ಬೆಂಗಳೂರು: ಹೊಸ ವರ್ಷಾಚರಣೆಯ ಪ್ರಯುಕ್ತ ನಗರದ ಇಂದಿರಾನಗರ ನೂರು ಅಡಿ ರಸ್ತೆಯಲ್ಲಿ ಹೆಚ್ಚಿನ ಜನರು ಸೇರುವ ಸಾಧ್ಯತೆಯಿದ್ದು, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಲು ಜೀವನ್ ಭೀಮಾನಗರ ಪೊಲೀಸರು ಮುಂದಾಗಿದ್ದಾರೆ.
ನಗರ ಪೊಲೀಸರು ಕಟ್ಟುನಿಟ್ಟಿನ ಕ್ರಮಕೈಗೊಳ್ಳುತ್ತಿದ್ದು, ಸಂಭ್ರಮದ ಹೆಸರಲ್ಲಿ ಅಪರಾಧ ಪ್ರಕರಣಗಳು ಹೆಚ್ಚಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಬಿಗಿ ಬಂದೋಬಸ್ತ್ ಕೈಗೊಂಡಿದ್ದಾರೆ.
ಇದನ್ನೂ ಓದಿ: ಸಂಜೆ 6ರಿಂದ ಅಲ್ಲ, ಮಧ್ಯಾಹ್ನದಿಂದಲೇ ಬೆಂಗಳೂರಿನಲ್ಲಿ ನಿಷೇಧಾಜ್ಞೆ..!
ಬುಧವಾರ ಜೀವನ್ಭೀಮಾ ನಗರ ವ್ಯಾಪ್ತಿಯ ಸುಮಾರು 35 ರೌಡಿಗಳ ಮನೆ ಮೇಲೆ ಏಕಕಾಲಕ್ಕೆ ದಾಳಿ ಮಾಡಿ, ನಂತರ ಠಾಣೆಗೆ ಕರೆತಂದು ಎಚ್ಚರಿಕೆ ನೀಡಿದ್ದಾರೆ. ಅಹಿತಕರ ಘಟನೆ ನಡೆಸಿದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ತಾಕೀತು ಮಾಡಿದ್ದಾರೆ.
ಜೀವನ್ ಭೀಮಾನಗರ ಇನ್ಸ್ಪೆಕ್ಟರ್ ಅನಿಲ್ ಕುಮಾರ್ ನೇತೃತ್ವದಲ್ಲಿ ದಾಳಿ ನಡೆದಿದ್ದು, ಹಲವು ಸಿಬ್ಬಂದಿ ಸಾಥ್ ನೀಡಿದ್ದಾರೆ.