ETV Bharat / city

ಬೆಂಗಳೂರಲ್ಲಿ ಬೆಳ್ಳಂಬೆಳಗ್ಗೆ ರೌಡಿಶೀಟರ್​ ಮನೆಗಳ ಮೇಲೆ ಪೊಲೀಸರಿಂದ ದಾಳಿ, ಹಲವರು ವಶಕ್ಕೆ - ಬೆಂಗಳೂರು ರೌಡಿಶೀಟರ್​,

ಕೆಲ ದಿನಗಳ ಹಿಂದಷ್ಟೇ ನಗರದಲ್ಲಿ ಸಿಸಿಬಿ ಪೊಲೀಸರು ರೌಡಿ ಶೀಟರ್​ ಮನೆಗಳ ಮೇಲೆ ದಾಳಿ ನಡೆಸಿದ್ದರು. ಇಂದು ಬೆಳ್ಳಂಬೆಳಗ್ಗೆ ರೌಡಿ ಶೀಟರ್​ಗಳ ಮನೆ ಮೇಲೆ ಪೊಲೀಸರು ದಾಳಿ ನಡೆಸಿ ಅನೇಕರನ್ನು ವಶಕ್ಕೆ ಪಡೆದಿದ್ದಾರೆ.

Police Raid continue on rowdy sheeters home, Police Raid continue on rowdy sheeters home in Bangalore, Bangalore rowdy Sheeters, Bangalore Rowdy Sheeters news, ರೌಡಿಶೀಟರ್​ ಮನೆಗಳ ಮೇಲೆ ಪೊಲೀಸರಿಂದ ಮುಂದುವರಿದ ದಾಳಿ, ಬೆಂಗಳೂರಿನಲ್ಲಿ ರೌಡಿಶೀಟರ್​ ಮನೆಗಳ ಮೇಲೆ ಪೊಲೀಸರಿಂದ ಮುಂದುವರಿದ ದಾಳಿ, ಬೆಂಗಳೂರು ರೌಡಿಶೀಟರ್​, ಬೆಂಗಳೂರು ರೌಡಿ ಶೀಟರ್​ ಸುದ್ದಿ,
ಬೆಳ್ಳಂಬೆಳಗ್ಗೆ ರೌಡಿಶೀಟರ್​ ಮನೆಗಳ ಮೇಲೆ ಪೊಲೀಸರಿಂದ ದಾಳಿ, ಹಲವರು ವಶ
author img

By

Published : Jul 31, 2021, 8:16 AM IST

Updated : Jul 31, 2021, 9:02 AM IST

ಬೆಂಗಳೂರು: ಕೆಲ ದಿನಗಳ ಹಿಂದಷ್ಟೇ ನಗರದಲ್ಲಿ 2 ಸಾವಿರಕ್ಕೂ ಹೆಚ್ಚು ರೌಡಿ ಮನೆಗಳ ಮೇಲೆ ದಾಳಿ ಮಾಡಿದ್ದ ಪೊಲೀಸರು, ಮುಂದುವರಿದ ಭಾಗವಾಗಿ ಅಪರಾಧ ಚಟುವಟಿಕೆಯಲ್ಲಿ ಸಕ್ರಿಯರಾಗಿದ್ದ ರೌಡಿಗಳ ಮನೆ ಮೇಲೆ ಆಗ್ನೇಯ ವಿಭಾಗದ ಪೊಲೀಸರು ದಾಳಿ ನಡೆಸಿದ್ದಾರೆ.

ಬೆಳ್ಳಂಬೆಳಗ್ಗೆ ರೌಡಿಶೀಟರ್​ ಮನೆಗಳ ಮೇಲೆ ಪೊಲೀಸರಿಂದ ದಾಳಿ, ಹಲವರು ವಶ

ಈ ಹಿಂದಿನ ದಾಳಿಯಲ್ಲಿ ತಲೆ ಮರೆಸಿಕೊಂಡಿದ್ದ ರೌಡಿಶೀಟರ್​ಗಳಿಗೆ ಬೆಳ್ಳಂ ಬೆಳಗ್ಗೆ ಪೊಲೀಸರು ಶಾಕ್​ ನೀಡಿದ್ದಾರೆ. ಆಡುಗೋಡಿ ಪೊಲೀಸ್​ ಠಾಣಾ ವ್ಯಾಪ್ತಿಯ 63 ರೌಡಿಶೀಟರ್​ಗಳ ಮನೆ ಮೇಲೆ ಆಗ್ನೇಯ ವಿಭಾಗ ಪೊಲೀಸರು ದಾಳಿ ನಡೆಸಿ ಪರಿಶೀಲನೆ ಕೈಗೊಂಡಿದ್ದಾರೆ.

ಕುಖ್ಯಾತ ರೌಡಿ ಆಸಾಮಿಗಳಾದ ಸುಜೀತ್, ತೇಜಸ್, ಕಿಶೋರ್, ಸುರೇಶ್, ಅತಾವುಲ್ಲಾ, ಆನಂದ್, ಗೌತಮ್, ಮಣಿಕಾಂತ್, ಆನಂದ್ ಅಲಿಯಾಸ್ ಬ್ರಿಡ್ಜ್, ಶಿವ ಅಲಿಯಾಸ್ ಹಂದಿ ಶಿವ, ಅಂಬರೀಶ್, ಗೆಜ್ಜೆ ವೆಂಕಟೇಶ್ ಸೇರಿದಂತೆ 63 ರೌಡಿ ಶೀಟರ್​ಗಳ ಮನೆಗಳ ಮೇಲೆ ಪೊಲೀಸರು ದಾಳಿ ನಡೆಸಿ ಪರಿಶೀಲನೆ ಕೈಗೊಂಡಿದ್ದಾರೆ.

ಆಗ್ನೇಯ ವಿಭಾಗದ ಡಿಸಿಪಿ ಶ್ರೀನಾಥ್ ಜೋಷಿ ನೇತೃತ್ವದಲ್ಲಿ ನಡೆದ ದಾಳಿಯಲ್ಲಿ 18 ರೌಡಿಶೀಟರ್​ಗಳನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ಕೈಗೊಂಡಿದ್ದಾರೆ. ಇನ್ನಷ್ಟು ಮಾಹಿತಿ ಲಭ್ಯವಾಗಬೇಕಿದೆ.

Last Updated : Jul 31, 2021, 9:02 AM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.