ETV Bharat / city

ರಾಜಧಾನಿಗೆ ಆಗಮಿಸಿದ ಪ್ರಧಾನಿ ಮೋದಿ: 33 ಸಾವಿರ ಕೋಟಿ ರೂ.ಯೋಜನೆಗಳಿಗೆ ಚಾಲನೆ - PM Narendra Modi visit karnataka

ಯಲಹಂಕ ವಾಯುನೆಲೆಗೆ ಆಗಮಿಸಿದ ಪ್ರಧಾನಿ ಮೋದಿ ಐಐಎಸ್​​ಸಿಯಲ್ಲಿ ಆಯೋಜಿಸಿದ್ದ ಮೊದಲ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮೆದುಳು ಸಂಶೋಧನಾ ಕೇಂದ್ರ ಉದ್ಘಾಟಿಸಿದರು. ಇದೇ ವೇಳೆ 425 ಕೋಟಿ ರೂ. ವೆಚ್ಚದಲ್ಲಿಐಐಎಸ್​​ಸಿ ಆವರಣದಲ್ಲಿ ನಿರ್ಮಾಣವಾಗಲಿರುವ ಬಾಗ್ಚಿ- ಪಾರ್ಥ ಸಾರಥಿ ಆಸ್ಪತ್ರೆಗೂ ಪ್ರಧಾನಿ ಶಂಕುಸ್ಥಾಪನೆ ನೆರವೇರಿಸಿದರು.

PM Narendra Modi to launch various development projects in Bangalore
ಬೆಂಗಳೂರಿಗೆ ಆಗಮಿಸಿದ ಮೋದಿ: ಹಲವು ಯೋಜನೆಗಳಿಗೆ ಚಾಲನೆ
author img

By

Published : Jun 20, 2022, 2:32 PM IST

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಎರಡು ದಿನಗಳ ಪ್ರವಾಸಕ್ಕಾಗಿ ರಾಜ್ಯಕ್ಕೆ ಆಗಮಿಸಿದ್ದು, 33 ಸಾವಿರ ಕೋಟಿಗೂ ಹೆಚ್ಚು ಮೊತ್ತದ 19 ಯೋಜನೆಗಳ ಉದ್ಘಾಟನೆ, ಲೋಕಾರ್ಪಣೆ, ಶಂಕು ಸ್ಥಾಪನಾ ಕಾರ್ಯ ನೆರವೇರಿಸಲಿದ್ದಾರೆ.

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಂದು ಬೆಳಿಗ್ಗೆ 11.55ಕ್ಕೆ ಯಲಹಂಕ ವಾಯು ಪಡೆ ನಿಲ್ದಾಣಕ್ಕೆ ಆಗಮಿಸಿದರು. ಎರಡು ದಿನಗಳ ಭೇಟಿಗಾಗಿ ರಾಜ್ಯಕ್ಕೆ ಆಗಮಿಸಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಯಲಹಂಕ ವಾಯು ಪಡೆ ನಿಲ್ದಾಣದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆತ್ಮೀಯವಾಗಿ ಬರಮಾಡಿಕೊಂಡರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರಧಾನಿ ಅವರಿಗೆ ಪುಸ್ತಕವನ್ನು ನೀಡಿ ಶಾಲು ಹೊದಿಸಿ ಗೌರವಿಸಿದರು.

ಬೆಂಗಳೂರಿಗೆ ಆಗಮಿಸಿದ ಪ್ರಧಾನಿ ಮೋದಿ

ಮೆದುಳು ಸಂಶೋಧನಾ ಕೇಂದ್ರ ಲೋಕಾರ್ಪಣೆ: ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ 280 ಕೋಟಿ ರೂ.ಗಳ ವೆಚ್ಚದಲ್ಲಿ ನಿರ್ಮಿಸಿರುವ ಮೆದುಳು ಸಂಶೋಧನಾ ಕೇಂದ್ರವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಇಂದು ಲೋಕಾರ್ಪಣೆಗೊಳಿಸಿದರು. ಬಳಿಕ 425 ಕೋಟಿ ರೂ. ವೆಚ್ಚದಲ್ಲಿ ಐಐಎಸ್​​ಸಿ ಆವರಣದಲ್ಲಿ ನಿರ್ಮಾಣವಾಗಲಿರುವ ಬಾಗ್ಚಿ- ಪಾರ್ಥಸಾರಥಿ ಆಸ್ಪತ್ರೆಗೂ ಪ್ರಧಾನಿಯವರು ಶಂಕುಸ್ಥಾಪನೆ ನೆರವೇರಿಸಿದರು.

ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಹ್ಲಾದ್​​​ ಜೋಶಿ, ದಾನಿಗಳಾದ ಕ್ರಿಸ್ ಗೋಪಾಲಕೃಷ್ಣನ್ ದಂಪತಿ ಹಾಗೂ ಬಾಗ್ಚಿ ಮತ್ತು ಪಾರ್ಥಸಾರಥಿ ಕುಟುಂಬದವರು ಈ ಸಂದರ್ಭದಲ್ಲಿ ಭಾಗಿಯಾಗಿದ್ದರು.

