ETV Bharat / city

ನ್ಯಾಯಮೂರ್ತಿಗಳಿಗೆ ಬೆದರಿಕೆ ಪ್ರಕರಣ: ಮತ್ತೋರ್ವ ಆರೋಪಿ ವಶಕ್ಕೆ ಪಡೆದ ಪೊಲೀಸರು! - threat to HC judges case

ನ್ಯಾಯಮೂರ್ತಿಗಳಿಗೆ ಕೊಲೆ ಬೆದರಿಕೆ ಹಾಕಿದ್ದ ಪ್ರಕರಣ ಸಂಬಂಧ ಮತ್ತೋರ್ವ ಆರೋಪಿಯನ್ನು ವಿಧಾನಸೌಧ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

threat to HC judges case
ನ್ಯಾಯಮೂರ್ತಿಗಳಿಗೆ ಕೊಲೆ ಬೆದರಿಕೆ ಪ್ರಕರಣ
author img

By

Published : Mar 25, 2022, 1:25 PM IST

ಬೆಂಗಳೂರು: ಹಿಜಾಬ್ ವಿವಾದ ಸಂಬಂಧ ತೀರ್ಪು ನೀಡಿದ್ದ ಹೈಕೋರ್ಟ್ ನ್ಯಾಯಮೂರ್ತಿಗಳಿಗೆ ಕೊಲೆ ಬೆದರಿಕೆ ಹಾಕಿದ್ದ ಪ್ರಕರಣ ಸಂಬಂಧ ಮತ್ತೋರ್ವ ಆರೋಪಿಯನ್ನು ವಿಧಾನಸೌಧ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ತಮಿಳುನಾಡು ಮೂಲದ ಜಮಾಲ್ ಮಹಮ್ಮದ್ ಉಸ್ಮಾನಿ ಎಂಬಾತನನ್ನು ಎಂಟು ದಿನಗಳ ಕಾಲ ವಶಕ್ಕೆ ಪಡೆದುಕೊಂಡ ಪೊಲೀಸರು ಹೆಚ್ಚಿನ ವಿಚಾರಣೆಗೊಳಪಡಿಸಿದ್ದಾರೆ‌.

ತಮಿಳುನಾಡು ತೌಹೀದ್ ಜಮಾತ್​ನ ಸದಸ್ಯರಾಗಿದ್ದ ರಹಮತ್ ಉಲ್ಲಾನನ್ನು ಇತ್ತೀಚೆಗೆ ತಂಜಾವೂರಿನಲ್ಲಿ ಅಲ್ಲಿನ ಪೊಲೀಸರು ಬಂಧಿಸಿದ್ದರು. ಹೆಚ್ಚಿನ ವಿಚಾರಣೆಗಾಗಿ ನಗರ ಪೊಲೀಸರು ಕರೆತಂದಿದ್ದರು. ಇದೀಗ ಮತ್ತೋರ್ವ ಆರೋಪಿ ಜಮಾಲ್‌ ಮಹಮ್ಮದ್ ಉಸ್ಮಾನಿಯನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಮತೀಯ ಸಂಘರ್ಷಕ್ಕೆ ಯತ್ನಿಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಿ: ವರ್ತಕರಿಂದ ಪೊಲೀಸರಿಗೆ ದೂರು

ತಮಿಳುನಾಡು ಮೂಲದ ಆರೋಪಿ ರಹಮತ್ ಉಲ್ಲಾನನ್ನು ರಾಜ್ಯ ಆಂತರಿಕ ಭದ್ರತಾ ಇಲಾಖೆ ಇಲಾಖೆ ಸಹ ವಿಚಾರಣೆ‌ ನಡೆಸುತ್ತಿದೆ‌.‌ ಆರೋಪಿಯಿಂದ ಮೊಬೈಲ್ ಹಾಗೂ ಡಿಜಿಟಲ್ ಎವಿಡೆನ್ಸ್ ಮಾಹಿತಿ ಸಂಗ್ರಹಿಸಿರುವ ವಿಧಾನಸೌಧ ಪೊಲೀಸರು ಹೆಚ್ಚಿನ ವಿಚಾರಣೆ ನಡೆಸಲು ಆರೋಪಿಯನ್ನು ಐಎಸ್​ಡಿ ವಶಕ್ಕೆ ನೀಡಿದ್ದಾರೆ ಎಂದು ತಿಳಿದು ಬಂದಿದೆ‌. ಆರೋಪಿಯ ದುಷ್ಕೃತ್ಯದ ಹಿಂದೆ ಯಾರೆಲ್ಲ ಇದ್ದಾರೆ? ಯಾವೆಲ್ಲಾ ಅಂಶಗಳು ಕಾರಣವಾಗಿರಬಹುದು ಎಂಬುದರ ಬಗ್ಗೆ ಐಎಸ್​ಡಿ ತನಿಖೆ ನಡೆಸುತ್ತಿದೆ‌.

For All Latest Updates

ETV Bharat Logo

Copyright © 2024 Ushodaya Enterprises Pvt. Ltd., All Rights Reserved.