ETV Bharat / city

ರೇಖಾ ಕದಿರೇಶ್ ಹತ್ಯೆ: ಇದು ಪಕ್ಕಾ ಪ್ಲಾನ್​​ ಮರ್ಡರ್​​ ಎನ್ನುತ್ತಿವೆ ಪೊಲೀಸ್​ ಮೂಲಗಳು..! - ರೇಖಾ ಕದಿರೇಶ್ ಕೊಲೆ ಪ್ರಕರಣದ ತನಿಖೆ

ರೇಖಾ ಕದಿರೇಶ್​ ಅವರು ತಮ್ಮ ನಿವಾಸದ ಮುಂದೆ ಅನ್ನದಾನ ಮಾಡುತ್ತಿದ್ದರು. ಏಕಾಏಕಿ ದುಷ್ಕರ್ಮಿಗಳು ಮಾರಣಾಂತಿಕ ಹಲ್ಲೆ ನಡೆಸಿ ಕೊಲೆ ಮಾಡಿ ಪರಾರಿಯಾಗಿದ್ದಾರೆ. ಗಾಯಗೊಂಡಿದ್ದ ಮಾಜಿ ಕಾರ್ಪೊರೇಟರ್​​ನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ತೀವ್ರ ರಕ್ತಸ್ರಾವದಿಂದಾಗಿ ಸಾವನ್ನಪ್ಪಿದ್ದಾರೆ. ಕಚೇರಿ ಬಳಿಯ ಒಟ್ಟು 7 ಸಿಸಿಟಿವಿ ಕ್ಯಾಮರಾಗಳನ್ನು ಮೇಲಕ್ಕೆ ತಿರುಗಿಸಿ ಹತ್ಯೆ ನಡೆಸಲಾಗಿದ್ದು, ಇದೊಂದು ಪೂರ್ವ ನಿಯೋಜಿತ ಕೃತ್ಯ ಎಂಬ ಶಂಕೆ ವ್ಯಕ್ತವಾಗಿದೆ.

rekha-kadiresh-murder-case
ರೇಖಾ ಕದಿರೇಶ್ ಹತ್ಯೆ
author img

By

Published : Jun 24, 2021, 3:42 PM IST

Updated : Jun 24, 2021, 5:01 PM IST

ಬೆಂಗಳೂರು: ಮಾಜಿ ಕಾರ್ಪೊರೇಟರ್ ರೇಖಾ ಕದಿರೇಶ್ ಕೊಲೆ ಪ್ರಕರಣದ ತನಿಖೆ ಚರುಕು ಪಡೆದುಕೊಂಡಿದೆ. ಡಿಸಿಪಿ ಸಂಜೀವ್ ಪಾಟೀಲ್, ಹೆಚ್ಚುವರಿ ಪೊಲೀಸ್ ಆಯುಕ್ತ ಮುರುಗನ್ ಸೇರಿದಂತೆ ಉನ್ನತ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಹಲವು ಸ್ಥಳೀಯರನ್ನು ವಿಚಾರಣೆಗೆ ಒಳಪಡಿಸಲಾಗುತ್ತಿದೆ.

ಪ್ರಕರಣದಲ್ಲಿ ಒಟ್ಟು 7 ಸಿಸಿಟಿವಿ ಕ್ಯಾಮರಾಗಳನ್ನು ತಿರುಗಿಸಿ ಜಖಂಗೊಳಿಸಿರುವುದು ತನಿಖೆ ವೇಳೆ ಕಂಡುಬಂದಿದೆ. ಇದೊಂದು ಪಕ್ಕಾ ಪ್ಲಾನ್ ಮರ್ಡರ್​ ಎಂದು ಪೊಲೀಸರು ಬಲವಾಗಿ ಶಂಕೆ ವ್ಯಕ್ತಪಡಿಸುತ್ತಿದ್ದಾರೆ.

ರೇಖಾ ಕದಿರೇಶ್ ಹತ್ಯೆ ಪಕ್ಕಾ ಪ್ಲಾನ್​​ ಮರ್ಡರ್

ಕೊರೊನಾ ಹಿನ್ನೆಲೆಯಲ್ಲಿ ತಮ್ಮ ನಿವಾಸದ ಬಳಿಯ ಕಚೇರಿ ಮುಂದೆ ರೇಖಾ ಕದಿರೇಶ್​ ಅವರು ಅನ್ನದಾನ ಮಾಡುತ್ತಿದ್ದರು. ಏಕಾಏಕಿ ದುಷ್ಕರ್ಮಿಗಳು ಮಾರಣಾಂತಿಕ ಹಲ್ಲೆ ನಡೆಸಿ, ಅಲ್ಲಿಂದ ಪರಾರಿಯಾಗಿದ್ದಾರೆ. ಗಾಯಗೊಂಡಿದ್ದ ಮಾಜಿ ಕಾರ್ಪೊರೇಟರ್​​ನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ತೀವ್ರ ರಕ್ತಸ್ರಾವದಿಂದಾಗಿ ಸಾವನ್ನಪ್ಪಿದ್ದಾರೆ. ಕಚೇರಿ ಬಳಿಯ 7 ಸಿಸಿಟಿವಿ ಕ್ಯಾಮರಾಗಳನ್ನು ಮೇಲಕ್ಕೆ ತಿರುಗಿಸಿ ಹತ್ಯೆ ನಡೆಸಲಾಗಿದ್ದು, ಇದೊಂದು ಪೂರ್ವ ನಿಯೋಜಿತ ಕೊಲೆ ಎಂದು ಹೇಳಾಗುತ್ತಿದೆ.

