ಬೆಂಗಳೂರು : ಸಾರಿಗೆ ನೌಕರರ ಮುಷ್ಕರದ ಹಿನ್ನೆಲೆ ಪ್ರಯಾಣಿಕರಿಂದ ಅಧಿಕ ಹಣ ವಸೂಲಿ ಮಾಡುತ್ತಿದ್ದ ಆಟೋ ಚಾಲಕರಿಗೆ ಪಶ್ಚಿಮ ವಿಭಾಗದ ಪೊಲೀಸರು ಎಚ್ಚರಿಕೆ ನೀಡಿದರು.
ಸಿಟಿ ಮಾರ್ಕೆಟ್, ಮೆಜೆಸ್ಟಿಕ್ ಸೇರಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪ್ರಯಾಣಿಕರಿಂದ ಖಾಸಗಿ ವಾಹನ ಮಾಲೀಕರು ಹೆಚ್ಚು ಹಣ ವಸೂಲಿ ಮಾಡಿದ ಆರೋಪ ಕೇಳಿ ಬಂದ ಹಿನ್ನೆಲೆ ಪಶ್ಚಿಮ ವಿಭಾಗದ ಪೊಲೀಸರು ಖುದ್ದು ಫೀಲ್ಡ್ಗಿಳಿದಿದ್ದರು.
ಪ್ರಯಾಣಿಕರಿಂದ ದುಪ್ಪಟ್ಟು ಹಣ ವಸೂಲಿ ಮಾಡುತ್ತಿದ್ದ 50ಕ್ಕೂ ಹೆಚ್ಚು ಆಟೋ ಚಾಲಕರಿಗೆ ಅಧಿಕ ಹಣ ವಸೂಲಿ ಮಾಡುವುದನ್ನು ನಿಲ್ಲಿಸುವಂತೆ ತಿಳಿಸಿದರು. ಜೊತೆಗೆ ಆಟೋ ದರಗಳ ಬಗ್ಗೆ ಮೇಲ್ವಿಚಾರಣೆ ನಡೆಸಿದರು.