PM Narendra Modi to launch various development projects in Bangalore
ಬೆಂಗಳೂರಿಗೆ ಆಗಮಿಸಿದ ಮೋದಿ: ಹಲವು ಯೋಜನೆಗಳಿಗೆ ಚಾಲನೆ

ಮಧ್ಯಾಹ್ನ 1.45 ಕ್ಕೆ ಪ್ರಧಾನಿಯವರು (ಬೇಸ್) ಕ್ಯಾಂಪಸ್​​ಗೆ ತೆರಳಿ 201 ಕೋಟಿ ವೆಚ್ಚದ ಡಾ.ಬಿ.ಆರ್.ಅಂಬೇಡ್ಕರ್ ಕಂಚಿನ ಪುತ್ಥಳಿ ಅನಾವರಣ, ಡಾ. ಬಿ.ಆರ್ ಅಂಬೇಡ್ಕರ್ ಸ್ಕೂಲ್ ಆಫ್ ಎಕಾನಾಮಿಕ್ಸ್ ಕ್ಯಾಂಪಸ್ ಉದ್ಘಾಟನೆ ಹಾಗೂ 4736 ಕೋಟಿ ವೆಚ್ಚದಲ್ಲಿ ಮೇಲ್ದರ್ಜೆಗೇರಿಸಿದ 150 ಐಟಿಐಗಳನ್ನು ಲೋಕಾರ್ಪಣೆ ಮಾಡಿದರು.

ಮಧ್ಯಾಹ್ನ 2.45ಕ್ಕೆ ಬೆಂಗಳೂರಿನ ಕೊಮ್ಮಘಟ್ಟದಲ್ಲಿ 15,767 ಕೋಟಿ ವೆಚ್ಚದ 148 ಕಿ.ಮೀ ಉದ್ದದ ಉಪನಗರ ರೈಲ್ವೆ ಯೋಜನೆಗೆ ಶಂಕು ಸ್ಥಾಪನೆ, 470 ಕೋಟಿ ವೆಚ್ಚದ ಕಂಟೋನ್ ಮೆಂಟ್ ನಿಲ್ದಾಣ, 400 ಕೋಟಿ ವೆಚ್ಚದಲ್ಲಿ ಯಶವಂತಪುರ ನಿಲ್ದಾಣಗಳ ಪುನರಾಭಿವೃದ್ಧಿ ಯೋಜನೆಗೆ ಶಿಲಾನ್ಯಾಸ, 7231 ಕೋಟಿ ವೆಚ್ಚದ 5 ರಾಷ್ಟ್ರೀಯ ಹೆದ್ದಾರಿ ಯೋಜನೆ ಮತ್ತು ಮಲ್ಟಿ ಮೋಡಲ್ ಲಾಜಿಸ್ಟಿಕ್ ಪಾರ್ಕ್ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

PM Narendra Modi
ಬೆಂಗಳೂರಿಗೆ ಆಗಮಿಸಿದ ಪ್ರಧಾನಿ ಮೋದಿ

317 ಕೋಟಿ ವೆಚ್ಚದ ಸರ್.ಎಂ ವಿಶ್ವೇಶ್ವರಯ್ಯ ರೈಲ್ವೆ ಟರ್ಮಿನಲ್ ಲೋಕಾರ್ಪಣೆ, 1287 ಕೋಟಿ ವೆಚ್ಚದ ಕೊಂಕಣ ರೈಲು ಮಾರ್ಗದ ಶೇ.100 ರಷ್ಟು ವಿದ್ಯುದೀಕರಣ ಯೋಜನೆ ಲೋಕಾರ್ಪಣೆ,758 ಕೋಟಿ ವೆಚ್ಚದ ಅರಸೀಕೆರೆ - ತುಮಕೂರು ಜೋಡಿ ರೈಲು ಮಾರ್ಗ ಮತ್ತು ಹೊಸ ರೈಲು ಸೇವೆಗೆ ಚಾಲನೆ, 1,104 ಕೋಟಿ ವೆಚ್ಚದ ಯಲಹಂಕ - ಪೆನುಕೊಂಡ ರೈಲ್ವೆ ಮಾರ್ಗದ ದ್ವಿಪಥೀಕರಣ ಹಾಗೂ ಹೊಸ ರೈಲು ಸೇವೆಗಳಿಗೆ ಚಾಲನೆ ನೀಡಲಿದ್ದಾರೆ. ವಿವಿಧ ಅಭಿವೃದ್ಧಿ ಯೋಜನೆಗಳ ಶಂಕುಸ್ಥಾಪನೆ ಹಾಗೂ ಲೋಕಾರ್ಪಣೆಗೊಳಿಸಿ ಸಾರ್ವಜನಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಂತರ ಮೈಸೂರಿಗೆ ತೆರಳಿದ್ದಾರೆ.

ಅಭಿಮಾನಿಗಳತ್ತ ಕೈ ಬೀಸಿದ ಮೋದಿ

ಅಭಿಮಾನಿಗಳತ್ತ ಕೈ ಬೀಸಿದ ಮೋದಿ: ಎಸ್ಪಿಜಿ ಭದ್ರತೆಯಲ್ಲಿ ಐಐಎಸ್ಸಿಗೆ ಆಗಮಿಸಿದ ಮೋದಿ ಅವರನ್ನು ನೋಡಲು ನೂರಾರು ಸಂಖ್ಯೆಯಲ್ಲಿ ಕಾರ್ಯಕರ್ತಯರು, ಅಭಿಮಾನಿಗಳು ಆಗಮಿಸಿದ್ದರು. ಐಐಎಸ್​​​ಸಿ ಸಮೀಪ ಕಾರು ನಿಲ್ಲಿಸಿ ರಸ್ತೆಗಳಲ್ಲಿ ಜಮಾವಣೆಗೊಂಡಿದ್ದ ಅಭಿಮಾನಿಗಳತ್ತ ಮೋದಿ ಕೈ ಬೀಸಿದರು. ಈ ವೇಳೆ ಮೋದಿ ಪರ ಜಯಘೋಷ ಮೊಳಗಿತು.

ಇದನ್ನೂ ಓದಿ: ಬೆಂಗಳೂರಿಗೆ ಮೋದಿ.. ಪ್ರಧಾನಿಗೆ ಪುಸ್ತಕ ನೀಡಿ ಸ್ವಾಗತಿಸಿದ ಸಿಎಂ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.