ಓದಿ-ರೇಖಾ ಕದಿರೇಶ್ Murder Case: ಆರೋಪಿಗಳ ಪತ್ತೆಗಾಗಿ ವಿಶೇಷ ತಂಡ ರಚಿಸಿ ತನಿಖೆ ಚುರುಕು

ಮನೆಗೆ ಹೊಂದಿಕೊಂಡಂತಿರುವ ತಮ್ಮ ಕಚೇರಿ ಬಳಿ ಆಹಾರ ಪೊಟ್ಟಣ ಹಂಚುವಾಗ ಇಬ್ಬರು ದುಷ್ಕರ್ಮಿಗಳು ಏಕಾಏಕಿ‌ ಮಾರಕಾಸ್ತ್ರಗಳಿಂದ ಕುತ್ತಿಗೆ ಹಾಗೂ ತಲೆಗೆ ಗಂಭೀರವಾಗಿ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ. ತೀವ್ರ ರಕ್ತಸ್ರಾವದಿಂದ ಕುಸಿದು ಬಿದ್ದ ರೇಖಾರನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಲಾಗಿತ್ತು ಎಂದು ಕಾಟನ್ ಪೇಟೆ ಪೊಲೀಸರಿಗೆ ತಿಳಿಸಿದ್ದರು.

ಓದಿ-ಬೆಂಗಳೂರಲ್ಲಿ ಮಹಿಳಾ ಮಾಜಿ ಕಾರ್ಪೊರೇಟರ್​ ಬರ್ಬರ ಹತ್ಯೆ.. ಅಂದು ಪತಿ, ಇಂದು ಪತ್ನಿಯ​ ಕೊಲೆ!

ಸ್ಥಳಕ್ಕೆ ಬಂದ ಹೆಚ್ಚುವರಿ ಪೊಲೀಸ್ ಆಯುಕ್ತ ಮುರುಗನ್, ಡಿ.ಸಿ.ಪಿ ಸಂಜೀವ್ ಪಾಟೀಲ್ ಘಟನೆ ಬಗ್ಗೆ ಮಾಹಿತಿ ಪಡೆದು ಪರಿಶೀಲನೆ ನಡೆಸುತ್ತಿದ್ದಾರೆ. ಅಲ್ಲದೆ ಎಫ್ಎಸ್ಎಲ್ ತಂಡ ಸ್ಥಳದಲ್ಲಿಯೇ ಬೀಡುಬಿಟ್ಟಿದೆ.

ಕೊಲೆಗೆ ಕಾರಣ ಏನು..?

2018 ರಲ್ಲಿ‌ ಕಾರ್ಪೊರೇಟರ್ ಆಗಿದ್ದ ಕದಿರೇಶ್​ನನ್ನು ನಡುರಸ್ತೆಯಲ್ಲಿ ದುಷ್ಕರ್ಮಿಗಳು ಹತ್ಯೆಗೈದಿದ್ದರು. ಅದಾದ ಬರೋಬ್ಬರಿ ಮೂರು ವರ್ಷದ ಬಳಿಕ ರೇಖಾ ಅವರನ್ನು ಕೊಲೆ ಮಾಡಲಾಗಿದೆ. ರಾಜಕೀಯ ಹಾಗೂ ಕೌಟುಂಬಿಕ ಕಲಹ ಈ ಘಟನೆಗೆ ಕಾರಣ ಎನ್ನಲಾಗುತ್ತಿದ್ದು, ಈವರೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಬಗ್ಗೆ ಸ್ಥಳೀಯರಿಂದ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ.

ಕೊಲೆ ಮಾಡುವ ಉದ್ದೇಶದಿಂದ ಕಚೇರಿ ಮುಂದೆ ಅಳವಡಿಸಿದ್ದ ಸಿಸಿಟಿವಿ ಕ್ಯಾಮರಾವನ್ನು ಮೇಲಕ್ಕೆ ತಿರುಗಿಸಿರುವುದು ಮೆಲ್ನೋಟಕ್ಕೆ ಕೊಲೆಗೆ ಸಂಚು ರೂಪಿಸಿರುವುದು ಪರಿಚಯಸ್ಥರೇ ಅನ್ನುವಂತಿದೆ. ರೇಖಾ ಕದಿರೇಶ್ ಜೊತೆಗಿದ್ದ ಪೀಟರ್ ಮತ್ತು ತಂಡ ಈ ಕೊಲೆ ಮಾಡಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸುತ್ತಿದ್ದಾರೆ. ಈ ಘಟನೆ ಕುರಿತು ಕಾಟಾನ್​ಪೇಟೆ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

Last Updated : Jun 24, 2021, 5:01 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.