ETV Bharat / city

ಕರ್ಫ್ಯೂ ವೇಳೆ ಅನಗತ್ಯ ಓಡಾಡಿದರೆ ಬಂಧನ ಗ್ಯಾರಂಟಿ : ಪೊಲೀಸ್ ಆಯುಕ್ತ ಕಮಲ್‌ ಪಂತ್ ಎಚ್ಚರಿಕೆ

ಯಾವುದೇ ರೀತಿಯ ಕಾನೂನು ಉಲ್ಲಂಘನೆಗೆ ಅವಕಾಶವಿಲ್ಲ. ಈ ಬಾರಿ ಯಾವುದೇ ಪಾಸ್​ಗಳನ್ನು ನೀಡಲಾಗುವುದಿಲ್ಲ. ತಮ್ಮ ಐಡೆಂಟಿಟಿ ಕಾರ್ಡ್, ಪ್ರಯಾಣದ ಟಿಕೆಟ್​ಗಳು ಸೇರಿ ಸೂಕ್ತವಾದ ದಾಖಲೆ ನೀಡಿದರೆ ಮಾತ್ರ ಓಡಾಡುವುದಕ್ಕೆ ಅನುಮತಿ ನೀಡಲಾಗುವುದು..

commissioner
ಕಮಲ್‌ ಪಂತ್
author img

By

Published : Jan 7, 2022, 3:19 PM IST

ಬೆಂಗಳೂರು : ನಗರದಲ್ಲಿ ಇಂದು ರಾತ್ರಿ 10 ಗಂಟೆಯಿಂದ ವೀಕೆಂಡ್ ಕರ್ಫ್ಯೂ ಜಾರಿಯಾಗಲಿದೆ. ಅನಗತ್ಯ ಓಡಾಡುವುದು ಕಂಡು ಬಂದರೆ ಅಂತಹವರ ವಿರುದ್ಧ ಕಾನೂನು ಕ್ರಮಕೈಗೊಳ್ಳಲಾಗುವುದು ಎಂದು ನಗರ ಪೊಲೀಸ್ ಆಯುಕ್ತ ಕಮಲ್​ ಪಂತ್​ ಎಚ್ಚರಿಸಿದ್ದಾರೆ‌.

ಸುದ್ದಿಗಾರರ ಜೊತೆ ಮಾತನಾಡಿದ ಅವರು, ಪರಿಷ್ಕೃತ ಆದೇಶದ ಪ್ರಕಾರ ಇಂದು 10 ಗಂಟೆಯಿಂದ ವಾರಾಂತ್ಯ ಕರ್ಫ್ಯೂ ಜಾರಿಯಾಗಲಿದೆ. ಸರ್ಕಾರದ ಆದೇಶವನ್ನು ಎಲ್ಲರೂ ಗೌರವಿಸಬೇಕು. ಅಗತ್ಯ ವಸ್ತುಗಳ‌ ಖರೀದಿ ನೆಪದಲ್ಲಿ ಅನಗತ್ಯ ಓಡಾಡುವುದು ಸರಿಯಲ್ಲ. ಹೋಟೆಲ್​ಗಳಲ್ಲಿ ಹೋಗಿ ಪಾರ್ಸೆಲ್ ತೆಗೆದುಕೊಳ್ಳಬಹುದು ಎಂದರು.

ವಾಣಿಜ್ಯ ಮಳಿಗೆ ಮಾಲೀಕರು ನಿಯಮ ಉಲ್ಲಂಘಿಸುವುದು ಕಂಡು ಬಂದರೆ ಅಂತಹವರ ವಿರುದ್ಧ ಕ್ರಮಕೈಗೊಳ್ಳುತ್ತೇವೆ. ತುರ್ತು ಪ್ರಯಾಣ ಹಾಗೂ ಅನುಮತಿ ನೀಡಲಾಗಿರುವ ಸೇವೆ ಹೊರತುಪಡಿಸಿದರೆ ಬೇರೆ ಯಾವ ವಾಹನಗಳು ಸುಖಾಸುಮ್ಮನೆ‌ ಓಡಾಡುವುದು ಕಂಡು ಬಂದರೆ, ವಾಹನಗಳನ್ನು ಜಪ್ತಿ ಮಾಡುತ್ತೇವೆ. ನಗರದ ಆಯಾ ವಿಭಾಗದ ಪೊಲೀಸರು ಆಯ್ದ ಕಡೆಗಳಲ್ಲಿ ನಾಕಾಬಂದಿ ಹಾಕಿ ಪೊಲೀಸರು ತಪಾಸಣೆ ಮಾಡಲಿದ್ದಾರೆ ಎಂದು ಪೊಲೀಸ್​ ಆಯುಕ್ತರು ತಿಳಿಸಿದ್ದಾರೆ.

ಯಾವುದೇ ರೀತಿಯ ಕಾನೂನು ಉಲ್ಲಂಘನೆಗೆ ಅವಕಾಶವಿಲ್ಲ. ಈ ಬಾರಿ ಯಾವುದೇ ಪಾಸ್​ಗಳನ್ನು ನೀಡಲಾಗುವುದಿಲ್ಲ. ತಮ್ಮ ಐಡೆಂಟಿಟಿ ಕಾರ್ಡ್, ಪ್ರಯಾಣದ ಟಿಕೆಟ್​ಗಳು ಸೇರಿ ಸೂಕ್ತವಾದ ದಾಖಲೆ ನೀಡಿದರೆ ಮಾತ್ರ ಓಡಾಡುವುದಕ್ಕೆ ಅನುಮತಿ ನೀಡಲಾಗುವುದು ಎಂದರು.

ಸೂಕ್ತ ದಾಖಲೆಗಳು ಇಲ್ಲದಿದ್ದರೆ ಅವರ ವಿರುದ್ಧ ಕ್ರಮಕೈಗೊಳ್ಳುತ್ತೇವೆ. ಹೀಗಾಗಿ, ಜನ ವಿನಾಕಾರಣ ಹೊರಗೆ ಬರಬಾರದು. ಪೊಲೀಸರ ಜೊತೆ ಸಹಕಾರ ಕೊಡಬೇಕು ಎಂದು ಕೋರಿದ್ದಾರೆ.

ಇದನ್ನೂ ಓದಿ: 2021ರಲ್ಲಿ ಬೆಂಗಳೂರಿನಲ್ಲಿ ‌ಕಡಿಮೆ ಅಪರಾಧ ಪ್ರಕರಣಗಳು ದಾಖಲು : ಕಮಲ್‌ ಪಂತ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.