಶಸ್ಸಿನ ಹೊಸ ಎತ್ತರವನ್ನು ಏರಲಿ ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ.

  • ಕರ್ನಾಟಕ ರಾಜ್ಯೋತ್ಸವದ ವಿಶೇಷ ಸಂದರ್ಭದಲ್ಲಿ ಶುಭ ಹಾರೈಕೆಗಳು. ಕರ್ನಾಟಕವು ತನ್ನ ಜನರ ಹೊಸತನದ ಶೋಧದ ತುಡಿತದಿಂದಾಗಿ ವಿಶೇಷ ಛಾಪು ಮೂಡಿಸಿದೆ. ರಾಜ್ಯವು ಅತ್ಯುತ್ಕೃಷ್ಟ ಸಂಶೋಧನೆ ಮತ್ತು ಉದ್ಯಮಶೀಲತೆಯಿಂದಾಗಿ ಮುಂಚೂಣಿಯಲ್ಲಿದೆ. ಮುಂಬರುವ ದಿನಗಳಲ್ಲಿ ಕರ್ನಾಟಕವು ಯಶಸ್ಸಿನ ಹೊಸ ಎತ್ತರವನ್ನು ಏರಲಿ.

    — Narendra Modi (@narendramodi) November 1, 2021 " class="align-text-top noRightClick twitterSection" data=" ">

ಕರ್ನಾಟಕ ರಾಜ್ಯೋತ್ಸವದ ಈ ಶುಭ ಸಂದರ್ಭದಲ್ಲಿ ಕರ್ನಾಟಕದ ಎಲ್ಲಾ ಸಹೋದರ ಮತ್ತು ಸಹೋದರಿಯರಿಗೆ ಹಾರ್ದಿಕ ಶುಭಾಶಯಗಳು. ಕನ್ನಡ ನಾಡು ಅದ್ಭುತ ಸಂಸ್ಕೃತಿ, ಖಾದ್ಯ, ಸಂಪ್ರದಾಯಗಳಿಂದ ಆಶೀರ್ವದಿಸಲ್ಪಟ್ಟಿದೆ. ಈ ಚೆಲುವಿನ ನಾಡು ಭಾರತದ ಪ್ರಗತಿಗೆ ಸದಾ ಕೊಡುಗೆ ನೀಡುತ್ತಿರಲಿ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಟ್ವೀಟ್ ಮಾಡಿದ್ದಾರೆ.

"ನಾಡಿನ ಸಮಸ್ತ ಜನತೆಗೆ 66ನೇ ಕನ್ನಡ ರಾಜ್ಯೋತ್ಸವದ ಹೃತ್ಪೂರ್ವಕ ಶುಭಕಾಮನೆಗಳು. ನಾಡಿನ ಏಕತೆ, ಸ್ವಾಭಿಮಾನ, ಸಾಮರಸ್ಯ, ಸಹಬಾಳ್ವೆಯ ಸಂಕೇತವಾದ ರಾಜ್ಯೋತ್ಸವ ಪ್ರತಿಯೊಬ್ಬ ಕನ್ನಡಿಗನ ಹೆಮ್ಮೆಯ ಆಚರಣೆ. ನಮ್ಮ ಕನ್ನಡದ ಅಸ್ಮಿತೆ ಸದಾ ಜಾಗೃತವಾಗಿರಲಿ, ಕನ್ನಡತನದ ಅಭಿಮಾನ ನಿರಂತರವಾಗಿರಲಿ" ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ.

  • ಸಮಸ್ತ ಕನ್ನಡಿಗರಿಗೆ ೬೬ನೇ ಕನ್ನಡ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು.
    ನಾಡು-ನುಡಿ ರಕ್ಷಣೆಯ ಜೊತೆಗೆ ಸಮೃದ್ಧ, ಸಹಬಾಳ್ವೆಯ, ಅಭಿವೃದ್ಧಿಶೀಲ ಕರ್ನಾಟಕದ ನಿರ್ಮಾಣದ ನಿಟ್ಟಿನಲ್ಲಿ ಸಮಸ್ತ ಕನ್ನಡಿಗರೂ ಒಂದಾಗಿ ಮುನ್ನಡೆಯೋಣ.
    ಹಸಿರಾಗಲಿ ಕರ್ನಾಟಕ, ಉಸಿರಾಗಲಿ ಕನ್ನಡ! #ಕನ್ನಡರಾಜ್ಯೋತ್ಸವ pic.twitter.com/Xn0KKZSEnF

    — Basavaraj S Bommai (@BSBommai) November 1, 2021 " class="align-text-top noRightClick twitterSection" data=" ">

ಸಮಸ್ತ ಕನ್ನಡಿಗರಿಗೆ ಕನ್ನಡ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು. ಕನ್ನಡ ನಾಡು, ನುಡಿ, ಜನಪದ, ಇತಿಹಾಸ, ಪರಂಪರೆ, ಸಂಸ್ಕೃತಿಗಳನ್ನು ಉಳಿಸುವ, ಬೆಳೆಸುವ ದೃಢ ಸಂಕಲ್ಪ ನಮ್ಮದಾಗಿರಲಿ. ಸಮೃದ್ಧ, ಆರೋಗ್ಯಪೂರ್ಣ, ಪ್ರಗತಿಶೀಲ ನವಕರ್ನಾಟಕದ ನಿರ್ಮಾಣದ ನಿಟ್ಟಿನಲ್ಲಿ ನಮ್ಮ ಕರ್ತವ್ಯಗಳನ್ನು ನಿರ್ವಹಿಸೋಣ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.

ನಾಡಿನ ಸಮಸ್ತ ಜನತೆಗೆ ಕನ್ನಡ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು. ಕನ್ನಡ ಉಳಿಸೋಣ, ಕನ್ನಡ ಬೆಳೆಸೋಣ - ಕನ್ನಡವೇ ಸತ್ಯ, ಕನ್ನಡವೇ ನಿತ್ಯ ಸಿರಿಗನ್ನಡಂ ಗೆಲ್ಗೆ, ಸಿರಿಗನ್ನಡಂ ಬಾಳ್ಗೆ ! ಜೈ ಭುವನೇಶ್ವರಿ ! ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಈ ದೇವಾಲಯದಲ್ಲಿ ನಿತ್ಯವೂ ಕನ್ನಡದಲ್ಲೇ ಮಂತ್ರಪಠಣ: ಇದು ಹಿರೇಮಗಳೂರು ಕಣ್ಣನ್​ ಭಾಷಾ ಪ್ರೇಮ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.