ETV Bharat / city

ಪಿಎಂ ಕಿಸಾನ್ ಯೋಜನೆ: 10ನೇ ಕಂತಿನಡಿ ಕರ್ನಾಟಕಕ್ಕೆ ₹685 ಕೋಟಿ ಹಣ ಬಿಡುಗಡೆ - ಪಿಎಂ ಕಿಸಾನ್ ಯೋಜನೆ 10ನೇ ಕಂತಿನ ಹಣ ಬಿಡುಗಡೆ

ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ದೇಶದ ರೈತರಿಗೆ 10ನೇ ಕಂತಿನ ಹಣ ಬಿಡುಗಡೆಗೊಂಡಿದ್ದು, 10ನೇ ಕಂತಿನಡಿ ಕರ್ನಾಟಕ ರಾಜ್ಯದ ಒಟ್ಟು 34,26,401 ರೈತರಿಗೆ 685.28 ಕೋಟಿ ರೂ.ಗಳನ್ನು ರೈತರಿಗೆ ತಲಾ 2 ಸಾವಿರ ರೂ.ಗಳಂತೆ ಬಿಡುಗಡೆಯಾಗಿದೆ.

ಪಿಎಂ ಕಿಸಾನ್ ಯೋಜನೆ
ಪಿಎಂ ಕಿಸಾನ್ ಯೋಜನೆ
author img

By

Published : Jan 2, 2022, 7:46 AM IST

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಪಿಎಂ ಕಿಸಾನ್ ಯೋಜನೆಯಡಿ ದೇಶದ ರೈತರಿಗೆ 10ನೇ ಕಂತಿನ ಹಣ ಬಿಡುಗಡೆಗೊಳಿಸಿದ್ದು, ಈ 10ನೇ ಕಂತಿನಡಿ ಕರ್ನಾಟಕದ ಒಟ್ಟು 34,26,401ರೈತರಿಗೆ 685 ಕೋಟಿ 28 ಲಕ್ಷದ 2 ಸಾವಿರ ರೂ. ಹಣ ದೊರೆತಿದೆ.

2018-19 ರಿಂದ ಜ.1, 2022 ರವರೆಗೆ 10 ನೇ ಕಂತಿನ ತನಕ ರಾಜ್ಯದ ಒಟ್ಟು 54 ಲಕ್ಷದ 52 ಸಾವಿರ ರೈತ ಕುಟುಂಬಗಳಿಗೆ ಒಟ್ಟು 8707 ಕೋಟಿ 97 ಲಕ್ಷ ರೂ.ಮೊತ್ತ ಬಿಡುಗಡೆಯಾದಂತಾಗಿದೆ‌.

ಭಾರತ ಸರ್ಕಾರದ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯನ್ನು ಕಳೆದ 2019 ಫೆ.1ರಿಂದ ರಾಜ್ಯದಲ್ಲಿ ಅನುಷ್ಠಾನಗೊಳಿಸಿದ್ದು, ಯೋಜನೆಯಡಿ ವಾರ್ಷಿಕ 6000 ರೂ.ಗಳ ಆರ್ಥಿಕ ನೆರವನ್ನು ಅರ್ಹ ರೈತರ ಬ್ಯಾಂಕ್ ಖಾತೆಗಳಿಗೆ ನೇರ ನಗದು ವರ್ಗಾವಣೆ ಮೂಲಕ ನೀಡಲಾಗುತ್ತಿದೆ. ಈ ಅನುದಾನವನ್ನು 2000 ರೂ.ಗಳಂತೆ ಮೂರು ಕಂತುಗಳಲ್ಲಿ ನಾಲ್ಕು ತಿಂಗಳಿಗೊಮ್ಮೆ ಇದನ್ನು ನೀಡಲಾಗುತ್ತಿದೆ.

2,850 ಕೋಟಿ 54 ಲಕ್ಷ ರೂ.ಗಳಷ್ಟು ಕರ್ನಾಟಕ ಸರ್ಕಾರದಿಂದ ಹೆಚ್ಚುವರಿಯಾಗಿ ರೈತರಿಗೆ ಹಣ ಪಾವತಿಯಾಗಿದೆ. ಸಾಧ್ಯವಾದಷ್ಟು ಈ ಯೋಜನೆಯಡಿ ಎಲ್ಲಾ ಪಾವತಿಗಳನ್ನು ಆಧಾರ್‌ ಆಧಾರಿತ ಡಿಬಿಟಿ ಮುಖಾಂತರ ಮಾಡಬೇಕೆಂದು ಸೂಚಿಸಲಾಗಿದ್ದು, ಎಲ್ಲಾ ರಾಜ್ಯಗಳ ಪೈಕಿ ಕರ್ನಾಟಕ ರಾಜ್ಯವು ಅತಿ ಹೆಚ್ಚು ಶೇಕಡಾವಾರು ಆಧಾರ್‌ ಆಧಾರಿತ ವಹಿವಾಟುಗಳನ್ನು ಅತ್ಯುತ್ತಮವಾಗಿ ನಿರ್ವಹಿಸಿದ ಹಿನ್ನೆಲೆಯಲ್ಲಿ 2021ರ ವರ್ಷದ ಫೆಬ್ರುವರಿಯಲ್ಲಿ ಭಾರತ ಸರ್ಕಾರದಿಂದ ಕರ್ನಾಟಕ ರಾಜ್ಯಕ್ಕೆ ಪ್ರಶಸ್ತಿ ಸಹ ದೊರೆತಿದೆ. ನಿರಂತರ ಮೇಲ್ವಿಚಾರಣೆಯ ಭಾಗವಾಗಿ ಯೋಜನೆಯ ಫಲಾನುಭವಿಗಳಾಗಿರುವ ರೈತ ಕುಟುಂಬಗಳ ಅರ್ಹತೆಯನ್ನು ರಾಜ್ಯದಿಂದ ಆಗಿಂದಾಗ್ಗೆ ಪರಿಶೀಲಿಸಲಾಗುತ್ತಿದೆ ಎಂದು ಪ್ರಕಟಣೆಯಲ್ಲಿ ಕೃಷಿ ಸಚಿವ ಬಿ.ಸಿ.ಪಾಟೀಲ್​ ತಿಳಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.